ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಿಮ್ಮನೆ ರತ್ನಾಕರ ಅವರ ಹೆಸರಿಗೆ ಆರಗ ಜ್ಞಾನೇಂದ್ರ ಅವರು ಮಸಿ ಬಳೆಯುವ ಪ್ರಯತ್ನ ಮಾಡುತ್ತಿದ್ದಾರೆ: ರಮೇಶ್ ಬಾಬು

|
Google Oneindia Kannada News

ಬೆಂಗಳೂರು,ಜನವರಿ 13: ಪಿಎಸ್ಐ ನೇಮಕಾತಿ ಅಕ್ರಮದ ಪ್ರಮುಖ ಆರೋಪಿ ದಿವ್ಯ ಹಾಗರಗಿ, ಸ್ಯಾಂಟ್ರೋ ರವಿ ಅವರ ಜೊತೆ ಸೇರಿ ವರ್ಗಾವಣೆ ದಂದೆ ಮಾಡಿರುವ ಆರೋಪ ಹೊತ್ತಿರುವ ಅರಗ ಜ್ಞಾನೇಂದ್ರ ಅವರು ಈಗ ಕಿಮ್ಮನೆ ರತ್ನಾಕರ ಅವರ ಹೆಸರಿಗೆ ಮಸಿ ಬಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ ರಮೇಶ್ ಬಾಬು ಹೇಳಿದರು.

ಮಕರ ಸಂಕ್ರಾಂತಿ ವಿಶೇಷ ಪುಟ

ಈ ಕುರಿತು ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ನಾನಿಂದು ಅರಗ ಜ್ಞಾನೇಂದ್ರ ಅವರ ರಾಜೀನಾಮೆಗೆ ಅಗ್ರಹಿಸುವುದಿಲ್ಲ. ಅವರು ನೈತಿಕತೆ ಇಟ್ಟುಕೊಂಡು ರಾಜಕಾರಣ ಮಾಡಿದ್ದರೆ ಅವರು ರಾಜೀನಾಮೆ ನೀಡುತ್ತಿದ್ದರು. ಆದರೆ ಅವರು ನೈತಿಕತೆ ಕಳೆದುಕೊಂಡಿದ್ದು, ಮುಖ್ಯಮಂತ್ರಿಗಳಿಗೆ ಸ್ವಲ್ಪವಾದರೂ ನೈತಿಕತೆ, ಉಳಿದಿದ್ದರೆ ಅವರು ಕೂಡಲೇ ಅರಗ ಜ್ಞಾನೇಂದ್ರ ಅವರನ್ನು ಸಂಪುಟದಿಂದ ವಜಾ ಗೊಳಿಸಬೇಕು ಎಂದು ಕೇಳುತ್ತೇನೆ ಎಂದರು.

Breaking: ಪಿಎಸ್ಐ ನೇಮಕಾತಿ ಹಗರಣ: ದಿವ್ಯಾ ಹಾಗರಗಿ ಸೇರಿ 26 ಮಂದಿಗೆ ಜಾಮೀನುBreaking: ಪಿಎಸ್ಐ ನೇಮಕಾತಿ ಹಗರಣ: ದಿವ್ಯಾ ಹಾಗರಗಿ ಸೇರಿ 26 ಮಂದಿಗೆ ಜಾಮೀನು

ಅರಗ ಜ್ಞಾನೇಂದ್ರ ಅವರು ಗೃಹ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಮೊದಲ ದಿನದಿಂದ ಇಲ್ಲಿಯವರೆಗೂ ಒಂದಲ್ಲ ಒಂದು ರೀತಿಯ ಹಗರಣಗಳನ್ನು ಮಾಡಿಕೊಂಡು ಬಂದಿದ್ದಾರೆ. ಆರಂಭದಲ್ಲಿ ಪೊಲೀಸರನ್ನು ನಿಂದಿಸಿ ಅವರ ನೈತಿಕ ಸ್ಥೈರ್ಯವನ್ನು ಕುಗ್ಗಿಸಿದರು. ಪಿ ಎಸ್ ಐ ನೇಮಕಾತಿ ಅಕ್ರಮದ ಪ್ರಮುಖ ಆರೋಪಿ ದಿವ್ಯ ಹಾಗರಗಿ ಅವರ ನಿವಾಸಕ್ಕೆ ಭೇಟಿ ನೀಡಿ ಈ ಅಕ್ರಮ ನಡೆಸಲು ಎಲ್ಲಾ ರೀತಿಯ ಸಹಕಾರವನ್ನು ನೀಡಿದ್ದಾರೆ.

Ramesh Babu Said that Araga Gnanendra Of Smearing Kimmane Ratnakars Name

ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರು ಇಂತಹ ಹಗರಣದಲ್ಲಿ ಸಿಲುಕಿ ಅಮಾನತುಗೊಂಡಿರುವ ಪರಿಸ್ಥಿತಿ ನಿರ್ಮಾಣವಾಗಿರುವುದಕ್ಕೆ ಅರಗ ಜ್ಞಾನೇಂದ್ರ ಅವರೇ ಕಾರಣ. ನಂತರ ಜೆಜಿ ನಗರದಲ್ಲಿ ನಡೆದ ಸಣ್ಣ ಗಲಭೆಗೆ ಕೋಮು ಗಲಭೆಯ ಬಣ್ಣವನ್ನು ನೀಡುವ ಪ್ರಯತ್ನ ಮಾಡಿದರು. ಆಗಿನ ಪೊಲೀಸ್ ಆಯುಕ್ತರು ಇದು ಸ್ಥಳೀಯವಾಗಿ ನಡೆದಿರುವ ಗಲಾಟೆ ಎಂದು ಆಯುಕ್ತರು ಸ್ಪಷ್ಟಪಡಿಸಿದ್ದರು, ಅವರಿಗಿಂತ ಮುಂಚಿತವಾಗಿ ಗೃಹ ಸಚಿವರು ಇದು ಸಮುದಾಯಗಳ ನಡುವಿನ ಕೋಮುಗಲಭೆ ಎಂದು ಹೇಳಿಕೆ ನೀಡಿದ್ದರು.

ಇಷ್ಟೆಲ್ಲಾ ಆರೋಪ ಹೊತ್ತಿರುವ ಗೃಹ ಸಚಿವರು ಈಗ ಮಂಗಳೂರು ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಮ್ಮನೆ ರತ್ನಾಕರವರ ಪಾತ್ರವಿದೆ ಹೀಗಾಗಿ ಎನ್ಐಎ ಅಧಿಕಾರಿಗಳು ಕಿಮ್ಮನೆ ರತ್ನಾಕರ ಅವರ ಮನೆ ಮೇಲೆ ದಾಳಿ ನಡೆಸಿದ್ದಾರೆ ಎಂಬ ಆರೋಪದ ಸುದ್ದಿಗಳನ್ನು ಹರಡುವ ಪ್ರಯತ್ನ ಮಾಡಿದ್ದಾರೆ. ಸಂಘ ಪರಿವಾರದಿಂದ ಬಂದಿರುವ ಅರಗ ಜ್ಞಾನೇಂದ್ರ ಅವರು ಕೆಲವು ಮೌಲ್ಯಗಳನ್ನು ಪ್ರತಿಪಾದನೆ ಮಾಡುತ್ತಿದ್ದಾರೆ ಎಂದು ಅವರ ಮೇಲೆ ಗೌರವವನ್ನು ಇಟ್ಟುಕೊಂಡಿದ್ದೆ. ಆದರೆ ಅವರು ಜನರಿಗೆ ವಿರೋಧವಾಗಿ ರಾಜ್ಯದಲ್ಲಿ ಹಲವು ಅಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಈ ರಾಜ್ಯದಲ್ಲಿ ಮಹಿಳೆಯರು, ದಲಿತರು, ಜನಸಾಮಾನ್ಯರ ಮೇಲಿನ ದೌರ್ಜನ್ಯ ಪ್ರತಿನಿತ್ಯ ಹೆಚ್ಚಾಗಿದ್ದು, ರಾಜ್ಯದಲ್ಲಿ ರೌಡಿಗಳು ಹಾಗೂ ಗೂಂಡಾಗಳು ವಿಜೃಂಭಿಸುತ್ತಿದ್ದಾರೆ. ಸಮಾಜದಲ್ಲಿ ಕೊಲೆಗಳು ಹೆಚ್ಚಾಗುತ್ತಿವೆ. ಹೀಗೆ ಗೃಹ ಸಚಿವರಾಗಿ ಅರಗ ಜ್ಞಾನೇಂದ್ರ ಅವರು ಸಂಪೂರ್ಣ ವೈಫಲ್ಯವನ್ನು ಅನುಭವಿಸಿದ್ದಾರೆ. ಅವರು ತಮ್ಮ ಈ ವೈಫಲ್ಯವನ್ನು ಒಪ್ಪಿಕೊಳ್ಳಬೇಕಾಗಿದೆ.

Ramesh Babu Said that Araga Gnanendra Of Smearing Kimmane Ratnakars Name

ಅರಗ ಜ್ಞಾನೇಂದ್ರ ಅವರು ತಮ್ಮ ಕ್ಷೇತ್ರದಲ್ಲೂ ಇಂತಹ ಅವಾಂತರಗಳಿಗೆ ಅವಕಾಶ ನೀಡಿದ್ದಾರೆ. 2018ರಲ್ಲಿ ಲಿಸ್ಟ್ ಮೂಲಕ ಕಾಂಗ್ರೆಸ್ ಪಕ್ಷ ಆ ಕಚೇರಿಯನ್ನು ಬಾಡಿಗೆ ಪಡೆದಿದ್ದು, ಅದು ಬಾಂಬ್ ಬ್ಲಾಸ್ಟ್ ಆರೋಪಿಯ ಕುಟುಂಬಕ್ಕೆ ಸೇರಿದ ಆಸ್ತಿ ಎಂಬ ನೆಪವನ್ನು ಇಟ್ಟುಕೊಂಡು ಕಿಮ್ಮನೆ ರತ್ನಾಕರ ಅವರ ಮನೆ ಮೇಲೆ ಎನ್ನಯ್ಯ ದಾಳಿ ನಡೆಸಿದೆ ಎಂಬ ರೀತಿಯಲ್ಲಿ ವ್ಯವಸ್ಥಿತವಾದ ಸುಳ್ಳು ಪ್ರಚಾರವನ್ನು ಮಾಡಿದ್ದಾರೆ.

ತೀರ್ಥಹಳ್ಳಿಯಲ್ಲಿ ಅರಗ ಜ್ಞಾನೇಂದ್ರ ಅವರು ಕ್ಷೇತ್ರದ ಸಂಪೂರ್ಣ ಅಧಿಕಾರವನ್ನು ತಮ್ಮ ಮಗನಿಗೆ ನೀಡಿದ್ದು, ಅಲ್ಲಿ ರಿಯಲ್ ಎಸ್ಟೇಟ್ ಹಾಗೂ ಮರಳು ದಂಧೆಗಳು ಹೆಚ್ಚಾಗಿ ನಡೆಯುತ್ತಿವೆ. ತಮ್ಮ ಅಳಿಯನನ್ನು ಬಳಸಿಕೊಂಡು ಕ್ಷೇತ್ರದಲ್ಲಿ ರಿಯಲ್ ಎಸ್ಟೇಟ್ ಲಾಭಿಗಳನ್ನು ಮಾಡುತ್ತಿದ್ದಾರೆ.

ಚುನಾವಣೆಗೆ ಕೆಲವೇ ಕೆಲವು ದಿನಗಳು ಬಾಕಿ ಇರುವ ಸಮಯದಲ್ಲಿ ಸಜ್ಜನ ರಾಜಕಾರಣಿ ಕಿಮ್ಮನೆ ರತ್ನಾಕರ ಅವರಿಗೆ ಮಸಿ ಬಳೆಯುವಂತಹ ಪ್ರಯತ್ನ ಮಾಡುತ್ತಿದ್ದಾರೆ. ಅರಗ ಜ್ಞಾನೇಂದ್ರ ಅವರು 1983, 85 ಹಾಗೂ 1989 ರಲ್ಲಿ ಚುನಾವಣೆಯಲ್ಲಿ ಸೋತಿದ್ದರು. ಈಗ ಜನ ಆಶೀರ್ವಾದ ಮಾಡಿ ಗೆಲುವು ಸಾಧಿಸಿ ಗೃಹ ಸಚಿವ ಸ್ಥಾನವನ್ನು ಅಲಂಕರಿಸಿದ್ದೀರಿ, ಈ ಅಧಿಕಾರ ಸಿಕ್ಕ ಅವಧಿಯಲ್ಲಿ ನೀವು ಕಾನೂನು ಸುವ್ಯವಸ್ಥೆ ಬಲಪಡಿಸಿ, ಜನರಲ್ಲಿ ವಿಶ್ವಾಸ ತುಂಬಿ, ಸರ್ಕಾರಕ್ಕೆ ಶಕ್ತಿಯನ್ನು ನೀಡಬೇಕು. ಅದನ್ನು ಬಿಟ್ಟು ಪಿಎಸ್ಐ, ವರ್ಗಾವಣೆ ದಂಧೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

English summary
Ramesh Babu Said that Araga Gnanendra Of Smearing Kimmane Ratnakar's Name
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X