ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಮೇಶ್ ಅಸಹಜ ಸಾವು; ಸರ್ಕಾರಕ್ಕೆ ಪರಮೇಶ್ವರ ಮನವಿ ಏನು?

|
Google Oneindia Kannada News

ಬೆಂಗಳೂರು, ಅಕ್ಟೋಬರ್ 15 : "ರಮೇಶ್ ಸಾವಿನ ಕುರಿತು ಹಲವು ಗೊಂದಲಗಳು ಉಂಟಾಗಿವೆ. ಯಾವುದಾದರೂ ತನಿಖಾ ಸಂಸ್ಥೆ ಮೂಲಕ ಈ ಕುರಿತು ಸಮಗ್ರವಾದ ತನಿಖೆ ನಡೆಸಬೇಕು" ಎಂದು ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಹೇಳಿದರು.

Recommended Video

G Parameshwara House Raided 4Crores In Cash Recovered | Oneindia Kannada

ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ಪರಮೇಶ್ವರ, "ರಮೇಶ್ ಸಾವಿನ ಬಗ್ಗೆ ಹಲವು ಸುದ್ದಿಗಳನ್ನು ಹಬ್ಬಿಸಲಾಗುತ್ತಿದೆ. ನಾನೇ ಕೊಲ್ಲಿಸಿದ್ದೇನೆ ಎಂದು ಕೆಲವು ನಾಯಕರು ಹೇಳಿಕೆ ನೀಡಿದ್ದಾರೆ" ಎಂದರು.

ರಮೇಶ್ ಅಸಹಜ ಸಾವು; ಕೊನೆ ಎರಡು ಕರೆ, ಡೈರಿಯಲ್ಲಿ ಏನಿದೆ? ರಮೇಶ್ ಅಸಹಜ ಸಾವು; ಕೊನೆ ಎರಡು ಕರೆ, ಡೈರಿಯಲ್ಲಿ ಏನಿದೆ?

"ರಮೇಶ್ ಸಾವಿನ ಕುರಿತು ಹಲವು ಗೊಂದಲಗಳು ಉಂಟಾಗಿವೆ. ಆದ್ದರಿಂದ, ಸರ್ಕಾರ ಮತ್ತು ಗೃಹ ಸಚಿವರಿಗೆ ಮನವಿ ಮಾಡುವೆ. ಯಾವುದಾದರೂ ಸಂಸ್ಥೆ ಮೂಲಕ ತನಿಖೆ ಮಾಡಿಸಿ" ಎಂದು ಪರಮೇಶ್ವರ ಒತ್ತಾಯಿಸಿದರು.

ರಮೇಶ್ ಸಾವು ಅಸಹಜ, ಮೊಬೈಲ್ ಕರೆ ಜಾಡು ಹಿಡಿದ ಪೊಲೀಸರು ರಮೇಶ್ ಸಾವು ಅಸಹಜ, ಮೊಬೈಲ್ ಕರೆ ಜಾಡು ಹಿಡಿದ ಪೊಲೀಸರು

G Parameshwara

ಶನಿವಾರ ರಮೇಶ್ ಶವ ಬೆಂಗಳೂರು ವಿಶ್ವವಿದ್ಯಾಲಯ ಕ್ಯಾಂಪಸ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ರಾಮನಗರದ ಮೆಳೇಹಳ್ಳಿಯಲ್ಲಿ ಮೂಲದ ರಮೇಶ್ ಸಾವು ಅಸಹಜ ಎಂದು ಬೆಂಗಳೂರಿನ ಜ್ಞಾನ ಭಾರತಿ ಠಾಣೆ ಪೊಲೀಸರು ಎಫ್‌ಐಆರ್ ದಾಖಲು ಮಾಡಿಕೊಂಡಿದ್ದಾರೆ.

ರಮೇಶ್ ಕೊನೆ ಮಾತು ನೆನಪಿಸಿಕೊಂಡ ಜಿ. ಪರಮೇಶ್ವರ ರಮೇಶ್ ಕೊನೆ ಮಾತು ನೆನಪಿಸಿಕೊಂಡ ಜಿ. ಪರಮೇಶ್ವರ

ರಮೇಶ್ ನಿಗೂಢ ಸಾವಿನ ಕುರಿತು ತನಿಖೆ ನಡೆಸಲು ವಿಜಯನಗರ ಎಸಿಪಿ ಧರ್ಮೇಂದ್ರ ಮತ್ತು ಕೆಂಗೇರಿ ಗೇಟ್ ಎಸಿಪಿ ಮಂಜುನಾಥ್ ನೇತೃತ್ವದಲ್ಲಿ ಎರಡು ತಂಡಗಳನ್ನು ರಚನೆ ಮಾಡಲಾಗಿದೆ. ರಮೇಶ್ ಫೋನ್ ಕರೆಗಳ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಣೆ ಮಾಡುತ್ತಿದ್ದಾರೆ.

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿ ಮತ್ತು ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯ, "ರಮೇಶ್ ಸಾವು ಸಹಜವಲ್ಲ. ಆತನನ್ನು ಮುಗಿಸಲಾಗಿದೆ. ಆತನ ಸಾವಿಗೆ ಬೇರೆ-ಬೇರೆ ಕಾರಣಗಳು ಇವೆ" ಎಂದು ಆರೋಪ ಮಾಡಿದ್ದರು.

English summary
Former DyCM G.Parameshwara request the Karnataka government to probe the case of Ramesh death case from any agency. Ramesh body found on October 12, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X