ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೌನಕ್ಕೆ ಶರಣಾದ ರಮೇಶ್ ಜಾರಕಿಹೊಳಿ, ವಿದೇಶ ಪ್ರವಾಸ?

|
Google Oneindia Kannada News

Recommended Video

ರಾಜೀನಾಮೆ ಬಾಂಬ್ ಸಿಡಿಸಿ ಯೂರೋಪ್ ಟೂರ್ ಹೊರಟ ರಮೇಶ್ ಜಾರಕಿಹೊಳಿ..!? | Oneindia Kannada

ಬೆಂಗಳೂರು, ಏಪ್ರಿಲ್ 29 : ರಾಜೀನಾಮೆ ನೀಡುವ ಬಾಂಬ್ ಸಿಡಿಸಿದ್ದ ಗೋಕಾಕ್ ಕ್ಷೇತ್ರದ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ಮೌನಕ್ಕೆ ಶರಣಾಗಿದ್ದಾರೆ. ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ ರಮೇಶ್ ಜಾರಕಿಹೊಳಿ ಅವರು ವಿದೇಶ ಪ್ರವಾಸ ಕೈಗೊಳ್ಳಲಿದ್ದಾರೆ.

ಏಪ್ರಿಲ್ 23ರಂದು ಲೋಕಸಭಾ ಚುನಾವಣೆಗೆ ಮತದಾನ ಮಾಡಿದ್ದ ರಮೇಶ್ ಜಾರಕಿಹೊಳಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಏಪ್ರಿಲ್ 24ರಂದು ಬೆಂಗಳೂರಿಗೆ ಆಗಮಿಸಿದ್ದರು. ರಮೇಶ್ ಜಾರಕಿಹೊಳಿ ಬೆಂಗಳೂರು ಭೇಟಿ ಬಾರಿ ಕುತೂಹಲಕ್ಕೆ ಕಾರಣವಾಗಿತ್ತು.

ರಮೇಶ್ ಜಾರಕಿಹೊಳಿಯನ್ನು ಪಕ್ಷಕ್ಕೆ ಆಹ್ವಾನಿಸಿಲ್ಲ : ಯಡಿಯೂರಪ್ಪರಮೇಶ್ ಜಾರಕಿಹೊಳಿಯನ್ನು ಪಕ್ಷಕ್ಕೆ ಆಹ್ವಾನಿಸಿಲ್ಲ : ಯಡಿಯೂರಪ್ಪ

ಬೆಂಗಳೂರಿಗೆ ಬಂದಿದ್ದ ರಮೇಶ್ ಜಾರಕಿಹೊಳಿ ಅವರು, 'ಒಬ್ಬನೇ ರಾಜೀನಾಮೆ ನೀಡಿದರೆ ಏನೂ ಪ್ರಯೋಜನವಿಲ್ಲ. ಒಂದಷ್ಟು ಜನ ಸೇರಿ ರಾಜೀನಾಮೆ ನೀಡುತ್ತೇವೆ. ರಾಜೀನಾಮೆ ನೀಡುವುದಂತೂ ಸತ್ಯ' ಎಂದು ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ್ದರು.

ರಮೇಶ್ ಜಾರಕಿಹೊಳಿ ರಾಜೀನಾಮೆ : ಯಾರು, ಏನು ಹೇಳಿದರು?ರಮೇಶ್ ಜಾರಕಿಹೊಳಿ ರಾಜೀನಾಮೆ : ಯಾರು, ಏನು ಹೇಳಿದರು?

ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಅವರು, 'ಸರ್ಕಾರವನ್ನು ಉಳಿಸಿಕೊಳ್ಳಲು ಎರಡೂ ಪಕ್ಷದವರು ಸಮರ್ಥರಿದ್ದೇವೆ. ಸರ್ಕಾರ ಉರುಳಿಸುವಷ್ಟು ಸಂಖ್ಯಾಬಲ ರಮೇಶ್ ಜಾರಕಿಹೊಳಿ ಅವರ ಬಳಿ ಇಲ್ಲ' ಎಂದು ಹೇಳಿದ್ದರು....

ಸ್ವಲ್ಪ ದಿನದಲ್ಲೇ ಒಳ್ಳೆಯ ಸುದ್ದಿ ಕೊಡ್ತೀನಿ ಎಂದ ರಮೇಶ್ ಜಾರಕಿಹೊಳಿಸ್ವಲ್ಪ ದಿನದಲ್ಲೇ ಒಳ್ಳೆಯ ಸುದ್ದಿ ಕೊಡ್ತೀನಿ ಎಂದ ರಮೇಶ್ ಜಾರಕಿಹೊಳಿ

ಯುರೋಪ್ ಪ್ರವಾಸ?

ಯುರೋಪ್ ಪ್ರವಾಸ?

ಗೋಕಾಕ್ ಕ್ಷೇತ್ರದ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ಅವರು ಒಂದೂವರೆ ತಿಂಗಳ ಯುರೋಪ್ ಪ್ರವಾಸ ಕೈಗೊಳ್ಳಲಿದ್ದಾರೆ ಎಂಬ ಸುದ್ದಿ ಸೋಮವಾರ ಹಬ್ಬಿದೆ. ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಅವರು ವಾಪಸ್ ಆಗಲಿದ್ದಾರೆ ಎಂಬುದು ಸುದ್ದಿ. ಆದರೆ, ಈ ಬಗ್ಗೆ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಮಾಜಿ ಸಿಎಂ ಸಿದ್ದರಾಮಯ್ಯ

ಮಾಜಿ ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿಯಲ್ಲಿ ಸೋಮವಾರ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 'ರಮೇಶ್ ಜಾರಕಿಹೊಳಿ ಅವರ ಮನವೊಲಿಸುವ ಕಾರ್ಯ ನಡೆದಿದೆ. ಆದರೆ, ಅವರ ಮನಃ ಇನ್ನೂ ಸಂಪೂರ್ಣವಾಗಿ ಪರಿವರ್ತನೆ ಆಗಿಲ್ಲ' ಎಂದು ಹೇಳಿದರು.

ಕಾರಣ ಅವರನ್ನೇ ಕೇಳಬೇಕು?

ಕಾರಣ ಅವರನ್ನೇ ಕೇಳಬೇಕು?

ರಮೇಶ್ ಜಾರಕಿಹೊಳಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದು ಏಕೆ?. ಈ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಸತೀಶ್ ಜಾರಕಿಹೊಳಿ ಅವರು ಈ ಕುರುತು ಹೇಳಿಕೆ ನೀಡಿದ್ದು, 'ಆತ ಬಿಜೆಪಿ ಸೇರಲು 10 ಕಾರಣಗಳಿವೆ. ಅಳಿಯ ಅಂಬಿರಾವ್ ಪಾಟೀಲರಿಗೆ ಮಹಾರಾಷ್ಟ್ರದಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದು ಒಂದು ಕಾರಣ. ಇನ್ನೂ 9 ಕಾರಣ ಅವರನ್ನೇ ಕೇಳಿ' ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನಿಂದ ಕಾದು ನೋಡುವ ತಂತ್ರ

ಕಾಂಗ್ರೆಸ್‌ನಿಂದ ಕಾದು ನೋಡುವ ತಂತ್ರ

ಮತ್ತೊಂದು ಕಡೆ ಕಾಂಗ್ರೆಸ್ ಪಕ್ಷದ ನಾಯಕರು ಸಹ ರಮೇಶ್ ಜಾರಕಿಹೊಳಿ ಅವರ ವಿರುದ್ಧ ಕ್ರಮ ಕೈಗೊಳ್ಳಲು ಕಾದುನೋಡುವ ತಂತ್ರ ಅನುಸರಿಸಿದ್ದಾರೆ. ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗುವ ತನಕ ಯಾವುದೇ ತೀರ್ಮಾನ ಕೈಗೊಳ್ಳದಿರಲು ನಿರ್ಧರಿಸಿದ್ದಾರೆ.

ಬಿಜೆಪಿ ನಾಯಕರು ಮೌನ

ಬಿಜೆಪಿ ನಾಯಕರು ಮೌನ

ರಮೇಶ್ ಜಾರಕಿಹೊಳಿ ಅವರ ವಿಚಾರದಲ್ಲಿ ಕರ್ನಾಟಕದ ಬಿಜೆಪಿ ನಾಯಕರು ಮೌನಕ್ಕೆ ಶರಣಾಗಿದ್ದಾರೆ. ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗುವ ತನಕ ಯಾವುದೇ ಹೇಳಿಕೆಯನ್ನು ನೀಡದಿರಲು ತೀರ್ಮಾನಿಸಿದ್ದಾರೆ.

'ರಮೇಶ್ ಜಾರಕಿಹೊಳಿ ಅವರನ್ನು ಬಿಜೆಪಿಗೆ ಆಹ್ವಾನಿಸಿಲ್ಲ' ಎಂದು ರಾಜ್ಯಾ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

English summary
Gokak Congress MLA Ramesh Jarakiholi who announced he will quit MLA post now all set for Europe tour. Ramesh Jarakiholi upset with Karnataka Congress leader.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X