ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಡಿ ಪ್ರಕರಣ; ಗೃಹ ಸಚಿವರಿಗೆ ಕಾಂಗ್ರೆಸ್ ಟ್ವೀಟ್ ಬಾಣ!

|
Google Oneindia Kannada News

ಬೆಂಗಳೂರು, ಮಾರ್ಚ್ 29; ಮಾಜಿ ಸಚಿವ, ಗೋಕಾಕ ಕ್ಷೇತ್ರದ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಸಂತ್ರಸ್ತ ಯುವತಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಸೋಮವಾರ ಪತ್ರವನ್ನು ಬರೆದಿದ್ದಾಳೆ.

ಸಿಡಿ ಪ್ರಕರಣದ ಸಂತ್ರಸ್ತ ಯುವತಿ ವಕೀಲರ ಮೂಲಕ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರಾಗುತ್ತಾಳೆ ಎಂಬ ಸುದ್ದಿಗಳು ಹಬ್ಬಿವೆ. ಮತ್ತೊಂದು ಕಡೆ ಯುವತಿ ನೀಡಿದ ದೂರಿನ ಅನ್ವಯ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿಚಾರಣೆ ನಡೆಯುತ್ತಿದೆ.

Breaking: ಸಿಡಿ ಪ್ರಕರಣ: ಎಸ್‌ಐಟಿ ಮುಂದೆ ಹಾಜರಾದ ರಮೇಶ್ ಜಾರಕಿಹೊಳಿ Breaking: ಸಿಡಿ ಪ್ರಕರಣ: ಎಸ್‌ಐಟಿ ಮುಂದೆ ಹಾಜರಾದ ರಮೇಶ್ ಜಾರಕಿಹೊಳಿ

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆಯನ್ನು ಎಸ್‌ಐಟಿ ನಡೆಸುತ್ತಿದೆ. ಎಸ್‌ಐಟಿ ಪೊಲೀಸರು ಸಿಡಿ ಪ್ರಕರಣದ ಸಂತ್ರಸ್ತೆಯನ್ನು ಪತ್ತೆ ಹಚ್ಚಲು ಪ್ರಯತ್ನವನ್ನು ನಡೆಸುತ್ತಿದ್ದಾರೆ.

ಸಿಡಿಗರ್ಲ್ ಎಂಟ್ರಿಯಿಂದ ರಮೇಶ್ ಜಾರಕಿಹೊಳಿಗೆ ಕಂಟಕ ಎದುರಾಗಲಿದೆಯೇ ? ಸಿಡಿಗರ್ಲ್ ಎಂಟ್ರಿಯಿಂದ ರಮೇಶ್ ಜಾರಕಿಹೊಳಿಗೆ ಕಂಟಕ ಎದುರಾಗಲಿದೆಯೇ ?

ಕರ್ನಾಟಕ ಕಾಂಗ್ರೆಸ್ ಸಿಡಿ ಪ್ರಕರಣದಲ್ಲಿ ಸರಣಿ ಟ್ವೀಟ್‌ಗಳನ್ನು ಮಾಡುತ್ತಿದೆ. ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಿದೆ.

ಡಿಕೆ ಶಿವಕುಮಾರ್ ವಿರುದ್ಧ ಬಳಸಿದ್ದ 'ಅವಾಚ್ಯ' ಪದವನ್ನು ವಾಪಸ್ ಪಡೆದ ರಮೇಶ್ ಜಾರಕಿಹೊಳಿಡಿಕೆ ಶಿವಕುಮಾರ್ ವಿರುದ್ಧ ಬಳಸಿದ್ದ 'ಅವಾಚ್ಯ' ಪದವನ್ನು ವಾಪಸ್ ಪಡೆದ ರಮೇಶ್ ಜಾರಕಿಹೊಳಿ

ಪೊಲೀಸರು ಕಸಕ್ಕೆ ಸಮಾನ

ಪೊಲೀಸರು ಕಸಕ್ಕೆ ಸಮಾನ

"ಯುವತಿ ತನ್ನ ಕುಟುಂಬವನ್ನು ಬೆದರಿಸಲಾಗುತ್ತಿದೆ ಎಂದು ಪದೇ ಪದೇ ಆರೋಪಿಸಿದ್ದಾಳೆ, ತನ್ನ ಕುಟುಂಬಕ್ಕೆ ರಕ್ಷಣೆ ನೀಡಿ ಎಂದು ಅಂಗಲಾಚಿದ್ದಾಳೆ, ಬಿಜಾಪುರದಲ್ಲಿದ್ದ ಯುವತಿ ಕುಟುಂಬ ಬೆಳಗಾವಿಯಲ್ಲಿ ದೂರು ದಾಖಲಿಸುತ್ತದೆ. ಬೆಳಗಾವಿಯಲ್ಲಿ ರಮೇಶ್ ಜಾರಕಿಹೊಳಿಯ ಪೆಯ್ಡ್ ಪುಂಡರು ಕಾನೂನು, ಪೊಲೀಸರು ಕಸಕ್ಕೆ ಸಮಾನ ಎಂಬಂತೆ ವರ್ತಿಸುತ್ತಿದ್ದಾರೆ" ಎಂದು ಕರ್ನಾಟಕ ಕಾಂಗ್ರೆಸ್ ಆರೋಪಿಸಿದೆ.

ಬೆಳಗಾವಿಯಲ್ಲಿ ಏನಾಗುತ್ತಿದೆ?

ಬೆಳಗಾವಿಯಲ್ಲಿ ಏನಾಗುತ್ತಿದೆ?

"ಸಿಡಿ ಬಿಡುಗಡೆಯಾದಾಗಿನಿಂದ ಇಲ್ಲಿಯವರೆಗೂ ಬೆಳಗಾವಿಯಲ್ಲಿ ಏನಾಗುತ್ತಿದೆ ಎನ್ನುವುದು ಜಗತ್ತಿಗೆ ತಿಳಿದ ವಿಚಾರ, ಹೀಗಿರುವಾಗ ಯುವತಿ ಕುಟುಂಬ ಸ್ವತಂತ್ರವಾಗಿ ತಮ್ಮಿಚ್ಛೆಯಂತಿದೆಯೇ ಎನ್ನುವ ಅನುಮಾನ ಮೂಡುತ್ತದೆ.ಬಸವರಾಜ ಬೊಮ್ಮಾಯಿ ಅವರೇ, ಆರೋಪಿಯನ್ನು ಬಂಧಿಸದೆ, ಯುವತಿ ಕುಟುಂಬಕ್ಕೆ ರಕ್ಷಣೆ ನೀಡದೆ ಏನು ಮಾಡಲು ಹೊರಟಿದ್ದೀರಿ?" ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಯುವತಿಯನ್ನು ಪತ್ತೆ ಹಚ್ಚಲು ಆಗಿಲ್ಲ

"ಸಿಡಿ ಪ್ರಕರಣ ಹೊರಬಂದು 27 ದಿನಗಳಾಯಿತು. ಇದುವರೆಗೂ ಯುವತಿಯನ್ನು ಪತ್ತೆ ಹಚ್ಚಲಾಗಲಿಲ್ಲ" ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್‌ನಲ್ಲಿ ಆರೋಪಿಸಿದೆ.

Recommended Video

ಪಂದ್ಯ ಗೆದ್ದ ಬಳಿಕ ತನ್ನ ಬೇಸರವನ್ನು ಹೊರ ಹಾಕಿದ ಕೊಹ್ಲಿ | Oneindia Kannada

ಎಸ್‌ಐಟಿ ಪಕ್ಷಪಾತದ ಬಗ್ಗೆ ಪ್ರಶ್ನೆ

"ಪ್ರಕರಣವಿರುವುದು ಸಂತ್ರಸ್ತೆ ಮತ್ತು ಆರೋಪಿಯ ಮದ್ಯೆ. ಯುವತಿ ಆರೋಪಿಸುತ್ತಿರುವುದು ರಮೇಶ್ ಜಾರಕಿಹೊಳಿ ಬಗ್ಗೆ, SIT ಪಕ್ಷಪಾತದ ಬಗ್ಗೆ, ರಕ್ಷಣೆ ನೀಡದ ಸರ್ಕಾರದ ಬಗ್ಗೆ" ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

English summary
Karnataka Congress in a tweet several questions to home minister of Karnataka Basavaraj Bommai in the issue of Ramesh Jarkiholi CD case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X