BJP Vs BJP: ರಮೇಶ್ ಜಾರಕಿಹೊಳಿ ಹಸ್ತಕ್ಷೇಪ- ಬೆಳಗಾವಿ ಬಿಜೆಪಿ ಶಾಸಕರಿಂದ ಹೈಕಮಾಂಡ್‌ಗೆ ದೂರು
ಗೋಕಾಕ್ ಶಾಸಕ ರಮೇಶ ಜಾರಕಿಹೊಳಿ ತಮ್ಮ ಕ್ಷೇತ್ರಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಬೆಳಗಾವಿ ಬಿಜೆಪಿ ಶಾಸಕರು ಹೈಕಮಾಂಡ್‌ಗೆ ದೂರು ನೀಡಿದ್ದಾರೆ.
ಬೆಳಗಾವಿ, ಮಾರ್ಚ್ 14: ಗೋಕಾಕ್ ಶಾಸಕ ರಮೇಶ ಜಾರಕಿಹೊಳಿ ತಮ್ಮ ಕ್ಷೇತ್ರಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಬೆಳಗಾವಿ ಬಿಜೆಪಿ ಶಾಸಕರು ಹೈಕಮಾಂಡ್‌ಗೆ ದೂರು ನೀಡಿದ್ದಾರೆ. ವಿಧಾನಸಭೆ ಚುನಾವಣಾ ಸಿದ್ಧತೆ ಹಾಗೂ ಪ್ರಚಾರ ತಂತ್ರಗಳ ಬಗ್ಗೆ ಸುಮಾರು ಆರು ಬಿಜೆಪಿ ಶಾಸಕರು ಕಳವಳ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಕರ್ನಾಟಕ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಸಭೆ ನಡೆಸಿರುವುದು ಬೆಳಕಿಗೆ ಬಂದಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸೂಚನೆಯಂತೆ ಪ್ರಧಾನ್ ಅವರು ಕಳೆದ ಭಾನುವಾರ ಬೆಳಗಾವಿಯಲ್ಲಿ ಪ್ರತ್ಯೇಕವಾಗಿ ಶಾಸಕರನ್ನು ಭೇಟಿ ಮಾಡಿದ್ದಾರೆ. ಆ ಶಾಸಕರ ಗೆಲುವಿನ ಸಾಧ್ಯತೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ ಎಂದು ಬೆಳವಣಿಗೆಯ ಬಗ್ಗೆ ತಿಳಿದಿರುವ ನಾಯಕರೊಬ್ಬರು 'ಹಿಂದೂಸ್ತಾನ್ ಟೈಮ್ಸ್' ಗೆ ಹೇಳಿದ್ದಾರೆ.

ಜಿಲ್ಲೆಯ ಒಟ್ಟು 13 ಶಾಸಕರ ಪೈಕಿ ಒಂಬತ್ತು ಮಂದಿ ತಮ್ಮ ಕ್ಷೇತ್ರಗಳಲ್ಲಿ ರಮೇಶ್ ಜಾರಕಿಹೊಳಿ ಹಸ್ತಕ್ಷೇಪದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಲಿ ಶಾಸಕರ ವಿರುದ್ಧ ತಮ್ಮ ಆಯ್ಕೆಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಜಾರಕಿಹೊಳಿ ಮುಂದಾಗಿದ್ದಾರೆ ಎಂದು ಹೆಸರು ಹೇಳಲಿಚ್ಛಿಸದ ಶಾಸಕರು ತಿಳಿಸಿದ್ದಾರೆ.
'ನಮ್ಮ ದೂರಿಗೆ ರಾಜ್ಯ ನಾಯಕತ್ವ ಸ್ಪಂದಿಸದ ಹಿನ್ನೆಲೆಯಲ್ಲಿ ನಾವು ಇದನ್ನು ಪ್ರಧಾನ್ ಅವರ ಗಮನಕ್ಕೆ ತಂದಿದ್ದೇವೆ. ಆದರೆ, ನಿರಾಶಾದಾಯಕವಾಗಿ ಅವರು ಈ ವಿಚಾರದ ಬಗ್ಗೆ ಏನನ್ನೂ ಪ್ರತಿಕ್ರಿಯಿಸಲಿಲ್ಲ' ಎಂದು ಶಾಸಕರು ಬೇಸರ ವ್ಯಕ್ತಪಡಿಸಿದ್ದಾರೆ.

ಜಾರಕಿಹೊಳಿ ಅವರನ್ನು ನಿರ್ಬಂಧಿಸದಿದ್ದರೆ ಮುಂಬರುವ ಚುನಾವಣೆಯಲ್ಲಿ ಪಕ್ಷಕ್ಕೆ ದೊಡ್ಡ ಹಿನ್ನಡೆಯಾಗಲಿದೆ ಎಂದು ಪ್ರಧಾನ್‌ಗೆ ಶಾಸಕರಿಗೆ ತಿಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ಅಮಿತ್ ಶಾ ಅವರ ಗಮನಕ್ಕೂ ತಂದಿದ್ದೇವೆ ಎಂದು ಶಾಸಕರು ಹೇಳಿದ್ದಾರೆ. 'ರಾಜ್ಯದಲ್ಲಿನ ಅಧಿಕಾರ ಉಳಿಸಿಕೊಳ್ಳಲು ಆಂತರಿಕ ಕಲಹ ಮರೆತು ಒಗ್ಗಟ್ಟಿನಿಂದ ಕೆಲಸ ಮಾಡುವಂತೆ ಅಮಿತ್ ಶಾ ಸೂಚನೆ ನೀಡಿದ್ದಾರೆ' ಎಂದು ಶಾಸಕರು ತಿಳಿಸಿದ್ದಾರೆ.
'ದುರದೃಷ್ಟವಶಾತ್ ಅವರು ನಮ್ಮ ಸಮಸ್ಯೆಯನ್ನು ಪರಿಹರಿಸಲಿಲ್ಲ. ನಮ್ಮ ಕೇಂದ್ರ ನಾಯಕತ್ವದ ಮೌನ ಮತ್ತು ನಿರ್ಲಕ್ಷ್ಯದಿಂದ ಚುನಾವಣೆಯಲ್ಲಿ ಪಕ್ಷಕ್ಕೆ ಹೊಡೆತ ಬೀಳಲಿದೆ' ಎಂದು ಶಾಸಕರೊಬ್ಬರು ಹೇಳಿದ್ದಾರೆ.

ನಿಪ್ಪಾಣಿಯಿಂದ ಸಚಿವೆ ಶಶಿಕಲಾ ಬದಲಿಗೆ ಉತ್ತಮ್ ಪಾಟೀಲ್, ಬೆಳಗಾವಿ ಗ್ರಾಮಾಂತರದಿಂದ ನಾಗೇಶ್ ಮನ್ನೋಳ್ಕರ್, ಶಾಸಕ ಅಭಯ ಪಾಟೀಲ್ ಬದಲಿಗೆ ಬೆಳಗಾವಿ ದಕ್ಷಿಣದಿಂದ ಕಿರಣ್ ಜಾಧವ್, ಬೆಳಗಾವಿ ಉತ್ತರದಿಂದ ಶಾಸಕ ಅನಿಲ್ ಬೆನಕೆ ಬದಲಿಗೆ ಡಾ ರವಿ ಪಾಟೀಲ್ ಹಾಗೂ ಅವರ ಬೆಂಬಲಿಗರನ್ನು ಕಣಕ್ಕಿಳಿಸಲು ರಮೇಶ್ ಬಯಸಿದ್ದಾರೆ ಎಂದು ಶಾಸಕರು ಪ್ರಧಾನ್ ಅವರಿಗೆ ತಿಳಿಸಿದ್ದಾರೆ.
ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ರಮೇಶ ಜಾರಕಿಹೊಳಿ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದ್ದು, ಸವದಿ ಬದಲು ತಮ್ಮ ಆಪ್ತ ಮಹೇಶ್ ಕುಮಠಳ್ಳಿ ಅವರನ್ನು ಅಥಣಿಯಿಂದ ಕಣಕ್ಕಿಳಿಸಲು ಜಾರಕಿಹೊಳಿ ಬಯಸಿದ್ದಾರೆ.
2018ರ ವಿಧಾನಸಭೆ ಚುನಾವಣೆಯಲ್ಲಿ ಕುಮಠಳ್ಳಿಯಿಂದ ಪರಾಭವಗೊಂಡಿದ್ದ ಬಿಜೆಪಿ ಮುಖಂಡ ಲಕ್ಷ್ಮಣ ಸವದಿ ಕೂಡ ಪಕ್ಷದ ಟಿಕೆಟ್ ಮೇಲೆ ಕಣ್ಣಿಟ್ಟಿದ್ದಾರೆ. 2018ರ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಕುಮಠಳ್ಳಿ ಗೆದ್ದಿದ್ದರು. ನಂತರ ಬಿಜೆಪಿ ಸೇರಿ ಉಪಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ನಲ್ಲಿ ಗೆದ್ದರು.
ಜಾರಕಿಹೊಳಿ ಅವರು ಶುಕ್ರವಾರ ಆಡಳಿತಾರೂಢ ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ. ತಮ್ಮ ಆಪ್ತ ಮಹೇಶ ಕುಮಠಳ್ಳಿ ಅವರಿಗೆ ಅಥಣಿಯಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡದಿದ್ದರೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ. ಬಿಜೆಪಿ ಬೆಂಬಲಿಸಲು ಕಾಂಗ್ರೆಸ್ ಮತ್ತು ಜೆಡಿಎಸ್‌ಗೆ ರಾಜೀನಾಮೆ ನೀಡಿದ 17 ಶಾಸಕರಲ್ಲಿ ಕುಮಠಳ್ಳಿ ಸಹ ಒಬ್ಬರು.
ವಿಜಯಪುರದಲ್ಲಿ 'ವಿಜಯ ಸಂಕಲ್ಪ ಯಾತ್ರೆ' ಅಂಗವಾಗಿ ಆಗಮಿಸಿದ್ದ ರಮೇಶ ಜಾರಕಿಹೊಳಿ ಅವರು ಕುಮಠಳ್ಳಿಗೆ ಟಿಕೆಟ್ ಸಿಗಲೇಬೇಕು ಎಂದು ತಿಳಿಸಿದ್ದಾರೆ. ನನ್ನ ಸ್ನೇಹಿತ ಕುಮಠಳ್ಳಿ ಅವರಿಗೆ ಪಕ್ಷ ಟಿಕೆಟ್ ನೀಡಿದರೆ ಮಾತ್ರ ನಾನು ಗೋಕಾಕದಿಂದ ಸ್ಪರ್ಧಿಸುತ್ತೇನೆ ಎಂದು ಜಾರಕಿಹೊಳಿ ಹೇಳಿದ್ದಾರೆ.
-
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ












Click it and Unblock the Notifications