ಸಿಡಿ ಪ್ರಕರಣ; 4 ದಿನದ ಕಾಲವಕಾಶ ಕೇಳಿದ ಜಾರಕಿಹೊಳಿ!

ಬೆಂಗಳೂರು, ಮಾರ್ಚ್ 29; ಮಾಜಿ ಸಚಿವ, ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ವಿಚಾರಣೆಯನ್ನು ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಪೂರ್ಣಗೊಳಿಸಿದ್ದಾರೆ. ಏಪ್ರಿಲ್ 2ರಂದು ಪುನಃ ವಿಚಾರಣೆಗೆ ಆಗಮಿಸಬೇಕು ಎಂದು ಸೂಚನೆಯನ್ನು ಕೊಟ್ಟಿದ್ದಾರೆ.

Recommended Video

      ಕೊನೆಗೂ SIT ಮುಂದೆ ಹಾಜರಾದ Ramesh Jarkiholi | Oneindia Kannada

      ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಕಬ್ಬನ್ ಪಾರ್ಕ್ ಪೊಲೀಸರು ರಮೇಶ್ ಜಾರಕಿಹೊಳಿಗೆ ನೋಟಿಸ್ ನೀಡಿದ್ದರು. ವಕೀಲರ ಜೊತೆ ರಮೇಶ್ ಜಾರಕಿಹೊಳಿ ಅಡುಗೋಡಿಯಲ್ಲಿರುವ ಟೆಕ್ನಿಕಲ್ ಸೆಲ್‌ನಲ್ಲಿ ವಿಚಾರಣೆಯನ್ನು ಎದುರಿಸಿದರು.

      ಸಿಡಿ ಪ್ರಕರಣದ ಸಂತ್ರಸ್ತ ಯುವತಿ ನೀಡಿದ ದೂರಿನ ಅನ್ವಯ ಪೊಲೀಸರು ರಮೇಶ್ ಜಾರಕಿಹೊಳಿಯನ್ನು ಸುಮಾರು ನಾಲ್ಕೂವರೆ ತಾಸು ವಿಚಾರಣೆ ನಡೆಸಿದರು. ಹಲವು ಪ್ರಶ್ನೆಗಳಿಗೆ ಅವರು ಉತ್ತರ ನೀಡಿದರು.

      Ramesh Jarakiholi Seeks 4 Days Time To Answer Questions

      ಕೆಲವು ಪ್ರಶ್ನೆಗಳಿಗೆ ಉತ್ತರ ನೀಡಲು ವಕೀಲರ ಜೊತೆ ಚರ್ಚಿಸುತ್ತೇನೆ. 4 ದಿನದ ಕಾಲಾವಕಾಶ ನೀಡಿ ಎಂದು ಪೊಲೀಸರಿಗೆ ಮನವಿ ಮಾಡಿದರು. ಏಪ್ರಿಲ್ 2ರಂದು ಮತ್ತೆ ವಿಚಾರಣೆಗೆ ಬರಲು ಪೊಲೀಸರು ಸೂಚನೆ ನೀಡಿದ್ದಾರೆ.

      ಸಿಡಿ ಪ್ರಕರಣದ ಸಂತ್ರಸ್ತ ಯುವತಿ ವಕೀಲ ಜಗದೀಶ್ ಮೂಲಕ ರಮೇಶ್ ಜಾರಕಿಹೊಳಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾಳೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಎಫ್‌ಐಆರ್ ಸಹ ದಾಖಲಾಗಿದೆ.

      ಈ ದೂರಿನ ಅನ್ವಯ ಪೊಲೀಸರು ರಮೇಶ್ ಜಾರಕಿಹೊಳಿ ವಿಚಾರಣೆ ನಡೆಸುತ್ತಿದ್ದಾರೆ. ದೂರು ದಾಖಲಾದ ಬಳಿಕ ಸೋಮವಾರ ಮೊದಲ ಬಾರಿಗೆ ವಿಚಾರಣೆಯನ್ನು ಪೊಲೀಸರು ನಡೆಸಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+