Breaking News: ಸಿಡಿ ಪ್ರಕರಣದಲ್ಲಿ ತಪ್ಪೊಪ್ಪಿಕೊಂಡ ರಮೇಶ್ ಜಾರಕಿಹೊಳಿ
ಬೆಂಗಳೂರು, ಮೇ 24: ಕರ್ನಾಟಕದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಸಿಡಿಯಲ್ಲಿ ಯುವತಿ ಜೊತೆಗೆ ಇರುವುದು ತಾವೇ ಎಂದು ಒಪ್ಪಿಕೊಂಡಿರುವ ರಮೇಶ್ ಜಾರಕಿಹೊಳಿ, ಯುವತಿಯ ಪರಿಚಯವಿದೆ ಎಂದು ತನಿಖಾಧಿಕಾರಿಗಳ ಎದುರಿಗೆ ಹೇಳಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
Recommended Video
ಬೆಂಗಳೂರಿನಲ್ಲಿ ವಿಶೇಷ ತನಿಖಾ ತಂಡ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾದ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಈ ಮೊದಲು ಯುವತಿ ಬಗ್ಗೆ ಗೊತ್ತಿಲ್ಲ, ಯುವತಿ ಪರಿಚಯವೇ ಇಲ್ಲ ಎಂದು ಹೇಳಿಕೆ ನೀಡುತ್ತಿದ್ದ ಮಾಜಿ ಸಚಿವರು, ಇದೀಗ ಉಲ್ಟಾ ಹೊಡೆದಿದ್ದಾರೆ.
ಯುವತಿ ಜೊತೆಗೆ ಸಹಮತದೊೆಂದಿಗೆ ಲೈಂಗಿಕ ಸಂಪರ್ಕ ಹೊಂದಿದ್ದು, ತಮ್ಮ ಅರಿವಿಗೆ ಬಾರದ ರೀತಿಯಲ್ಲಿ ಅದನ್ನು ವಿಡಿಯೋ ಮಾಡಿಕೊಳ್ಳಲಾಗಿದೆ ಎಂದು ಎಸ್ಐಟಿ ಎದುರು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.

ಪ್ರಾಜೆಕ್ಟ್ ವಿಚಾರವಾಗಿ ಯುವತಿ ಭೇಟಿ:
ಯುವತಿಯು ಯಾವುದೋ ಒಂದು ಪ್ರಾಜೆಕ್ಟ್ ವಿಚಾರವಾಗಿ ತಮ್ಮನ್ನು ಭೇಟಿ ಮಾಡಲು ಬಂದಿದ್ದರು ಎಂದು ಸಚಿವರು ತಮ್ಮ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.












Click it and Unblock the Notifications