ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಡಿ ಪ್ರಕರಣ; ಯುವತಿ ಮಲ್ಯನೋ?, ನೀರವ್ ಮೋದಿಯೋ?

|
Google Oneindia Kannada News

ಬೆಂಗಳೂರು, ಮಾರ್ಚ್ 28; ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಬಗ್ಗೆ ರಾಜ್ಯಾದ್ಯಂತ ಚರ್ಚೆಯಾಗುತ್ತಿದೆ. ರಾಜಕೀಯ ಆರೋಪ, ಪ್ರತ್ಯಾರೋಪಗಳು ಹೆಚ್ಚಾಗುತ್ತಿವೆ. ಎಸ್‌ಐಟಿ ಈ ಪ್ರಕರಣದ ತನಿಖೆಯನ್ನು ನಡೆಸುತ್ತಿದೆ.

ಸಿಡಿ ಪ್ರಕರಣದ ಸಂತ್ರಸ್ತ ಯುವತಿ ಇದುವರೆಗೂ ಪತ್ತೆಯಾಗಿಲ್ಲ. ಆದರೆ, ಅಜ್ಞಾತ ಸ್ಥಳದಿಂದ ವಿಡಿಯೋಗಳನ್ನು ಬಿಡುಗಡೆ ಮಾಡುತ್ತಿದ್ದಾಳೆ. ಆಡಿಯೋ, ವಿಡಿಯೋಗಳು ಬಿಡುಗಡೆಗೊಳ್ಳುತ್ತಿವೆ.

ಡಿಕೆ ಶಿವಕುಮಾರ್ ವಿರುದ್ಧ ಬಳಸಿದ್ದ 'ಅವಾಚ್ಯ' ಪದವನ್ನು ವಾಪಸ್ ಪಡೆದ ರಮೇಶ್ ಜಾರಕಿಹೊಳಿಡಿಕೆ ಶಿವಕುಮಾರ್ ವಿರುದ್ಧ ಬಳಸಿದ್ದ 'ಅವಾಚ್ಯ' ಪದವನ್ನು ವಾಪಸ್ ಪಡೆದ ರಮೇಶ್ ಜಾರಕಿಹೊಳಿ

ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಕರಣದ ತನಿಖೆ ಬಗ್ಗೆ ಹಲವಾರು ಪ್ರಶ್ನೆಗಳನ್ನು ಕೇಳಿದ್ದಾರೆ. ಭಾನುವಾರ ಅವರು ಈ ಕುರಿತು ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ.

ಸಿಡಿ ಕೇಸ್: ಮಹಾನಾಯಕ ರಾಜಕೀಯಕ್ಕೆ 'ನಾಲಾಯಕ್' ಎಂದ ರಮೇಶ್ ಜಾರಕಿಹೊಳಿ!ಸಿಡಿ ಕೇಸ್: ಮಹಾನಾಯಕ ರಾಜಕೀಯಕ್ಕೆ 'ನಾಲಾಯಕ್' ಎಂದ ರಮೇಶ್ ಜಾರಕಿಹೊಳಿ!

"ಸಾಮಾನ್ಯ ಕುಟುಂಬದಿಂದ ಬಂದಿರುವ ಯುವತಿಯನ್ನು ಇಷ್ಟು ದಿನಗಳ ನಂತರವೂ ಪತ್ತೆ ಹಚ್ಚಲಾಗಿಲ್ಲವೆಂದರೆ ಏನು ಅರ್ಥ? ಆಕೆಯೇನು ವಿಜಯಮಲ್ಯನೋ ಇಲ್ಲವೇ ನೀರವ್ ಮೋದಿಯೋ?" ಎಂದು ಸರ್ಕಾರ ಮತ್ತು ಪೊಲೀಸ್ ಇಲಾಖೆಯನ್ನು ಪ್ರಶ್ನಿಸಿದ್ದಾರೆ.

ರಮೇಶ್ ಜಾರಕಿಹೊಳಿ ಬಂಧನಕ್ಕೆ ದೂರುದಾರ ವಕೀಲ ಜಗದೀಶ್ ಆಗ್ರಹ ರಮೇಶ್ ಜಾರಕಿಹೊಳಿ ಬಂಧನಕ್ಕೆ ದೂರುದಾರ ವಕೀಲ ಜಗದೀಶ್ ಆಗ್ರಹ

ನಾಚಿಗೇಡಿನ ಸಂಗತಿ

ನಾಚಿಗೇಡಿನ ಸಂಗತಿ

"ಸಿಡಿ ಪ್ರಕರಣದಿಂದಾಗಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕದ ಮಾನ ಹರಾಜು ಆಗುತ್ತಿರುವುದಕ್ಕೆ ರಾಜ್ಯ ಸರ್ಕಾರ ಮತ್ತು ಪೊಲೀಸರ ವೈಫಲ್ಯವೇ ಕಾರಣ. ಸಿಡಿ ಮಾಧ್ಯಮದಲ್ಲಿ ಕಾಣಿಸಿಕೊಂಡು 26 ದಿನಗಳು ಕಳೆದರೂ ಸಂತ್ರಸ್ತೆ ಯುವತಿಯನ್ನು ಪೊಲೀಸರಿಗೆ ಪತ್ತೆಹಚ್ಚಲಿಕ್ಕಾಗದಿರುವುದು ನಾಚಿಕೆಗೇಡಿನ ಸಂಗತಿ" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ತಡೆಯುತ್ತಿರುವವರು ಯಾರು?

ತಡೆಯುತ್ತಿರುವವರು ಯಾರು?

"ದಿನಕ್ಕೊಂದು ತಿರುವು ಪಡೆದು ರಾಜಕೀಯ ಕೆಸರೆರೆಚಾಟಕ್ಕೆ ಕಾರಣವಾಗಿರುವ ಸಿಡಿ ಹಗರಣದ ತನಿಖೆ ತಾರ್ಕಿಕ ಅಂತ್ಯ ಕಾಣಬೇಕಾದರೆ ಸಂತ್ರಸ್ತ ಯುವತಿ ಅಜ್ಞಾತ ಸ್ಥಳದಿಂದ ಹೊರಬಂದು ಪೊಲೀಸರ ಮುಂದೆ ಹಾಜರಾಗಿ ಹೇಳಿಕೆ ನೀಡಬೇಕು. ಕಾನೂನುಬದ್ಧವಾದ ಅವಳ ಹಕ್ಕನ್ನು ಚಲಾಯಿಸದಂತೆ ತಡೆಯುತ್ತಿರುವವರು ಯಾರು?" ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಪೊಲೀಸರ ಕೈಗೆ ಮಾತ್ರ ಸಿಗುತ್ತಿಲ್ಲ

ಪೊಲೀಸರ ಕೈಗೆ ಮಾತ್ರ ಸಿಗುತ್ತಿಲ್ಲ

"ಸಿಡಿಯಲ್ಲಿರುವ ಯುವತಿ ಅಜ್ಞಾತ ಸ್ಥಳದಿಂದ ನಿರಂತರವಾಗಿ ತನ್ನ ಹೇಳಿಕೆಗಳ ಸಿಡಿಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡುತ್ತಿದ್ದಾಳೆ, ತನ್ನ ವಕೀಲನ ಮೂಲಕ ಪೊಲೀಸರಿಗೆ ದೂರು ಕಳುಹಿಸಿಕೊಡುತ್ತಿದ್ದಾಳೆ, ತಂದೆ-ತಾಯಿ ಜೊತೆ ಮಾತನಾಡುತ್ತಿದ್ದಾಳೆ. ಹೀಗಿದ್ದರೂ ಪೊಲೀಸರ ಕೈಗೆ ಮಾತ್ರ ಸಿಗುತ್ತಿಲ್ಲ ಎಂದರೆ ಏನು ಅರ್ಥ?" ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಗೃಹ ಸಚಿವರು ಗಮನ ಹರಿಸಬೇಕು

ಮಾಧ್ಯಮಗಳಲ್ಲಿ ಪ್ರಕಟ/ಪ್ರಸಾರವಾಗಿರುವ ಯುವತಿಯದ್ದೆನ್ನಲಾದ ಹೇಳಿಕೆಗಳನ್ನು ಗಮನಿಸಿದರೆ ಆಕೆಗೆ ರಾಜ್ಯ ಸರ್ಕಾರದ ಮೇಲಾಗಲಿ, ಪೊಲೀಸರ ಮೇಲಾಗಲಿ ನಂಬಿಕೆ ಇಲ್ಲ ಎಂದು ಸಿದ್ದರಾಮಯ್ಯ ಟ್ವೀಟ್‌ನಲ್ಲಿ ಹೇಳಿದ್ದಾರೆ.

ವಿಜಯಮಲ್ಯನೋ ಇಲ್ಲವೇ ನೀರವ್ ಮೋದಿಯೋ?

"ಸಾಮಾನ್ಯ ಕುಟುಂಬದಿಂದ ಬಂದಿರುವ ಯುವತಿಯನ್ನು ಇಷ್ಟು ದಿನಗಳ ನಂತರವೂ ಪತ್ತೆ ಹಚ್ಚಲಾಗಿಲ್ಲವೆಂದರೆ ಏನು ಅರ್ಥ?" ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

English summary
Why special investigation team (SIT) fail to found women in the Ramesh Jarkiholi CD case leader of opposition asked the Karnataka BJP government and SIT.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X