ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಮೇಶ್ ಜಾರಕಿಹೊಳಿ ರಾಜೀನಾಮೆ ಬೆನ್ನಲ್ಲೇ ಸಚಿವರಿಗೆ ಸಿಎಂ ಎಚ್ಚರಿಕೆ

|
Google Oneindia Kannada News

ಬೆಂಗಳೂರು, ಮಾರ್ಚ್.03: ಕರ್ನಾಟಕದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆಯ ಸಿಡಿ ಬಿಡುಗಡೆ ಪ್ರಕರಣದ ಬೆನ್ನಲ್ಲೇ ಸಂಪುಟದ ಸಚಿವರಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಬೆಂಗಳೂರಿನ ಸಂಪುಟ ಸಭೆಯಲ್ಲಿ ಸ್ವತಃ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರೇ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದ ಬಗ್ಗೆ ಪ್ರಸ್ತಾಪಿಸಿದರು ಎಂದು ತಿಳಿದು ಬಂದಿದೆ. ಸಾರ್ವಜನಿಕ ಜೀವನದಲ್ಲಿ ಇರುವ ಪ್ರತಿಯೊಬ್ಬರು ಎಚ್ಚರಿಕೆಯಿಂದ ಇರಬೇಕು ಎಂದು ಸಚಿವರಿಗೆ ಸಿಎಂ ಎಚ್ಚರಿಕೆ ನೀಡಿದ್ದಾರೆ.

ಯುವತಿ ಜೊತೆಗಿನ ರಾಸಲೀಲೆ ಸಿಡಿ ಬಿಡುಗಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಈಗಾಗಲೇ ನೈತಿಕ ಹೊಣೆ ಹೊತ್ತು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ನಡೆದ ಸಂಪುಟ ಸಭೆಯಲ್ಲಿ ಸಚಿವರಿಗೆ ಸಿಎಂ ಯಡಿಯೂರಪ್ಪ ಖಡಕ್ ಸೂಚನೆ ನೀಡಿದ್ದಾರೆ.

Ramesh Jarkiholi CD Row CM BSY Alert Message To State Cabinet Ministers

ಬಜೆಟ್ ಅಧಿವೇಶನದ ಹೊಸ್ತಿಲಿನಲ್ಲೇ ಪ್ರತಿಪಕ್ಷಕ್ಕೆ ಅಸ್ತ್ರ:

Recommended Video

ಅವರ ಬಗ್ಗೆ ಮಾತಾಡೋದು ನನಿಗೆ ಶೋಭೆ ತರಲ್ಲ !! | HDK | Oneindia Kannada

ರಾಜ್ಯ ಬಜೆಟ್ ಅಧಿವೇಶನ ಆರಂಭದ ಹೊಸ್ತಿಲಿನಲ್ಲಿ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಿಡುಗಡೆ ಪ್ರಕರಣವು ವಿರೋಧ ಪಕ್ಷಗಳಿಗೆ ಅಸ್ತ್ರದಂತೆ ಆಗುತ್ತದೆ. ಇದರ ಮಧ್ಯೆ ರಮೇಶ್ ಜಾರಕಿಹೊಳಿಗೆ ಮತ್ತೆ ಸಚಿವ ಸ್ಥಾನ ನೀಡುವ ಬಗ್ಗೆ ಸಿಎಂ ಸುಳಿವು ನೀಡಿದ್ದಾರೆ ಎಂದು ತಿಳಿದು ಬಂದಿದೆ. ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಷ್ಪಕ್ಷಪಾತ ತನಿಖೆ ನಡೆಸಲಾಗುತ್ತದೆ. ರಮೇಶ್ ಜಾರಕಿಹೊಳಿ ನಿರ್ದೋಷಿ ಎಂಬುದು ಸಾಬೀತಾದಲ್ಲಿ ಮತ್ತೆ ಸಚಿವ ಸ್ಥಾನ ನೀಡಲಾಗುವುದು ಎಂದು ಸಂಪುಟ ಸಹದ್ಯೋಗಿಗಳಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ ಎನ್ನಲಾಗಿದೆ.

English summary
Ramesh Jarkiholi CD Row : CM B S Yediyurappa Alert Message To State Cabinet Ministers And BJP MLa's.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X