ಪ್ರವಾಸದ ಮೋಜಿನಲ್ಲಿ ರಮೇಶ್ ಜಾರಕಿಹೊಳಿ: ಖಾಸಗಿ ಹೆಲಿಕಾಪ್ಟರ್‌ನಲ್ಲಿ ಸುತ್ತಾಟ
ಬೆಂಗಳೂರು, ಸೆಪ್ಟೆಂಬರ್ 02: ಬೆಳಗಾವಿ ಪ್ರವಾಹ, ರಾಜಕೀಯ ಅಸ್ಥಿರತೆ ಎಲ್ಲವನ್ನೂ ಮರೆತು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಅವರು ಪ್ರವಾಸ ಹೊರಟಿದ್ದಾರೆ.
ಸ್ವಂತ ಹೆಲಿಕಾಪ್ಟರ್‌ನಲ್ಲಿ ರಮೇಶ್ ಜಾರಕಿಹೊಳಿ ಅವರು ಪ್ರವಾಸ ತೆರಳಿದ್ದು, ಗೆಳೆಯರ ಜೊತೆಗೆ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಕೇದಾರನಾಥ ಮಾತ್ರವೇ ಅಲ್ಲದೆ ಇನ್ನೂ ಕೆಲವು ದೇವಸ್ಥಾನಗಳಿಗೆ ಅವರು ಭೇಟಿ ನೀಡಲಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಇದೆ. ಇಂತಹಾ ಸಂದರ್ಭದಲ್ಲಿ ರಮೇಶ್ ಜಾರಕಿಹೊಳಿ ಪ್ರವಾಸ ತೆರಳಿರುವುದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತವಾಗಿದೆ.

ಅವರು ಪ್ರತಿನಿಧಿಸಿದ್ದ ಗೋಕಾಖ್ ಕ್ಷೇತ್ರದಲ್ಲಿಯೂ ಪ್ರವಾಹ ಬಂದಿದ್ದು, ಜನ ಜೀವನ ಅಸ್ತವ್ಯವ್ಥವಾಗಿದೆ. ಗೋಕಾಖ್ ಶಾಸಕರಾಗಿದ್ದ ರಮೇಶ್ ಜಾರಕಿಹೊಳಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷಾಂತರ ನಿಷೇಧ ಕಾಯ್ದೆ ಉಲ್ಲಂಘನೆ ಅಡಿಯಲ್ಲಿ ಅರ್ಹರೂ ಆಗಿದ್ದಾರೆ. ಪ್ರಸ್ತುತ ಸುಪ್ರೀಂಕೋರ್ಟ್‌ನಲ್ಲಿ ಪ್ರಕರಣ ನಡೆಯುತ್ತಿದೆ. ಸುಪ್ರೀಕೋರ್ಟ್ ತೀರ್ಪಿನ ಮೇಲೆ ಅವರ ರಾಜಕೀಯ ಭವಿಷ್ಯ ಅವಲಂಬಿತವಾಗಿದೆ.












Click it and Unblock the Notifications