ಬೆಳಗಾವಿ: ಅಥಣಿಯಲ್ಲಿ ಮಹೇಶ್ ಕುಮಟಳ್ಳಿಗಿಂತ ರಮೇಶ್ ಜಾರಕಿಹೊಳಿಯೆ ಲಕ್ಷ್ಮಣ ಸವದಿಗೆ ಪ್ರತಿಸ್ಪರ್ಧಿ!
ಬೆಳಗಾವಿ, ಏಪ್ರಿಲ್. 29 : ಬೆಳಗಾವಿಯ ಅಥಣಿಯಲ್ಲಿ ಇಬ್ಬರು ಬದ್ಧ ಪ್ರತಿಸ್ಪರ್ಧಿಗಳಾದ ಬಿಜೆಪಿಯ ಹಾಲಿ ಶಾಸಕ ಮಹೇಶ ಕುಮಟಳ್ಳಿ ಹಾಗೂ ಇತ್ತೀಚೆಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ನಡುವೆ ಕುತೂಹಲಕಾರಿ ಸ್ಪರ್ಧೆ ಏರ್ಪಟ್ಟಿದೆ. ಆದರೆ, ಇದು ಇವರಿಬ್ಬರ ಸ್ಪರ್ಧೆ ಎನ್ನುವುದಕ್ಕಿಂತ ರಮೇಶ್ ಜಾರಕಿಹೊಳಿ ಮತ್ತು ಸವದಿ ನಡುವಿನ ಪೈಪೋಟಿ ಎನ್ನುವಂತಾಗಿದೆ.
ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು ಮಹೇಶ್ ಕುಮಟಳ್ಳಿಗೆ ಟಿಕೆಟ್ ದೊರೆಯಲು ಪ್ರಮುಖ ಕಾರಣ ಎನ್ನಲಾಗಿತ್ತಿದೆ. ಈಗಾಗಲೇ ಅವರ ಪರ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಇದೇ ಕ್ಷೇತ್ರದಿಂದ ಮೂರು ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಗೆದ್ದಿರುವ, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಲಕ್ಷ್ಮಣ ಸವದಿ ಕ್ಷೇತ್ರವನ್ನು ಮರಳಿ ಪಡೆಯಲು ಶ್ರಮಿಸುತ್ತಿದ್ದಾರೆ.

ಲಕ್ಷ್ಮಣ ಸವದಿ ಅವರಿಗೆ ಟಿಕೆಟ್ ನಿರಾಕರಿಸಿದ ನಂತರ ಬಿಜೆಪಿಯಿಂದ ಕಾಂಗ್ರೆಸ್‌ಗೆ ಸೇರ್ಪಡೆಯಾಗಿರುವುದು ಆಡಳಿತರೂಢ ಕೇಸರಿ ಪಕ್ಷವನ್ನು ಸುತ್ತಿಗೆ ಮತ್ತು ಇಕ್ಕಳಕ್ಕೆ ಸಿಲುಕಿಸುವಂತೆ ಮಾಡಿದೆ. ಆದರೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೂಡ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ಸೋಲಿಸಲು ಪಣ ತೊಟ್ಟಿದ್ದಾರೆ.
ಮಹೇಶ್ ಕುಮಟಳ್ಳಿ ಗೆಲುವಿಗೆ ರಮೇಶ್ ಜಾರಕಿಹೊಳಿ ಕಳೆದ ಕೆಲವು ತಿಂಗಳಿನಿಂದ ಅಥಣಿಯಲ್ಲಿಯೇ ಬೀಡು ಬಿಟ್ಟಿದ್ದಾರೆ. ಅಥಣಿಯಲ್ಲಿ ಜನಪ್ರಿಯ ನಾಯಕರಾಗಿರುವ ಕುಮಟಳ್ಳಿ ಅವರು ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ವಿಭಾಗಗಳ ಬೆಂಬಲವನ್ನು ಹೊಂದಿದ್ದಾರೆ. ಏಕೆಂದರೆ ಕಾಂಗ್ರೆಸ್‌ನಿಂದ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದರು.

2013ರಲ್ಲಿ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಕುಮಟಳ್ಳಿಯನ್ನು 24,000 ಮತಗಳಿಂದ ಸೋಲಿಸಿದ್ದರು, ಆದರೆ 2018 ರ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಅದೇ ಪ್ರತಿಸ್ಪರ್ಧಿಗೆ ಸ್ಥಾನವನ್ನು ಬಿಟ್ಟುಕೊಟ್ಟರು. ಗೆದ್ದ ನಂತರ ಮಹೇಶ್ ಕುಮಟಳ್ಳಿ ಬಿಜೆಪಿಗೆ ಪಕ್ಷಾಂತರ ಮಾಡಿ ಬಿಜೆಪಿ ಅಧಿಕಾರಕ್ಕೆ ತರಲು ಎಚ್‌ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಿದ 17 ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ತಂಡದಲ್ಲಿದ್ದವರು. ಮುಂದಿನ ವರ್ಷದ ನಡೆದ ಉಪಚುನಾವಣೆಯಲ್ಲಿ ಮಹೇಶ್ ಕುಮಟಳ್ಳಿ ಗೆಲುವು ಸಾಧಿಸಿದ್ದರು.
ಅಥಣಿ ಕ್ಷೇತ್ರದ 2.20 ಲಕ್ಷ ಮತದಾರರಲ್ಲಿ ಸುಮಾರು ಒಂದು ಲಕ್ಷ ಲಿಂಗಾಯತರು, 40,000 ಮರಾಠರು ಇದ್ದರೇ, ಇತರ ಪ್ರಮುಖ ಮತದಾರರೆಂದರೆ ಪರಿಶಿಷ್ಟ ಜಾತಿಯ 30,000 ಮತಗಳು ಮತ್ತು 28,000 ಮುಸ್ಲಿಮರು ಇದ್ದಾರೆ. ಲಿಂಗಾಯತರು ಪ್ರಮುಖ ಮತದಾರರಾಗಿರುವುದರಿಂದ ಅಥಣಿಯಲ್ಲಿ ಕಣದಲ್ಲಿರುವ ಬಹುತೇಕ ಅಭ್ಯರ್ಥಿಗಳು ಹಲವು ದಶಕಗಳಿಂದ ಲಿಂಗಾಯತರೇ ಆಗಿದ್ದಾರೆ.
ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಮತ್ತು ಮಹೇಶ್ ಕುಮಠಳ್ಳಿ ಇವರಿಬ್ಬರೂ ಕೂಡ ಈ ಪ್ರಬಲ ಸಮುದಾಯದಿಂದ ಬಂದವರಾಗಿದ್ದು, ಅಂತಿಮವಾಗಿ ಯಾರ ಬೆಂಬಲ ಪಡೆಯುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಅಥಣಿಯಲ್ಲಿ ಸ್ಪರ್ಧೆ ಸಮಬಲಗೊಂಡಿದೆ.
-
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್












Click it and Unblock the Notifications