ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಮೇಶ್ ಜಾರಕಿಹೊಳಿ ನನ್ನ ಆಪ್ತ ಸ್ನೇಹಿತರು : ಡಿ.ಕೆ.ಶಿವಕುಮಾರ್

|
Google Oneindia Kannada News

Recommended Video

ರಮೇಶ್ ಜಾರಕಿಹೊಳಿ ನನ್ನ ಆಪ್ತ ಸ್ನೇಹಿತರು ಎಂದು ಹೇಳಿಕೆ ಕೊಟ್ಟ ಡಿ ಕೆ ಶಿವಕುಮಾರ್ | Oneindia Kannada

ಬೆಂಗಳೂರು, ಸೆಪ್ಟೆಂಬರ್ 14 : 'ಸಚಿವ ರಮೇಶ್ ಜಾರಕಿಹೊಳಿ ಅವರು ನನ್ನ ಸ್ನೇಹಿತರು. ಅವರ ಕಷ್ಟ-ಸುಖದಲ್ಲಿ ನಾನು ಜೊತೆಗಿದ್ದೆ. ಶೀಘ್ರದಲ್ಲೇ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ' ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.

ಶುಕ್ರವಾರ ಸದಾಶಿವನಗರ ನಿವಾಸದಲ್ಲಿ ಡಾ.ಜಿ.ಪರಮೇಶ್ವರ ಅವರ ಜೊತೆ ಸಭೆ ನಡೆಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, 'ರಮೇಶ್ ಜಾರಕಿಹೊಳಿ ನನ್ನ ಆಪ್ತ ಸ್ನೇಹಿತ. ಶೀಘ್ರದಲ್ಲೇ ಅವರನ್ನು ಭೇಟಿ ಮಾಡುವೆ ಎಂದರು.

ಬೆಳಗಾವಿ ಕಾಂಗ್ರೆಸ್ ಅಸಮಾಧಾನ : ರಮೇಶ್ v/s ಡಿ.ಕೆ.ಶಿವಕುಮಾರ್!ಬೆಳಗಾವಿ ಕಾಂಗ್ರೆಸ್ ಅಸಮಾಧಾನ : ರಮೇಶ್ v/s ಡಿ.ಕೆ.ಶಿವಕುಮಾರ್!

ಜಾರಕಿಹೊಳಿ ಸಹೋದರರು ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಅಸಮಾಧಾನಗೊಂಡಿದ್ದರು. ಬೆಳಗಾವಿ ರಾಜಕೀಯದಲ್ಲಿ ಡಿ.ಕೆ.ಶಿವಕುಮಾರ್ ಹಸ್ತಕ್ಷೇಪವನ್ನು ಕಡಿಮೆ ಮಾಡಬೇಕು ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದರು.

ಕಾಂಗ್ರೆಸ್‌ ಮುಂದೆ 4 ಬೇಡಿಕೆ ಇಟ್ಟ ಜಾರಕಿಹೊಳಿ ಸಹೋದರರುಕಾಂಗ್ರೆಸ್‌ ಮುಂದೆ 4 ಬೇಡಿಕೆ ಇಟ್ಟ ಜಾರಕಿಹೊಳಿ ಸಹೋದರರು

ಜಾರಕಿಹೊಳಿ ಸಹೋದರರು ತಮ್ಮ ಮೇಲೆ ಅಸಮಾಧಾನಗೊಂಡ ಬಳಿಕ ಮೊದಲ ಬಾರಿಗೆ ಡಿ.ಕೆ.ಶಿವಕುಮಾರ್ ರಮೇಶ್ ಜಾರಕಿಹೊಳಿ ಅವರ ಬಗ್ಗೆ ಮಾತನಾಡಿದ್ದಾರೆ. ಡಿ.ಕೆ.ಶಿವಕುಮಾರ್ ಮಾತುಕತೆ ನಡೆಸಿದ ಬಳಿಕ ಜಾರಕಿಹೊಳಿ ಸಹೋದರರ ಅಸಮಾಧಾನ ಶಮನವಾಗುವುದೇ? ಕಾದು ನೋಡಬೇಕು....

ಉದ್ಯಮ, ರಾಜಕೀಯ : ಜಾರಕಿಹೊಳಿ ಸಹೋದರರ ಪ್ರಭಾವವಿದುಉದ್ಯಮ, ರಾಜಕೀಯ : ಜಾರಕಿಹೊಳಿ ಸಹೋದರರ ಪ್ರಭಾವವಿದು

ಮಾಧ್ಯಮಗಳು ವೈಭವೀಕರಿಸುತ್ತಿವೆ

ಮಾಧ್ಯಮಗಳು ವೈಭವೀಕರಿಸುತ್ತಿವೆ

'ಬೆಳಗಾವಿ ಕಾಂಗ್ರೆಸ್‌ನಲ್ಲಿ ಬಹಳ ದೊಡ್ಡ ಸಮಸ್ಯೆ ಏನಿಲ್ಲ. ಕ್ಷೇತ್ರದ ಅಭಿವೃದ್ಧಿ ಬಗ್ಗೆ ಕೆಲವು ಗೊಂದಲಗಳಿವೆ. ನಾವು ಕುಳಿತು ಮಾತನಾಡಿ ಅವುಗಳನ್ನು ಬಗೆಹರಿಸಿಕೊಳ್ಳುತ್ತೇವೆ. ಮಾಧ್ಯಮಗಳು ಇದನ್ನು ವೈಭವೀಕರಿಸುತ್ತಿವೆ' ಎಂದು ಡಾ.ಜಿ.ಪರಮೇಶ್ವರ ಹೇಳಿದರು.

ಹಸ್ತಕ್ಷೇಪ ಮಾಡುವುದು ತಪ್ಪು

ಹಸ್ತಕ್ಷೇಪ ಮಾಡುವುದು ತಪ್ಪು

ಕಳೆದ ವಾರ ಬೆಳಗಾವಿಯಲ್ಲಿ ಮಾತನಾಡಿದ್ದ ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಅವರು, 'ಬೆಳಗಾವಿ ರಾಜಕೀಯದಲ್ಲಿ ಡಿ.ಕೆ.ಶಿವಕುಮಾರ್ ಹಸ್ತಕ್ಷೇಪ ಮಾಡುವುದು ತಪ್ಪು. ಅಂತೆಯೇ ನಾನು ಬೆಂಗಳೂರಿನ ರಾಜಕೀಯದಲ್ಲಿ ಹಸ್ತಕ್ಷೇಪ ಮಾಡಿದರೆ ತಪ್ಪಾಗುತ್ತದೆ' ಎಂದು ಹೇಳಿದ್ದರು.

ಪಕ್ಷ ಹೇಳಿದ ಕೆಲಸ ಮಾಡುವೆ

ಪಕ್ಷ ಹೇಳಿದ ಕೆಲಸ ಮಾಡುವೆ

ಶುಕ್ರವಾರ ಡಿ.ಕೆ.ಶಿವಕುಮಾರ್ ಅವರು, 'ಸಚಿವ ರಮೇಶ್ ಜಾರಕಿಹೊಳಿ ಅವರು ನನ್ನ ಸ್ನೇಹಿತರು. ಅವರ ಕಷ್ಟ-ಸುಖದಲ್ಲಿ ನಾನು ಜೊತೆಗಿದ್ದೆ. ಶೀಘ್ರದಲ್ಲೇ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ' ಎಂದು ಹೇಳಿದ್ದಾರೆ.

ಕಳೆದ ವಾರ ಮಾತನಾಡಿದ್ದ ಅವರು, 'ನಾನು ಯಾವ ಜಿಲ್ಲೆಯ ರಾಜಕಾರಣದಲ್ಲೂ ಹಸ್ತಕ್ಷೇಪ ಮಾಡಿಲ್ಲ. ನನಗೆ ಯಾವ ಜಿಲ್ಲೆಯ ರಾಜಕಾರಣವೂ ಬೇಡ, ಪಕ್ಷ ಹೇಳಿದ ಕೆಲಸವನ್ನು ನಾನು ಮಾಡುವೆ' ಎಂದು ಹೇಳಿದ್ದರು.

ಸಿದ್ದರಾಮಯ್ಯ ಜೊತೆ ಸಭೆ

ಸಿದ್ದರಾಮಯ್ಯ ಜೊತೆ ಸಭೆ

ರಮೇಶ್ ಮತ್ತು ಸತೀಶ್ ಜಾರಕಿಹೊಳಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತರು. ಸೆ.16ರಂದು ಸಿದ್ದರಾಮಯ್ಯ ಬೆಂಗಳೂರಿಗೆ ವಾಪಸ್ ಆಗಲಿದ್ದು, ಸೆ.17ರಂದು ಜಾರಕಿಹೊಳಿ ಸಹೋದರರ ಜೊತೆ ಸಭೆ ನಡೆಸುವ ಸಾಧ್ಯತೆ ಇದೆ.

English summary
Municipality and Local Bodies Minister Ramesh Jarkiholi is my personal friend. I will meet him soon and talk to him said water resource minister D.K.Shiva Kumar. Jarkiholi brothers attacked against D.K.Shiva Kumar for his interference in Belagavi district politics.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X