ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಳಗಾವಿ ಹಾಗೂ ಹಾಸನಕ್ಕೆ ಉಸ್ತುವಾರಿಯನ್ನು ನೇಮಿಸಿದ ಯಡಿಯೂರಪ್ಪ

|
Google Oneindia Kannada News

ಬೆಂಗಳೂರು, ಜೂನ್ 2: ಎರಡು ಜಿಲ್ಲೆಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉಸ್ತುವಾರಿಗಳನ್ನು ನೇಮಿಸಿದ್ದಾರೆ.

Recommended Video

ಸತ್ತ ಕೋತಿಯ ಮುಂದೆ ಕಣ್ಣೀರಿಟ್ಟು ಅಂತಿಮ ವಿದಾಯ ಹೇಳಿದ ಗೂಳಿ | Oneindia Kannada

ಬೆಳಗಾವಿ ಜಿಲ್ಲಾ ಉಸ್ತುವಾರಿ ಅಧಿಕಾರ ಪಡೆದುಕೊಳ್ಳುವಲ್ಲಿ ರಮೇಶ್ ಜಾರಕಿಹೊಳಿ ಕೊನೆಗೂ ಯಶಸ್ವಿಯಾಗಿದ್ದಾರೆ. ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ. ಗೋಪಾಲಯ್ಯ ಅವರಿಗೆ ಹಾಸನ ಜಿಲ್ಲೆಯ ಉಸ್ತುವಾರಿ ನೀಡಲಾಗಿದೆ.

ರಮೇಶ್ ಜಾರಕಿಹೊಳಿಯ ಆ ಹೇಳಿಕೆ ಅಷ್ಟು ಪರಿಣಾಮ ಬೀರಿತಾ?ರಮೇಶ್ ಜಾರಕಿಹೊಳಿಯ ಆ ಹೇಳಿಕೆ ಅಷ್ಟು ಪರಿಣಾಮ ಬೀರಿತಾ?

ಆಹಾರ ಸಚಿವ ಕೆ ಗೋಪಾಲಯ್ಯಗೆ ಹಾಸನ ಉಸ್ತುವಾರಿ ನೀಡಲಾಗಿದೆ. ಈ ಮೊದಲು ಹಾಸನ ಸಚಿವ ಮಾಧುಸ್ವಾಮಿ ಅವರಿಗೆ ಹಾಸನ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ನೀಡಲಾಗಿತ್ತು. ಇದೀಗ ಆ ಜವಾಬ್ದಾರಿಯನ್ನು ಗೋಪಾಲಯ್ಯಗೆ ನೀಡಲಾಗಿದೆ.

Ramesh Jarkiholi Is The New Belagavi District In Charge Minister K Gopalaiah For Hassan District

ಮೊದಲು ಜಿಲ್ಲಾ ಉಸ್ತುವಾರಿ ನೇಮಕ ಮಾಡಿದಾಗ ಬೆಳಗಾವಿಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜಗದೀಶ್ ಶೆಟ್ಟರ್ ಗೆ ನೀಡಿದ್ದರು.

ಬೆಳಗಾವಿ ಉಸ್ತುವಾರಿ ಸ್ಥಾನದ ಮೇಲೆ ಈ ಮೊದಲು ಉಮೇಶ್ ಕತ್ತಿ, ಶಶಿಕಲಾ ಜೊಲ್ಲೆ, ಲಕ್ಷ್ಮಣ್ ಸವದಿ ಹಾಗೂ ರಮೇಶ್ ಜಾರಕಿಹೊಳಿ ನಡುವೆ ಪೈಪೋಟಿ ಉಂಟಾಗಿದ್ದರಿಂದ ಬೆಳಗಾವಿಯನ್ನು ಇವರಿಗೆ ಕೊಡದೆ ಸಚಿವ ಜಗದೀಶ್ ಶೆಟ್ಟರ್ ಗೆ ಸಿಎಂ ವಹಿಸಿದ್ದರು. ಇದೀಗ ರಮೇಶ್ ಜಾರಕಿಹೊಳಿ ಅವರಿಗೆ ಬೆಳಗಾವಿ ಉಸ್ತುವಾರಿ ನೀಡಲಾಗಿದೆ.

Ramesh Jarkiholi Is The New Belagavi District In Charge Minister K Gopalaiah For Hassan District

ಬೆಳಗಾವಿ ಜಿಲ್ಲಾ ಉಸ್ತುವಾರಿ ಹಂಚಿಕೆ ವೇಳೆ ರಮೇಶ್ ಜಾರಕಿಹೊಳಿಗೆ ಬೆಳಗಾವಿ ಉಸ್ತುವಾರಿ ಜವಾಬ್ದಾರಿ ಸಿಗಲಿದೆ ಅಂದುಕೊಳ್ಳಲಾಗಿತ್ತು. ಆದರೆ, ಜಗದೀಶ್ ಶೆಟ್ಟರ್ ಅವರಿಗೆ ಬೆಳಗಾವಿ ಉಸ್ತುವಾರಿ ವಹಿಸಲಾಗಿತ್ತು.

ಇದೀಗ ಬೆಳಗಾವಿ ಉಸ್ತುವಾರಿ ಪಡೆಯುವಲ್ಲಿ ರಮೇಶ್ ಜಾರಕಿಹೊಳಿ ಯಶಸ್ವಿಯಾಗಿದ್ದಾರೆ. ಅಂದುಕೊಂಡ ಖಾತೆ ಜೊತೆಗೆ ತನ್ನ ಜಿಲ್ಲೆಯ ಉಸ್ತುವಾರಿಯನ್ನು ರಮೇಶ್ ಜಾರಕಿಹೊಳಿ ಪಡೆದಿದ್ದಾರೆ.

ರಮೇಶ್ ಜಾರಕಿಹೊಳಿ ಅವರು ಈಗ ಬೆಳಗಾವಿ ಜಿಲ್ಲಾ ಉಸ್ತುವಾರಿ ನೋಡಿಕೊಳ್ಳುತ್ತಾರೆ.ಕೋರೆ,ಕತ್ತಿ ಸಹೋದರರ ಕಿತ್ತಾಟದ ಬಳಿಕ ಜಾರಕಿಹೊಳಿ ಸಾಹುಕಾರ್ ಗೆ ಅದೃಷ್ಠ ಒಲಿದಿದೆ.

ಮೈತ್ರಿ ಸರ್ಕಾರದ ಪತನದ ರೂವಾರಿ ರಮೇಶ್ ಜಾರಕಿಹೊಳಿ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಅಲ್ಲದೇ ಬಿಜೆಪಿ ಸರ್ಕಾರದಲ್ಲಿ ಹಠಕ್ಕೆ ಬಿದ್ದು ಜಲಸಂಪನ್ಮೂಲ ಖಾತೆ ತಮ್ಮದಾಗಿಸಿಕೊಂಡಿದ್ದರು. ಇ

ದೀಗ ಬೆಳಗಾವಿ ಉಸ್ತುವಾರಿ ಆಗಿರುವ ರಮೇಶ್ ಜಾರಕಿಹೊಳಿ ಮತ್ತೊಮ್ಮೆ ಮೇಲುಗೈ ಸಾಧಿಸಿದ್ದಾರೆ.

English summary
Karnataka Chief minister Appointed Incharge For Belagavi And Hassan districts.Ramesh Jarkiholi Is The New Belagavi District In Charge Minister K Gopalaiah For Hassan District.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X