ಆರ್.ಶಂಕರ್, ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ಅನರ್ಹತೆಗೆ ಕಾರಣ
ಬೆಂಗಳೂರು, ಜುಲೈ 25: ದೀರ್ಘವಾಗಿ ನಡೆದ ಸುದ್ದಿಗೋಷ್ಠಿಯಲ್ಲಿ ಸ್ಪೀಕರ್ ರಮೇಶ್ ಕುಮಾರ್ ಅವರು, ಎಲ್ಲ ಸಾಕ್ಷ್ಯಗಳನ್ನು ಉಲ್ಲೇಖಿಸಿ ಶಾಸಕರಾದ ಆರ್.ಶಂಕರ್, ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ಅವರುಗಳನ್ನು ವಿಧಾನಸಭೆ ಸದಸ್ಯತ್ವ ಸ್ಥಾನದಿಂದ ಅನರ್ಹ ಮಾಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿದ ಸ್ಪೀಕರ್ ಅವರು, ರಾಣೆಬೆನ್ನೂರು ಶಾಸಕ ಆರ್.ಶಂಕರ್, ಗೋಖಾಕ್ ಶಾಸಕ ರಮೇಶ್ ಜಾರಕಿಹೊಳಿ, ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಅವರುಗಳನ್ನು 15ನೇ ವಿಧಾನಸಭೆಯ ಸದಸ್ಯತ್ವ ಸ್ಥಾನಕ್ಕೆ ಅನರ್ಹ ಗೊಳಿಸಿ ಆದೇಶ ಹೊರಡಿಸಿದ್ದಾರೆ.
ಈ ಮೂವರನ್ನು ಯಾವ ಕಾರಣದಿಂದ ಅನರ್ಹಗೊಳಿಸುವ ನಿರ್ಧಾರಕ್ಕೆ ಬಂದೆ ಎಂಬುದನ್ನು ಸಾಕ್ಷ್ಯಗಳ ಮೂಲಕ, ಹಳೆಯ ಪ್ರಕರಣಗಳ ಉಲ್ಲೇಖಗಳ ಮೂಲಕ, ಸಂವಿಧಾನದ ಪರಿಚ್ಛೇಧನಗಳ ಉಲ್ಲೇಖಗಳ ಮೂಲಕ ವಿವರಿಸಿದ ರಮೇಶ್ ಕುಮಾರ್ ಅವರು ಈ ಮೂವರೂ ಶಾಸಕರು 15 ನೇ ವಿಧಾನಸಭೆ ಅಸ್ಥಿತ್ವದಲ್ಲಿ ಇರುವ ವರೆಗೂ ಯಾವುದೇ ಕಾರಣಕ್ಕೂ ಇವರುಗಳು ಸದನವನ್ನು ಪ್ರವೇಶಿಸುವಂತಿಲ್ಲ ಎಂದು ಹೇಳಿದರು.

ಪಕ್ಷವನ್ನು ಕಾಂಗ್ರೆಸ್ ಜೊತೆ ವಿಲೀನ ಮಾಡಿದ್ದ ಆರ್.ಶಂಕರ್
ಕೆಪಿಜೆಪಿ ಪಕ್ಷದಿಂದ ರಾಣೆಬೆನ್ನೂರು ಕ್ಷೇತ್ರದಿಂದ ಗೆದ್ದಿದ್ದ ಆರ್.ಶಂಕರ್ ಮೈತ್ರಿ ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದರು. ನಂತರ ಜೂನ್ 14 ರಂದು ತಮ್ಮ ಪಕ್ಷವನ್ನು ಕಾಂಗ್ರೆಸ್ ಜೊತೆ ವಿಲೀನ ಮಾಡಿದ್ದರು. ಜೂನ್ 25 ರಂದು ವಿಲೀನ ಕಾರ್ಯ ಮುಗಿಸಿದ್ದರು. ಹಾಗಾಗಿ ಆರ್.ಶಂಕರ್ ಅವರು ಕಾಂಗ್ರೆಸ್‌ನ ಸದಸ್ಯರೆಂದೇ ಅಧಿಕೃತವಾಗಿ ಗುರುತಿಸಲ್ಪಡುತ್ತಿದ್ದರು.

ತಮಿಳುನಾಡು ಪ್ರಕರಣ ಉಲ್ಲೇಖ ಮಾಡಿದ ಸ್ಪೀಕರ್
ಆದರೆ ಅವರು ಜೂನ್ 7 ರಂದು ರಾಜ್ಯಪಾಲರಿಗೆ ಪತ್ರ ನೀಡಿ, ತಾವು ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆಯುತ್ತಿರುವುದಾಗಿ ಹೇಳಿದ್ದರು. ಇದು ಪಕ್ಷ ವಿರೋಧಿ ನಡೆ ಎಂದು ಗುರುತಿಸಲಾಗಿದೆ ಎಂದ ಸ್ಪೀಕರ್ ಅವರು, ತಮಿಳುನಾಡು ಪ್ರಕರಣವನ್ನು ಉಲ್ಲೇಖಿಸಿ ಆರ್.ಶಂಕರ್ ಅವರನ್ನು 15 ನೇ ವಿಧಾನಸಭೆ ಸದಸ್ಯ ಸ್ಥಾನದಿಂದ ಉಚ್ಛಾಟನೆ ಮಾಡುವುದಾಗಿ ಹೇಳಿದರು.

ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ಮೇಲೆ ಮುಂಚೆಯೇ ದೂರು
ಇನ್ನು ಮಹೇಶ್ ಕುಮಟಳ್ಳಿ, ರಮೇಶ್ ಜಾರಕಿಹೊಳಿ ಅವರ ಅನರ್ಹತೆ ಬಗ್ಗೆ ಸುದೀರ್ಘ ಕಾರಣ ನೀಡಿದ ರಮೇಶ್ ಕುಮಾರ್ ಅವರು. ಹಿಂದೆ ಫೆಬ್ರವರಿ ತಿಂಗಳಿನಲ್ಲಿಯೇ ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ಅವರು ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ, ಬಿ.ನಾಗೇಂದ್ರ, ಉಮೇಶ್ ಜಾಧವ್ ಅವರುಗಳ ವಿರುದ್ಧ ದೂರು ನೀಡಿದ್ದರು. ಅದರಲ್ಲಿ ಜಾಧವ್ ಮತ್ತು ನಾಗೇಂದ್ರ ಅವರ ವಿರುದ್ಧ ನೀಡಿದ್ದ ದೂರು ಹಿಂಪಡೆದರು. ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ಅವರ ಮೇಲಿನ ದೂರು ಚಾಲ್ತಿಯಲ್ಲಿತ್ತು.

ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ಅನರ್ಹ
ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ಅವರುಗಳು ವಿಚಾರಣೆಗೆ ಹಾಜರಾಗಲಿಲ್ಲ, ಅಲ್ಲದೆ, ಅವರು ಪಕ್ಷಾಂತರ ಚಟುವಟಿಕೆ ನಡೆಸಿದ್ದು ಸಹ ಸ್ಪಷ್ಟವಾಗಿ ಗೋಚರ ಆಗುತ್ತಿತ್ತು. ಹಾಗಾಗಿ ಅವರನ್ನು 15 ನೇ ವಿಧಾನಸಭೆಯ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಲಾಗುತ್ತಿದೆ ಎಂದು ರಮೇಶ್ ಕುಮಾರ್ ಹೇಳಿದರು.

ಉಳಿದ ಶಾಸಕರ ವಿರುದ್ಧ ದೂರು ಇತ್ಯರ್ಥ ಕೆಲವು ದಿನಗಳಲ್ಲಿ
ಇನ್ನುಳಿದ ಅತೃಪ್ತ ಶಾಸಕರ ವಿರುದ್ಧ ಸಲ್ಲಿಸಿರುವ ದೂರುಗಳನ್ನು ವಿಲೇವಾರಿ ಮಾಡಲು ಇನ್ನಷ್ಟು ಸಮಯ ಬೇಕು ಎಂದು ರಮೇಶ್ ಕುಮಾರ್ ಅವರು ಹೇಳಿದ್ದು. 'ನಾನು ಯಾವುದೇ ನಿರ್ಣಯ ನೀಡುವ ಮೊದಲು ಅದಕ್ಕೆ ಸೂಕ್ತ ಸಾಕ್ಷ್ಯಗಳು, ದಾಖಲೆಗಳು ಇರಬೇಕು ಆತುರವಾಗಿ ತೀರ್ಪು ನೀಡಲು ಸಾಧ್ಯವಾಗುವುದಿಲ್ಲ ಹಾಗಾಗಿ ನಾನು ಕೆಲವು ಅಧ್ಯಯನಗಳನ್ನು ಮಾಡಿ, ನ್ಯಾಯವಾದಿಗಳ ಸಲಹೆ ಪಡೆದು ಶೀಘ್ರವಾಗಿಯೇ ಅವರ ರಾಜೀನಾಮೆ ಬಗ್ಗೆ ತೀರ್ಮಾನ ನೀಡುತ್ತೇನೆ' ಎಂದು ಹೇಳಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications