ಬಿ. ಎಲ್. ಸಂತೋಷ್ ಭೇಟಿಯಾದ ರಮೇಶ್ ಜಾರಕಿಹೊಳಿ
ಬೆಂಗಳೂರು, ನವೆಂಬರ್ 20: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ದೆಹಲಿಯಲ್ಲಿದ್ದಾರೆ. ಬಿ. ಎಲ್. ಸಂತೋಷ್ ಅವರನ್ನು ಭೇಟಿ ಮಾಡಿದ್ದು, ಕುತೂಹಲಕ್ಕೆ ಕಾರಣವಾಗಿದೆ.
ಶುಕ್ರವಾರ ರಮೇಶ್ ಜಾರಕಿಹೊಳಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಗಳು ಹಾಗೂ ಹಿರಿಯ ನಾಯಕ ಬಿ. ಎಲ್. ಸಂತೋಷ್ ಭೇಟಿ ಮಾಡಿದರು. ಸಚಿವ ಸಂಪುಟ ವಿಸ್ತರಣೆ ಚರ್ಚೆ ಹಿನ್ನಲೆಯಲ್ಲಿ ಈ ಭೇಟಿ ಬಗ್ಗೆ ಹಲವಾರು ಪ್ರಶ್ನೆಗಳು ಎದ್ದಿವೆ.
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಬುಧವಾರ ದೆಹಲಿಗೆ ತೆರಳಿದ್ದರು. ಅದಕ್ಕೂ ಮೊದಲು ರಮೇಶ್ ಜಾರಕಿಹೊಳಿ ಅಲ್ಲಿದ್ದರು. ಯಡಿಯೂರಪ್ಪ ಬುಧವಾರವೇ ರಾಜ್ಯಕ್ಕೆ ವಾಪಸ್ ಆದರೂ ಸಹ ಸಚಿವರು ಅಲ್ಲಿಯೇ ಉಳಿಸಿದ್ದಾರೆ.

ಯಡಿಯೂರಪ್ಪ ಸಂಪುಟ ವಿಸ್ತರಣೆಯೋ?, ಪುನಾರಚನೆಯೋ? ಎಂದು ಚರ್ಚೆ ನಡೆಯುತ್ತಿದೆ. ಬಿಜೆಪಿ ಅಧ್ಯಕ್ಷ ಜೆ. ಪಿ. ನಡ್ಡಾ ಅವರನ್ನು ಯಡಿಯೂರಪ್ಪ ಭೇಟಿ ಮಾಡಿದಾಗ ಯಾವುದೇ ಸ್ಪಷ್ಟ ಉತ್ತರ ಸಿಕ್ಕಿಲ್ಲ.
ಬಿಜೆಪಿ ಎರಡು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಯಡಿಯೂರಪ್ಪ ಸಂಪುಟ ಸೇರುವವರು ಯಾರು? ಎಂಬ ಬಗ್ಗೆ ಚರ್ಚೆಗಳು ಆರಂಭವಾಗಿವೆ.












Click it and Unblock the Notifications