ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಮೇಶ್ ಜಾರಕಿಹೊಳಿ ರಾಜೀನಾಮೆ ಧಮ್ಕಿ: ಮೈತ್ರಿ ನಾಯಕರಿಂದ ಪ್ರತಿತಂತ್ರ

|
Google Oneindia Kannada News

Recommended Video

Lok Sabha Elections 2019 :ಆಪರೇಷನ್ ಕಮಲಕ್ಕೆ ಪ್ರತಿತಂತ್ರ ಹೂಡುತ್ತಿರುವ ಮೈತ್ರಿಪಕ್ಷಗಳು | Oneindia Kannada

ಬೆಂಗಳೂರು, ಏಪ್ರಿಲ್ 24: ರಮೇಶ್ ಜಾರಕಿಹೊಳಿ ಅವರು ರಾಜೀನಾಮೆ ಧಮ್ಕಿ ಹಾಕಿದ ಬೆನ್ನಲ್ಲೆ ಮೈತ್ರಿ ನಾಯಕರು ಎಚ್ಚರಗೊಂಡಿದ್ದು, ಬಿಜೆಪಿಯ ಆಪರೇಷನ್ ಕಮಲಕ್ಕೆ ಪ್ರತಿತಂತ್ರ ಹೆಣೆಯುವುದಕ್ಕೆ ಮುಂದಾಗಿದ್ದಾರೆ.

ನಿನ್ನೆ ಬೆಳಗಾವಿಯಲ್ಲಿ ಮತದಾನ ಮಾಡಿ ಮಾತನಾಡಿದ ರಮೇಶ್ ಜಾರಕಿಹೊಳಿ ಅವರು, ಕೆಲವೇ ದಿನಗಳಲ್ಲಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು ಜೊತೆಗೆ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೂ ರಾಜೀನಾಮೆ ನೀಡುವುದಾಗಿ ಹೇಳಿದ್ದರು.

ಬೆಳಗಾವಿ ಕಾಂಗ್ರೆಸ್‌ನಲ್ಲಿ ಮತ್ತೆ ಭಿನ್ನಮತ ಬಹಿರಂಗಬೆಳಗಾವಿ ಕಾಂಗ್ರೆಸ್‌ನಲ್ಲಿ ಮತ್ತೆ ಭಿನ್ನಮತ ಬಹಿರಂಗ

ಇದು ರಾಜ್ಯದ ಮೈತ್ರಿ ಮುಖಂಡರಲ್ಲಿ ಆತಂಕ ತಂದಿತ್ತು. ಒಬ್ಬ ಕಾಂಗ್ರೆಸ್‌ ಶಾಸಕರನ್ನು ಮತ್ತು ಪಕ್ಷೇತರ ಶಾಸಕರನ್ನು ಕಳೆದುಕೊಂಡಿರುವ ಕಾಂಗ್ರೆಸ್-ಜೆಡಿಎಸ್ ಮೈತ್ರಿಯು ರಮೇಶ್ ಜಾರಕಿಹೊಳಿ ಅವರು ಸಹ ಪಕ್ಷ ತೊರೆದರೆ ಇನ್ನಷ್ಟು ಇಕ್ಕಟ್ಟಿಗೆ ಸಿಲುಕಲಿದೆ.

ಅಲ್ಲದೆ ರಮೇಶ್ ಜಾರಕಿಹೊಳಿ ಅವರ ಜೊತೆಗೆ ಶಾಸಕ ಮಹೇಶ್ ಕುಮಠಳ್ಳಿ, ಶ್ರೀಮಂತ ಪಾಟೀಲ್ ಅವರುಗಳು ಸಹ ಇದ್ದು ಅವರೂ ಸಹ ಬಿಜೆಪಿಗೆ ಹಾರಿದರೆ ಮೈತ್ರಿಗೆ ಕಂಟಕ ತಪ್ಪಿದ್ದಲ್ಲ ಇದು ಮೈತ್ರಿ ನಾಯಕರಿಗೆ ಚೆನ್ನಾಗಿಯೇ ಅರಿವಿದೆ. ಹಾಗಾಗಿ ಅವರು ಪ್ರತಿತಂತ್ರ ಹೆಣೆಯುತ್ತಿದ್ದು, ಬಿಜೆಪಿ ಶಾಸಕರನ್ನೇ ಆಪರೇಷನ್ ಮಾಡುವ ತಂತ್ರ ಹೆಣೆದಿದ್ದಾರೆ ಎನ್ನಲಾಗಿದೆ.

ಕುತೂಹಲ ಕೆರಳಿಸಿದ ದಿನೇಶ್ ಗುಂಡೂರಾವ್ ಹೇಳಿಕೆ

ಇದಕ್ಕೆ ಸಾಕ್ಷಿಯಾಗಿ ನಿನ್ನೆಯಷ್ಟೆ ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಬಿಜೆಪಿಯ ಶಾಸಕರು ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗಿತ್ತು. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಇದೇ ರೀತಿಯ ಮಾತುಗಳನ್ನಾಡಿದ್ದರು.

ರಮೇಶ್ ಜಾರಕಿಹೊಳಿ ಜೊತೆ ಸಿಎಂ ಮಾತುಕತೆ?

ರಮೇಶ್ ಜಾರಕಿಹೊಳಿ ಜೊತೆ ಸಿಎಂ ಮಾತುಕತೆ?

ಮತ್ತೊಂದು ಕಡೆ ರಮೇಶ್ ಜಾರಕಿಹೊಳಿ ಅವರನ್ನು ಸಮಾಧಾನ ಪಡಿಸಿ ಕಾಂಗ್ರೆಸ್ ನಲ್ಲಿಯೇ ಉಳಿಸಿಕೊಳ್ಳುವ ಯತ್ನವೂ ಜಾರಿಯಲ್ಲಿದೆ ಎನ್ನಲಾಗಿದೆ. ಜೆಡಿಎಸ್‌ನ ಬಸವರಾಜ ಹೊರಟ್ಟಿ ಅವರು ಈ ಬಗ್ಗೆ ಸಲಹೆ ನೀಡಿದ್ದು, ಇಂದು ಸಿಎಂ ಕುಮಾರಸ್ವಾಮಿ ಅವರು ರಮೇಶ್ ಜಾರಕಿಹೊಳಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ ಎನ್ನಲಾಗಿದೆ.

ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಬಿಡುವ ಕುರಿತು ಸಹೋದರ ಹೇಳಿದ್ದೇನು?ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಬಿಡುವ ಕುರಿತು ಸಹೋದರ ಹೇಳಿದ್ದೇನು?

ಬಿಜೆಪಿ ಶಾಸಕರನ್ನು ಸೆಳೆಯಲು ತಂತ್ರ

ಬಿಜೆಪಿ ಶಾಸಕರನ್ನು ಸೆಳೆಯಲು ತಂತ್ರ

ಮತ್ತೊಂದು ಕಡೆ ಬಿಜೆಪಿಯ ಶಾಸಕರನ್ನು ಸೆಳೆಯಲು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ತಮ್ಮತ್ತ ಸೆಳೆಯಲು ಯತ್ನಿಸುತ್ತಿದ್ದು. ಕೆಲವರನ್ನು ಈಗಾಗಲೇ ಭೇಟಿ ಮಾಡಲಾಗಿದೆ ಎನ್ನಲಾಗಿದೆ. ಇದೇ ಕಾರಣಕ್ಕೆ ಸಿಎಂ ಅವರು ಸಹ ಪ್ರಕೃತಿ ಚಿಕಿತ್ಸೆಯನ್ನು ಮೊಟಕು ಗೊಳಿಸಿ ಬಂದಿದ್ದಾರೆ.

ಆಪರೇಷನ್ ಕಮಲಕ್ಕೆ ಮುಂದಾದ ಬಿಜೆಪಿ

ಆಪರೇಷನ್ ಕಮಲಕ್ಕೆ ಮುಂದಾದ ಬಿಜೆಪಿ

ಇನ್ನು ಬಿಜೆಪಿ ಸಹ ಆಪರೇಷನ್ ಕಮಲಕ್ಕೆ ಮುಂದಾಗಿದ್ದು, ಅದರ ಮೊದಲ ಭಾಗವಾಗಿ ರಮೇಶ್ ಜಾರಕಿಹೊಳಿ ಅವರು ಬಿಜೆಪಿ ಸೇರಲಿದ್ದಾರೆ. ಅವರ ಜೊತೆ ಇನ್ನಿಬ್ಬರು ಕಾಂಗ್ರೆಸ್ ಶಾಸಕರು ಸಹ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ. ಆಪರೇಷನ್ ಕಮಲಕ್ಕೆ ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರು ಮುಂದಾಳತ್ವ ಹೊಂದಿದ್ದಾರೆ ಎನ್ನಲಾಗಿದೆ. ಈ ಎಲ್ಲ ಘಟನಾವಳಿಗಳನ್ನು ಗಮನಿಸಿದರೆ ರಾಜ್ಯದಲ್ಲಿ ಮತ್ತೆ ರೆಸಾರ್ಟ್ ರಾಜಕೀಯ ಪ್ರಾರಂಭವಾಗುವ ಎಲ್ಲ ಸಂಭವವು ಕಾಣುತ್ತಿದೆ.

ನಾನು ಎಲ್ಲೂ ಹೋಗಿಲ್ಲ, ಕಾಂಗ್ರೆಸ್ ನಲ್ಲೇ ಇದ್ದೇನೆ: ಲಖನ್ ಜಾರಕಿಹೊಳಿನಾನು ಎಲ್ಲೂ ಹೋಗಿಲ್ಲ, ಕಾಂಗ್ರೆಸ್ ನಲ್ಲೇ ಇದ್ದೇನೆ: ಲಖನ್ ಜಾರಕಿಹೊಳಿ

English summary
Coalition leaders making new move after congress MLA Ramesh Jarkiholi threats to resign to party and MLA post. KPCC president said that BJP MLAs ready to come to our party.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X