ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿದ್ದರಾಮಯ್ಯ ಎದುರು ರಮೇಶ್ ಜಾರಕಿಹೊಳಿ ಇರಿಸಿದ ಮೂರು ಬೇಡಿಕೆಗಳು

|
Google Oneindia Kannada News

Recommended Video

ಸಿದ್ದರಾಮಯ್ಯ ಮುಂದೆ 3 ಬೇಡಿಕೆಗಳನ್ನ ಇರಿಸಿದ ರಮೇಶ್ ಜಾರಕಿಹೊಳಿ | Oneindia Kannada

ಬೆಂಗಳೂರು, ಸೆಪ್ಟೆಂಬರ್ 17: ಸಚಿವ ಸಂಪುಟದಲ್ಲಿ ಸ್ಥಾನ ಪಡೆದುಕೊಳ್ಳಲು ಪ್ರಯತ್ನಿಸುತ್ತಿರುವ ಕಾಂಗ್ರೆಸ್‌ನ ಅತೃಪ್ತ ಶಾಸಕರ ಬಂಡಾಯದ ಬಿಸಿ ದೆಹಲಿಯನ್ನು ತಲುಪಲಿದೆ.

ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಕಾಂಗ್ರೆಸ್‌ನ ಅತೃಪ್ತ ಶಾಸಕರು ಬೆಳಿಗ್ಗೆ ಸಭೆ ನಡೆಸಿದ್ದರು. ಈ ಸಂದರ್ಭದಲ್ಲಿ ಶಾಸಕರು ಸಮ್ಮಿಶ್ರ ಸರ್ಕಾರದ ವಿರುದ್ಧ ತಮ್ಮ ಅಸಮಾಧಾನಗಳನ್ನು ಹೊರಹಾಕಿದ್ದರು.

ಜಾರಕಿಹೊಳಿ ಸಹೋದರರಿಗೆ ಸಿದ್ದರಾಮಯ್ಯ 5 ಪ್ರಶ್ನೆಗಳುಜಾರಕಿಹೊಳಿ ಸಹೋದರರಿಗೆ ಸಿದ್ದರಾಮಯ್ಯ 5 ಪ್ರಶ್ನೆಗಳು

ಬಳಿಕ ಸಿದ್ದರಾಮಯ್ಯ ಅವರ ನಿವಾಸಕ್ಕೆ ತೆರಳಿ ಸುಮಾರು ಒಂದೂವರೆ ಗಂಟೆ ಚರ್ಚೆ ನಡೆಸಿದ ಬಣ, ವಿವಿಧ ಬೇಡಿಕೆಗಳನ್ನು ಅವರ ಮುಂದಿರಿಸಿದೆ.

ಚರ್ಚೆ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್‌ ಅವರ ವಿರುದ್ಧ ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದರು ಎನ್ನಲಾಗಿದೆ.

'ಸೆ. 30ರೊಳಗೆ ಸಂಪುಟ ವಿಸ್ತರಿಸಿ, ಇಲ್ಲವೇ ನಮ್ಮ ದಾರಿ ನೋಡಿಕೊಳ್ಳುತ್ತೇವೆ''ಸೆ. 30ರೊಳಗೆ ಸಂಪುಟ ವಿಸ್ತರಿಸಿ, ಇಲ್ಲವೇ ನಮ್ಮ ದಾರಿ ನೋಡಿಕೊಳ್ಳುತ್ತೇವೆ'

ಸಿದ್ದರಾಮಯ್ಯ ಅವರು ವಿದೇಶಿ ಪ್ರವಾಸದಲ್ಲಿದ್ದಾಗ ಜಾರಕಿಹೊಳಿ ಸಹೋದರರು ಪಕ್ಷದ ವಿರುದ್ಧ ಸಿಡಿದೆದ್ದಿದ್ದರು.

ಆಗ ಸಿದ್ದರಾಮಯ್ಯ ಅವರು ಊರಿಗೆ ಮರಳಿದ ಬಳಿಕ ರಾಜಕೀಯದಲ್ಲಿ ಮಹತ್ವದ ಬದಲಾವಣೆಗಳಾಗಲಿವೆ ಎಂಬ ಮಾತುಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಜಾರಕಿಹೊಳಿ ಮತ್ತು ಸಿದ್ದರಾಮಯ್ಯ ಅವರ ಭೇಟಿ ಮಹತ್ವ ಪಡೆದುಕೊಂಡಿತ್ತು.

ಮೂರು ಬೇಡಿಕೆಗಳು

ಮೂರು ಬೇಡಿಕೆಗಳು

ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ರಮೇಶ್ ಜಾರಕಿಹೊಳಿ ಮೂರು ಬೇಡಿಕೆಗಳನ್ನು ಇರಿಸಿದ್ದಾರೆ. ತಾವು ಕಾಂಗ್ರೆಸ್‌ನಲ್ಲಿಯೇ ಇರಬೇಕೆಂದರೆ ತಮ್ಮನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಬೇಕು, ಬಳ್ಳಾರಿಯ ಶಾಸಕರೊಬ್ಬರನ್ನು ಸಚಿವರನ್ನಾಗಿ ಮಾಡಬೇಕು ಮತ್ತು ತಮ್ಮ ತಂಡದಲ್ಲಿರುವ ಎಲ್ಲ ಶಾಸಕರಿಗೂ ನಿಗಮ, ಮಂಡಳಿ ನೀಡಬೇಕು ಎಂದು ಅವರು ಕೋರಿದ್ದಾರೆ.

ಹೇಗೆ ಡಿಸಿಎಂ ಮಾಡಲಿ

ಹೇಗೆ ಡಿಸಿಎಂ ಮಾಡಲಿ

ಸಿದ್ದರಾಮಯ್ಯ ಅವರಿಗೆ ತಮ್ಮ ಬೇಡಿಕೆಗಳನ್ನು ಸಲ್ಲಿಸಿ ಪರಿಹಾರ ಪಡೆಯಲು ಬಯಸಿದ್ದ ರಮೇಶ್ ಜಾರಕಿಹೊಳಿ ಅವರ ಪ್ರಯತ್ನ ಸಫಲವಾಗಲಿಲ್ಲ.

ಈಗಾಗಲೇ ಕಾಂಗ್ರೆಸ್‌ನ ಪರಮೇಶ್ವರ್ ಡಿಸಿಎಂ ಆಗಿದ್ದಾರೆ. ನಿಮ್ಮನ್ನು ಹೇಗೆ ಡಿಸಿಎಂ ಮಾಡಲು ಸಾಧ್ಯ? ಅಲ್ಲದೆ, ಡಿಸಿಎಂ ಹುದ್ದೆ ವಿಚಾರಗಳು ನನ್ನ ಕೈಯಲ್ಲಿಲ್ಲ. ಅದನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತೀರ್ಮಾನಿಸಬೇಕು ಎಂದು ಸಿದ್ದರಾಮಯ್ಯ ಮನದಟ್ಟು ಮಾಡಿದ್ದಾರೆ.

ರಾಹುಲ್ ಗಾಂಧಿ ಭೇಟಿ

ರಾಹುಲ್ ಗಾಂಧಿ ಭೇಟಿ

ರಾಜ್ಯದಲ್ಲಿನ ಪಕ್ಷದ ಬಿಕ್ಕಟ್ಟಿನ ಬಗ್ಗೆ ಸಮಾಲೋಚನೆ ನಡೆಸಿ ನಿರ್ಧಾರ ತೆಗೆದುಕೊಳ್ಳಲು ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರ ತಂಡ ಮಂಗಳವಾರ ದೆಹಲಿಗೆ ತೆರಳಲಿದೆ. ಬುಧವಾರ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

ಬಿಜೆಪಿಗೇ ಆಪರೇಷನ್?

ಬಿಜೆಪಿಗೇ ಆಪರೇಷನ್?

ಆಪರೇಷನ್ ಕಮಲ ನಡೆಸಿ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಸೆಳೆದುಕೊಳ್ಳಲು ಬಿಜೆಪಿ ಪ್ರಯತ್ನಿಸಿದೆ ಎಂಬ ಆರೋಪದ ಬೆನ್ನಲ್ಲೇ, ಜೆಡಿಎಸ್ ಮತ್ತು ಕಾಂಗ್ರೆಸ್ ಮುಖಂಡರು ಬಿಜೆಪಿ ಶಾಸಕರನ್ನು ಸೆಳೆದುಕೊಳ್ಳಲು ಮುಂದಾಗಿದೆ ಎನ್ನಲಾಗಿದೆ.

ಗುಂಡ್ಲುಪೇಟೆ ಶಾಸಕ ನಿರಂಜನ್, ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್, ಕಾರವಾರ ಶಾಸಕಿ ರೂಪಾಲಿ ನಾಯಕ್, ಕನಕಗಿರಿ ಶಾಸಕ ಬಸವರಾಜ ಬೆಡಸೂರು, ಚನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಮತ್ತು ದೇವದುರ್ಗದ ಶಾಸಕ ಶಿವನಗೌಡ ನಾಯಕ್ ಸೇರಿದಂತೆ ಬಿಜೆಪಿಯ ಕೆಲವು ಶಾಸಕರನ್ನು ಸಂಪರ್ಕಿಸಲು ಎಚ್‌ಡಿಕೆ ಮತ್ತು ಡಿ.ಕೆ. ಶಿವಕುಮಾರ್ ನೇತೃತ್ವದ ತಂಡ ಮುಂದಾಗಿದೆ ಎಂದು ಹೇಳಲಾಗಿದೆ.

ನಮ್ಮಡೆಗೆ ಬರುತ್ತಾರೆ: ನಿರಾಣಿ

ನಮ್ಮಡೆಗೆ ಬರುತ್ತಾರೆ: ನಿರಾಣಿ

ಸರ್ಕಾರವನ್ನು ನಾವು ಕೆಡವಲು ಹೋಗುವುದಿಲ್ಲ. ಅದು ತಾನಾಗಿಯೇ ಪತನವಾಗಲಿದೆ. ಆಪರೇಷನಲ್ ಕಮಲಕ್ಕೆ ನಾವು ಸಿದ್ದರಿಲ್ಲ. ಜೆಡಿಎಸ್ ಮತ್ತು ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿಯಿಲ್ಲದಿರುವುದು ಕಾಣಿಸುತ್ತಿದೆ. ಸರ್ಕಾರ ಬೀಳುವುದು ಕಂಡುಬಂದರೆ ಅವರೇ ನಮ್ಮ ಹತ್ತಿರ ಬರುತ್ತಾರೆ ಎಂದು ಬಿಜೆಪಿಯ ಮುರುಗೇಶ್ ನಿರಾಣಿ ಹೇಳಿದ್ದಾರೆ.

ಕಾಂಗ್ರೆಸ್ ಮೋಸ ಮಾಡಿದೆ

ಕಾಂಗ್ರೆಸ್ ಮೋಸ ಮಾಡಿದೆ

ಸಚಿವ ಸ್ಥಾನ ನೀಡುವುದಾಗಿ ನಂಬಿಸಿದ್ದ ಕಾಂಗ್ರೆಸ್ ನನಗೆ ಮೋಸ ಮಾಡಿದೆ. ನನಗೆ ನಂಬಿಕೆ ದ್ರೋಹ ಆಗಿದೆ.


ಸೌಜನ್ಯಕ್ಕೂ ಕಾಂಗ್ರೆಸ್‌ನವರು ನನ್ನನ್ನು ಮಾತನಾಡಿಸುತ್ತಿಲ್ಲ. ಬಿಜೆಪಿಯವರು ನನ್ನನ್ನು ಸಂಪರ್ಕಿಸಿದರೆ 24 ಗಂಟೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಿದ್ದೇನೆ ಎಂದು ಮುಳಬಾಗಿಲು ಶಾಸಕ ನಾಗೇಶ್ ಹೇಳಿಕೆ ನೀಡಿದ್ದಾರೆ.

English summary
Ramesh Jarkiholi put three demands to Siddaramaiah including giving him the post of DCM.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X