ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಾರಕಿಹೊಳಿ ಸಿಡಿ ಪ್ರಕರಣ: ಹೊಸ ಬಾಂಬ್ ಸಿಡಿಸಿದ ಜೆಡಿಎಸ್

|
Google Oneindia Kannada News

ಬೆಂಗಳೂರು, ಮಾರ್ಚ್ 27: ಭಾರೀ ತಿರುವು ಪಡೆದುಕೊಳ್ಳುತ್ತಿರುವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಹತ್ವದ ಸರಣಿ ಟ್ವೀಟ್ ಗಳನ್ನು ಮಾಡಿದ್ದಾರೆ.

ಇಡೀ ಪ್ರಕರಣ ಸಾಗುತ್ತಿರುವ ದಿಕ್ಕನ್ನು ನೋಡಿದರೆ ಇದೊಂದು ವ್ಯವಸ್ಥಿತ ಷಡ್ಯಂತ್ರ ಎಂದಿರುವ ಜೆಡಿಎಸ್, ಪೊಲೀಸರಿಗೆ ಫ್ರೀಂ ಹ್ಯಾಂಡ್ ನೀಡಬೇಕೆಂದು ಯಡಿಯೂರಪ್ಪ ಸರಕಾರವನ್ನು ಒತ್ತಾಯಿಸಿದೆ. ಪಕ್ಷ ಮಾಡಿದ ಟ್ವೀಟ್ ಹೀಗಿದೆ:

ಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿಗೆ ಸಿದ್ದರಾಮಯ್ಯ ಬುದ್ಧಿವಾದಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿಗೆ ಸಿದ್ದರಾಮಯ್ಯ ಬುದ್ಧಿವಾದ

"ಆರಂಭದಲ್ಲಿ ಲೈಂಗಿಕ ಹಗರಣ, ಲೈಂಗಿಕ ಶೋಷಣೆಯಂತೆ ಕಾಣುತ್ತಿದ್ದ ಸಿ.ಡಿ ಹಗರಣ ಈಗ ಷಡ್ಯಂತ್ರದಂತೆ ಕಾಣುತ್ತಿದೆ. ಪ್ರಕರಣದಲ್ಲಿ @DKShivakumar ಮತ್ತು @siddaramaiah ಹೆಸರು ಕೇಳಿಬರುವ ಮೂಲಕ ಪ್ರಕರಣ ಈಗ 'ಹನಿಟ್ರ್ಯಾಪ್‌' ಸ್ವರೂಪ ಪಡೆದುಕೊಳ್ಳುತ್ತಿದೆ ಇದೆಲ್ಲದರ ನಡುವೆ ರಾಷ್ಟ್ರದ ಎದುರು ನಾಚಿಕೆ ಪಡುವ ಸ್ಥಿತಿಯಲ್ಲಿ ರಾಜ್ಯ ನಿಂತಿದೆ"ಎಂದು ಜೆಡಿಎಸ್ ಅಭಿಪ್ರಾಯ ವ್ಯಕ್ತ ಪಡಿಸಿದೆ.

ಸಿಡಿ ಗರ್ಲ್ ದೂರು: ಸರಕಾರವನ್ನೇ ಉರುಳಿಸಿದ್ದೇನೆ, ನಾಳೆಯಿಂದ ನಮ್ಮ ಆಟ ಶುರು: ಜಾರಕಿಹೊಳಿ ಪ್ರತಿಕ್ರಿಯೆಸಿಡಿ ಗರ್ಲ್ ದೂರು: ಸರಕಾರವನ್ನೇ ಉರುಳಿಸಿದ್ದೇನೆ, ನಾಳೆಯಿಂದ ನಮ್ಮ ಆಟ ಶುರು: ಜಾರಕಿಹೊಳಿ ಪ್ರತಿಕ್ರಿಯೆ

ಜಾರಕಿಹೊಳಿ ಪ್ರಕರಣ ಎಚ್ಡಿಕೆ ಗುಮಾನಿ

"ರಾತ್ರಿ ಒಂದು ಆಡಿಯೊ ಬಿಡುಗಡೆಯಾಗುವುದು, ಬೆಳಗ್ಗೆ ಅದಕ್ಕೊಂದು ಸ್ಪಷ್ಟನೆಯ ವಿಡಿಯೊ ಬಿಡುಗಡೆಯಾಗುವುದು... ಇವೆಲ್ಲವನ್ನೂ ಗಮನಿಸುತ್ತಿದ್ದರೆ ಇದರ ಹಿಂದೆ ದೊಡ್ಡ ಕೂಟವೇ ಕೆಲಸ ಮಾಡುತ್ತಿರುವಂತೆ ಕಾಣುತ್ತಿದೆ. ಸಂತ್ರಸ್ತೆಗೆ ನ್ಯಾಯ ಕೊಡಿಸುವ ನೆಪದಲ್ಲಿ, ಆಕೆಯನ್ನು ಮುಂದಿಟ್ಟುಕೊಂಡು ಯಾರೋ ಆಟವಾಡುತ್ತಿರುವುದು ಸ್ಪಷ್ಟವಾಗುತ್ತಲಿದೆ." ಎಂದು ಜೆಡಿಎಸ್ ಗುಮಾನಿ ವ್ಯಕ್ತ ಪಡಿಸಿದೆ.

 ಪೊಲೀಸರು ದಿಟ್ಟತನ ಮೆರೆಯುವುದು ಅತ್ಯಗತ್ಯ

ಪೊಲೀಸರು ದಿಟ್ಟತನ ಮೆರೆಯುವುದು ಅತ್ಯಗತ್ಯ

"ಪ್ರಕರಣವನ್ನು ಅದರಪಾಡಿಗೆ ಬಿಟ್ಟು, ಆಗುವ ಬೆಳವಣಿಗೆಯನ್ನು ರಾಷ್ಟ್ರ ನೋಡಿ ಮನರಂಜನೆ ಪಡೆಯುವಂತೆ ಮಾಡುವುದು ರಾಜ್ಯಕ್ಕೆ, ನಮ್ಮ ಪೊಲೀಸರಿಗೆ ಮಾಡುವ ಅತಿ ದೊಡ್ಡ ಅಪಮಾನವಾಗುತ್ತದೆ. ಈ ಸಂದರ್ಭದಲ್ಲಿ ಪೊಲೀಸರು ದಿಟ್ಟತನ ಮೆರೆಯುವುದು ಅತ್ಯಗತ್ಯ. ಯಾವುದೇ ರಾಜಕೀಯ ಒತ್ತಡಗಳನ್ನೂ ಲೆಕ್ಕಿಸದೇ ತನಿಖೆ ನಡೆಸಿ ಅಸಲಿ ಸತ್ಯ ಬಯಲಿಗೆಳೆಯಬೇಕು" ಎಂದು ಪಕ್ಷ ಹೇಳಿದೆ.

 ಲೈಂಗಿಕ ಶೋಷಣೆಯೋ, ಷಡ್ಯಂತ್ರವೋ, ಹನಿಟ್ರ್ಯಾಪ್‌

ಲೈಂಗಿಕ ಶೋಷಣೆಯೋ, ಷಡ್ಯಂತ್ರವೋ, ಹನಿಟ್ರ್ಯಾಪ್‌

"ಲೈಂಗಿಕ ಶೋಷಣೆಯೋ, ಷಡ್ಯಂತ್ರವೋ, ಹನಿಟ್ರ್ಯಾಪ್‌ ಆಗಿದೆಯೋ ಎಂಬ ಪ್ರಶ್ನೆಗಳು ಸಾರ್ವಜನಿಕರನ್ನು ಕಾಡುತ್ತಿವೆ. ಆಡಳಿತ ಪಕ್ಷ, ವಿರೋಧ ಪಕ್ಷ ಎಂಬುದನ್ನು ಲೆಕ್ಕಿಸದೇ ಅಸಲಿ ಸಂಗತಿಯನ್ನು ಪೊಲೀಸರು ಹೊರ ತರಬೇಕು. ರಾಜ್ಯದ ಪೊಲೀಸರ ಕರ್ತವ್ಯ ನಿಷ್ಠೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರಿದೆ. ಅದರ ಪ್ರದರ್ಶನಕ್ಕೆ ಮತ್ತೊಮ್ಮೆ ಅವಕಾಶ ಸಿಕ್ಕಿದೆ" ಎಂದು ಜೆಡಿಎಸ್ ಟ್ವೀಟ್ ಮಾಡಿದೆ.

Recommended Video

CD ಪ್ರಕರಣಕ್ಕೆ ಸಂಬಂಧಪಟ್ಟ ಹಾಗೆ ಕೇಂದ್ರ ಸಚಿವ ಹೇಳಿದ್ದು ಹೀಗೆ! | Oneindia Kannada
 ಅಂತ್ಯ ಹಾಡಬೇಕಿದ್ದರೆ ಸೂಕ್ತ ತನಿಖೆಯೊಂದೇ ದಾರಿ

ಅಂತ್ಯ ಹಾಡಬೇಕಿದ್ದರೆ ಸೂಕ್ತ ತನಿಖೆಯೊಂದೇ ದಾರಿ

"ಲೈಂಗಿಕ ಶೋಷಣೆಯೋ, ಷಡ್ಯಂತ್ರವೋ, ಹನಿಟ್ರ್ಯಾಪ್‌ ಆಗಿದೆಯೋ ಎಂಬ ಪ್ರಶ್ನೆಗಳು ಸಾರ್ವಜನಿಕರನ್ನು ಕಾಡುತ್ತಿವೆ. ಆಡಳಿತ ಪಕ್ಷ, ವಿರೋಧ ಪಕ್ಷ ಎಂಬುದನ್ನು ಲೆಕ್ಕಿಸದೇ ಅಸಲಿ ಸಂಗತಿಯನ್ನು ಪೊಲೀಸರು ಹೊರ ತರಬೇಕು. ರಾಜ್ಯದ ಪೊಲೀಸರ ಕರ್ತವ್ಯ ನಿಷ್ಠೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರಿದೆ. ಅದರ ಪ್ರದರ್ಶನಕ್ಕೆ ಮತ್ತೊಮ್ಮೆ ಅವಕಾಶ ಸಿಕ್ಕಿದೆ" ಎಂದು ಜೆಡಿಎಸ್ ಟ್ವೀಟ್ ಮಾಡಿದೆ.

English summary
Ramesh Jarkiholi CD Row: Chances Of Honey Trap, H D Kumaraswamy Series Of Tweet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X