ಲೋಕಸಭಾ ಟಿಕೆಟ್ ಗೆ ಬಿಜೆಪಿಯಲ್ಲಿ ಹೆಚ್ಚಾಯ್ತು ಪೈಪೋಟಿ; ವಿಜಯೇಂದ್ರ ಭೇಟಿ ಮಾಡಿದ ಮಾಜಿ ಸಂಸದ! ಚರ್ಚೆಯಾಗಿದ್ದೇನು?
ಬೆಂಗಳೂರು,ನವೆಂಬರ್ 28: ಚಿಕ್ಕೋಡಿ ಲೋಕಸಭಾ ಟಿಕೆಟ್ ಗಾಗಿ ಕಮಲ ಪಾಳಯದಲ್ಲಿ ತೆರೆಮರೆಯಲ್ಲಿ ಹಲವು ನಾಯಕರು ಕಸರತ್ತು ನಡೆಸುತ್ತಿದ್ದಾರೆ. ಈಗಾಗಲೇ ಹಾಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಅವರು ಮುಂದಿನ ಚುನಾವಣೆಗಾಗಿ ಭರ್ಜರಿ ತಯಾರಿ ಆರಂಭಿಸಿದ್ದಾರೆ. ಇತ್ತ ಚಿಕ್ಕೋಡಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಾದ ಮಾಜಿ ಸಂಸದ ಹಾಗೂ ದಿವಂಗತ ಉಮೇಶ ಕತ್ತಿ ಸಹೋದರ ರಮೇಶ್ ಕತ್ತಿ ಲಾಭಿ ನಡೆಸಿದ್ದಾರೆ.
ಹೌದು, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಮಾಜಿ ಸಂಸರ ರಮೇಶ್ ವಿ ಕತ್ತಿ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ನಿವಾಸಕ್ಕೆ ಭೇಟಿ ನೀಡಿ 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದ ಟಿಕೆಟ್ ಕುರಿತು ಮಾತನಾಡಿದ್ದಾರೆ ಎನ್ನಲಾಗಿದೆ. ವಿಜಯೇಂದ್ರ ಅವರು ಪಕ್ಷದ ಅಧ್ಯಕ್ಷರಾದ ನಂತರ ಅವರ ನಿವಾಸಕ್ಕೆ ಇದು ನನ್ನ ಮೊದಲ ಭೇಟಿಯಾಗಿ ಟಿಕೆಟ್ ಗಾಗಿ ಲಾಬಿ ನಡೆಸಿದ್ದಾರೆ.

ಇನ್ನೂ ವಿಧಾನ ಪರಿಷತ್ ಮಾಜಿ ಸದಸ್ಯರಾದ ಮಹಾಂತೇಶ ಕವಟಗಿಮಠ ಸಹ ಈಗಾಗಲೇ ಬಹಿರಂಗವಾಗಿ ಚಿಕ್ಕೋಡಿ ಕ್ಷೇತ್ರದ ಟಿಕೆಟ್ ಗಾಗಿ ಬೇಡಿಕೆ ಇಟ್ಟಿದ್ದು, ಹಲವು ಹೈಕಮಾಂಡ್ ನಾಯಕರ ಮೂಲಕವೂ ಟಿಕೆಟ್ ಗಾಗಿ ಲಾಬಿ ನಡೆಸಿದ್ದಾರೆ. ಈ ಬಾರೀ ಯಾರಿಗೆ ಹೈಕಮಾಂಡ್ ಮಣೆ ಆಗುತ್ತೆ ಎನ್ನುವ ಲೆಕ್ಕಾಚಾರ ಶುರುವಾಗಿದ್ದು, ಹಾಲಿ ಸಂಸದರಾಗಿರುವ ಅಣ್ಣಾ ಸಾಹೇಬ ಜೊಲ್ಲೆ ಅವರಿಗೆ ಈ ಬಾರೀ ಟಿಕೆಟ್ ಸಿಗುತ್ತಾ ಎನ್ನುವ ಪ್ರಶ್ನೆ ಹುಟ್ಟಿಕೊಂಡಿದೆ. ಅಣ್ಣಾ ಸಾಹೇಬ ಜೊಲ್ಲೆ ಅವರು ಹೈಕಮಾಂಡ್ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್.ಸಂತೋಷ್ ಅವರ ಜೊತೆಗೆ ಉತ್ತಮ ಸಂಬಂಧ ಹೊಂದಿದ್ದು, ಈ ಬಾರೀಯೂ ಟಿಕೆಟ್ ಸಿಗುತ್ತೆ ಎನ್ನಲಾಗಿದೆ.
ಇತ್ತ ಮಾಜಿ ಸಚಿವರಾದ ಉಮೇಶ್ ಕತ್ತಿ ಅವರ ಸಹೋದರ ರಮೇಶ್ ಕತ್ತಿ ಅವರು ಈ ಬಾರೀ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಗಾಗಿ ಬೇಡಿಕೆ ಇಟ್ಟಿದ್ದು, ವಿಜಯೇಂದ್ರ ಅವರ ಜೊತೆಗೆ ಸುದೀರ್ಘ ಕಾಲ ಚರ್ಚೆ ನಡೆಸಿದ್ದಾರೆ. ಇನ್ನೂ ವಿಜಯೇಂದ್ರ ಅವರ ಜೊತೆಗೆ ಚರ್ಚೆ ನಡೆಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿರುವ ರಮೇಶ್ ಕತ್ತಿ ಅವರು, ಈ ಹಿಂದೆ ನನಗೆ ರಾಜ್ಯಸಭೆಗೆ ನಾಮನಿರ್ದೇಶನ ಮತ್ತು ಎಂಎಲ್‌ಸಿ ಹುದ್ದೆಯನ್ನು ನಿರಾಕರಿಸಿದ್ದರಿಂದ ಈ ಬಾರಿ ಪಕ್ಷದ ಟಿಕೆಟ್ ಸಿಗುತ್ತದೆ ಎಂದು ನಾನು ಭಾವಿಸುತ್ತೇನೆ. ಆದರೆ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ನಾವೆಲ್ಲರೂ ಶ್ರಮಿಸುತ್ತಿರುವುದರಿಂದ ಪಕ್ಷದ ರಾಜ್ಯ ಮತ್ತು ಕೇಂದ್ರ ನಾಯಕತ್ವವು ನಿರ್ಧರಿಸುತ್ತದೆ ಎಂದು ತಿಳಿಸಿದ್ದಾರೆ.
ರಮೇಶ್ ಕತ್ತಿ ಅವರು 2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಪ್ರಕಾಶ್ ಬಿ ಹುಕ್ಕೇರಿ ವಿರುದ್ಧ 3,003 ಮತಗಳ ಅಂತರದಿಂದ ಸೋತಿದ್ದರು. ಇದರ ಬೆನ್ನಲ್ಲೇ 2019ರಲ್ಲಿ ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಅವರ ಪತಿ, ಹಾಲಿ ಸಂಸದ ಅಣ್ಣಾಸಾಹೇಬ ಶಂಕರ ಜೊಲ್ಲೆ ಅವರನ್ನು ಪಕ್ಷ ಕಣಕ್ಕಿಳಿಸಿದ್ದು, ಅಣ್ಣಾ ಸಾಹೇನ್ ಜೊಲ್ಲೆ ಗೆಲುವು ಸಾಧಿಸಿದ್ರು. ಇದೀಗ 2024 ರ ಲೋಕಸಭಾ ಚುನಾವಣೆಗೆ ಚಿಕ್ಕೋಡಿ ಕ್ಷೇತ್ರದ ಟಿಕೆಟ್ ಗಾಗಿ ತ್ರೀಮೂರ್ತಿಗಳು ಟಿಕೆಟ್ ಗಾಗಿ ಲಾಬಿಯನ್ನ ನಡೆಸಿದ್ದಾರೆ.

ಟ್ವೀಟ್ ಮೂಲಕ ವಿಜಯೇಂದ್ರ ಹೇಳಿದ್ದೇನು?
ಮಾಜಿ ಸಂಸದರು ಹಾಗೂ ಬೆಳಗಾವಿ ಜಿಲ್ಲಾ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಶ್ರೀ ರಮೇಶ್ ಕತ್ತಿ ಅವರು ಇಂದು ಭೇಟಿಯಾಗಿ ಶುಭ ಹಾರೈಸಿದರು. ಮುಂದಿನ ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷವನ್ನು ಸಮರ್ಥವಾಗಿ ಸಂಘಟಿಸಲು ತಾವು ಸಮರ್ಪಣಾ ಭಾವದಿಂದ ಹೆಗಲು ಕೊಟ್ಟು ತಮ್ಮನ್ನು ತೊಡಗಿಸಿಕೊಳ್ಳುವುದಾಗಿ ತಿಳಿಸಿದರು.












Click it and Unblock the Notifications