ಈ ಇಬ್ಬರಲ್ಲಿ ಒಬ್ಬರಿಗೆ ಒಲಿಯಲಿದೆ ರಾಜ್ಯ ಗೃಹ ಸಚಿವರ ಸ್ಥಾನ
ರಾಜ್ಯ ಗೃಹ ಖಾತೆ ಸಚಿವರ ಸ್ಥಾನಕ್ಕೆ ಹಿರಿಯ ಕಾಂಗ್ರೆಸ್ಸಿಗರಾದ ರಮೇಶ್ ಕುಮಾರ್ ಅಥವಾ ಆರ್ ವಿ ದೇಶಪಾಂಡೆ ಆಯ್ಕೆಯಾಗುವ ಸಾಧ್ಯತೆ. ಜಿ. ಪರಮೇಶ್ವರ್ ರಾಜಿನಾಮೆಯಿಂದ ತೆರವಾಗಿರುವ ಗೃಹ ಸಚಿವರ ಸ್ಥಾನ.
ಬೆಂಗಳೂರು, ಜೂನ್ 8: ಜಿ. ಪರಮೇಶ್ವರ್ ಅವರ ರಾಜಿನಾಮೆಯಿಂದ ತೆರವಾಗಿರುವ ರಾಜ್ಯ ಗೃಹ ಸಚಿವರ ಸ್ಥಾನಕ್ಕೆ ಕಾಂಗ್ರೆಸ್ ನ ಹಿರಿಯ ನಾಯಕರಾದ ಆರ್.ವಿ. ದೇಶಪಾಂಡೆ ಅಥವಾ ರಮೇಶ್ ಕುಮಾರ್ ಅವರಲ್ಲೊಬ್ಬರನ್ನು ನೇಮಿಸಲು ಕೆಪಿಸಿಸಿಯೊಳಗೆ ಚಿಂತನೆ ಆರಂಭವಾಗಿದೆ ಎಂದು ಮೂಲಗಳು ತಿಳಿಸಿವೆ.
ಜಿ. ಪರಮೇಶ್ವರ್ ಅವರು ಗೃಹ ಸಚಿವರ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದರೂ, ಸದ್ಯಕ್ಕೆ ನಡೆಯುತ್ತಿರುವ ವಿಧಾನ ಮಂಡಲದ ಅಧಿವೇಶನ ಮುಕ್ತಾಯವಾಗುವವರೆಗೂ ಪರಮೇಶ್ವರ್ ಅವರಿಗೇ ಗೃಹ ಸಚಿವರಾಗಿ ಮುಂದುವರಿಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಹಾಗಾಗಿ, ಪರಮೇಶ್ವರ್ ಅವರು ಹಂಗಾಮಿ ಸಚಿವರಾಗಿ ತಮ್ಮ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ.

ಏತನ್ಮಧ್ಯೆ, ಕೆ.ಜೆ. ಜಾರ್ಜ್ ಅವರಿಗೆ ಗೃಹ ಖಾತೆ ವಹಿಸುವ ಉತ್ಸಾಹ ಸಿದ್ದರಾಮಯ್ಯ ಅವರಲ್ಲಿದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ, ಅವರಾಗಲೇ ಗೃಹ ಖಾತೆ ವಹಿಸಿಕೊಂಡಿದ್ದರು. ಆದರೆ, ಕಾರಣಾಂತರಗಳಿಂದ ಅವರಿಗೆ ಈ ಖಾತೆಯನ್ನು ನೀಡಲು ಸದ್ಯದ ಮಟ್ಟಿಗೆ ಸಾಧ್ಯವಿಲ್ಲ ಎನ್ನುತ್ತಿದ್ದಾರೆ.
ಇನ್ನು, ರಾಜ್ಯ ಕಾಂಗ್ರೆಸ್ ವಲಯದಲ್ಲಿ ಗೃಹ ಖಾತೆಯನ್ನು ವಹಿಸಿಕೊಳ್ಳಬಲ್ಲಂತಹ ಮತ್ತೊಬ್ಬ ಪ್ರಭಾವಿ ವ್ಯಕ್ತಿ ಡಿ.ಕೆ. ಶಿವಕುಮಾರ್ ಅವರಿಗೆ ಪಕ್ಷದ ಹೈಕಮಾಂಡ್, ಮುಂದಿನ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಮಾಡಿರುವುದರಿಂದ ಅವರಿಗೆ ಸದ್ಯಕ್ಕೆ ಗೃಹ ಸಚಿವಾಲಯ ವಹಿಸಲು ಸಾಧ್ಯವಿಲ್ಲ.
ಹಾಗಾಗಿ, ಅನುಭವಿಗಳಾದ ಆರ್.ವಿ. ದೇಶಪಾಂಡೆ, ರಮೇಶ್ ಕುಮಾರ್ ಅವರಿಗೆ ಈ ಸ್ಥಾನ ಒಲಿಯುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಲಾಗಿದೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು












Click it and Unblock the Notifications