ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಶಂಕಿತರನ್ನ ಹೆಡೆಮುರಿ ಕಟ್ಟಿದ NIA : ಸಿದ್ದರಾಮಯ್ಯ ಏನಂದ್ರು?
ಮೈಸೂರು, ಎಪ್ರಿಲ್ 13: ಬೆಂಗಳೂರಿನಲ್ಲಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟದಿಂದಾಗಿ ಸಿಲಿಕಾನ್ ಸಿಟಿ ಜನತೆಯಲ್ಲಿ ಭಯ ಹುಟ್ಟಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಬರೋಬ್ಬರಿ 42 ದಿನಗಳ ಬಳಿಕ ಎನ್‌ಐಎ ಪ್ರಮುಖ ಆರೋಪಿಗಳನ್ನು ಬಂಧಿಸಿದೆ.
ಪಶ್ಚಿಮ ಬಂಗಾಳದ ಕೋಲ್ಕತ್ತಾದ ಹೊರವಲಯದಲ್ಲಿ ಬಾಂಬರ್ ಮುಸಾವೀರ್ ಹುಸೇನ್ ಶಜೀಬ್ ಹಾಗೂ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಹಾ ಅನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಸತತ 42 ದಿನಗಳ ನಿರಂತರ ಆಪರೇಷನ್ ಬಳಿಕ ಪಶ್ಚಿಮ ಬಂಗಾಳದ ದಿಗಾ ಬಳಿ ಎನ್‌ಐಎ ಅಧಿಕಾರಿಗಳು ಇಬ್ಬರು ಶಂಕಿತ ಉಗ್ರರನ್ನು ಬಂಧಿಸುವಲ್ಲಿ ಕರ್ನಾಟಕ ಪೊಲೀಸ್ ಹಾಗೂ ಎನ್ ಐ ಎ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಇನ್ನೂ ಬೆಂಗಳೂರಿನ ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪೊಗಳನ್ನ ಬಂಧಿಸಿರುವ ಕುರಿತು ಮಾಧ್ಯಮಗಳ ಜೊತೆಗೆ ಮುಖಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ರಾಮೇಶ್ವರ ಕೆಫೆ ಬಾಂಬ್ ಸ್ಫೋಟದ ಪ್ರಮುಖ ಆರೋಪಿಗಳನ್ನು ಬಂಧಿಸಿರುವ ಎನ್.ಐ. ಎ ತಂಡ ಮತ್ತು ಕರ್ನಾಟಕ ಪೊಲೀಸ್ ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಘಿಸಿದ್ದಾರೆ. ಆರೋಪಿಗಳನ್ನು ಕೋಲ್ಕತ್ತಾದಿಂದ ಬೆಂಗಳೂರಿಗೆ ಕರೆ ತಂದ ನಂತರ ವಿಚಾರಣೆ ಮಾಡಿ ಹೆಚ್ಚಿನ ವಿವರ ಪಡೆಯಲಾಗುವುದು ಎಂದರು.
ಎನ್. ಡಿ ಎ ಗೆ ಪೂರ್ಣ ಬಹುಮತ ದೊರಕುವುದಿಲ್ಲ
ಎನ್. ಡಿ ಎ ಗೆ ಪೂರ್ಣ ಬಹುಮತ ದೊರಕುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಬಿಜೆಪಿ ವಿರುದ್ಧವಿರುವ ಇಂಡಿಯಾ ಮೈತ್ರಿಗೆ ಬಹುಮತ ದೊರೆಯಲಿದೆ ಎಂದರು. 400 ಕ್ಕೂ ಹೆಚ್ಚು ಸ್ಥಾನಪಡೆಯುವುದಾಗಿ ಹೇಳಿಕೊಳ್ಳುತ್ತಿರುವ ಬಿಜೆಪಿಯದ್ದು ಜನರ ದಾರಿತಪ್ಪಿಸುವ ಕಾರ್ಯತಂತ್ರ ಎಂದು ಹೇಳಿದರು.
ಕರ್ನಾಟಕಕ್ಕೆ ಏನು ಮಾಡಿದ್ದಾರೆ ಎಂದು ರಾಜ್ಯದ ಜನತೆಗೆ ಉತ್ತರಿಸಲಿ
ಮೋದಿಯವರು ನಾಳೆ ಮೈಸೂರಿಗೆ ಆಗಮಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಮೋದಿಯವರು ಬಂದು ಹೋಗಲು ನನ್ನದೇನೂ ತಕರಾರಿಲ್ಲ. ಕರ್ನಾಟಕಕ್ಕೆ ಏನು ಮಾಡಿದ್ದಾರೆ ಎಂದು ರಾಜ್ಯದ ಜನತೆಗೆ ಹೇಳಬೇಕು. ನಿರುದ್ಯೋಗ, ತೆರಿಗೆ ಹಂಚಿಕೆ, ಬರಗಾಲಕ್ಕೆ ಇಂದಿನವರೆಗೂ ಯಾಕೆ ಪರಿಹಾರ ನೀಡಿಲ್ಲ ಎಂಬುದಕ್ಕೆಲ್ಲಾ ಉತ್ತರ ಹೇಳಲಿ ಎಂದರು.
ಅನಂತಕುಮಾರ್ ಹೆಗಡೆ ಮೇಲೆ ಕ್ರಮ ಏಕಿಲ್ಲ
ಅಂಬೇಡ್ಕರ್ ಬಂದರೂ ಸಂವಿಧಾನ ಬದಲಿಸಲು ಸಾಧ್ಯವಿಲ್ಲ. ಬಿಜೆಪಿ ಸಂವಿಧಾನದ ಪರವಾಗಿದೆ ಎಂದು ಮೋದಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಹಾಗಾದರೆ ಅನಂತಕುಮಾರ್ ಹೆಗಡೆ ಮೇಲೆ ಕ್ರಮ ಯಾಕೆ ತೆಗೆದುಕೊಂಡಿಲ್ಲ. ಅವರನ್ನು ಪಕ್ಷದಿಂದ ಅಥವಾ ಮಂತ್ರಿ ಸ್ಥಾನದಿಂದ ಕೈಬಿಟ್ಟರೇ ಎಂದು ಪ್ರಶ್ನಿಸಿದರು. ಉತ್ತರ ಕರ್ನಾಟಕದಲ್ಲಿ ಐದು ವರ್ಷಗಳಿಂದ ಏನೂ ಕೆಲಸ ಮಾಡದೇ ಮನೆಯಲ್ಲಿ ಕುಳಿತಿದ್ದರು. ಕೊನೇ 3-4 ತಿಂಗಳು ಬಂದು ಸೋಲುವ ವರದಿಯಾಧಾರದ ಮೇಲೆ ಅನಂತಕುಮಾರ್ ಅವರಿಗೆ ಟಿಕೆಟ್ ಕೊಟ್ಟಿಲ್ಲ. ಇನ್ನೂ ಬಿಜೆಪಿ ಯಾವತ್ತೂ ಸಂವಿಧಾನದ ಪರವಾಗಿಲ್ಲ. ಸಂವಿಧಾನ ಜಾರಿ ಯಾದಾಗ ಸಾವರ್ಕರ್ ಹಾಗು ಗೋಲ್ವಾಲ್ಕರ್ ಅವರು ಭಾರತದ ಸಂವಿಧಾನವನ್ನು ವಿರೋಧಿಸಿದ್ದರು ಎಂದರು.












Click it and Unblock the Notifications