Rameshwaram Cafe Blast: ರವೆ ಇಡ್ಲಿ ತಿಂದು ಬಾಂಬ್ ಇಟ್ಟ ಶಂಕಿತ ವಶಕ್ಕೆ: ಆರೋಪಿ ಸಿಕ್ಕಿಬಿದ್ದಿದ್ದು ಹೇಗೆ ಗೊತ್ತಾ?

ಬೆಂಗಳೂರು, ಮಾರ್ಚ್‌ 02: ದಕ್ಷಿಣ ಭಾರತದ ರುಚಿ ರುಚಿಯಾದ ಖಾದ್ಯಗಳನ್ನ ಸವಿಯಲು 'ದಿ ರಾಮೇಶ್ವರಂ ಕೆಫೆ' ಮುಂದೆ ಪ್ರತಿ ನಿತ್ಯ ಜನ ಕ್ಯೂ ನಿಲ್ಲುತ್ತಾರೆ. ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಬಾಂಬ್ ಸ್ಫೋಟಕ್ಕೆ ಸಾಕ್ಷಿಯಾಗಿದ್ದು, ಬಾಂಬ್ ಇಟ್ಟಿದ್ದ ಶಂಕಿತನನ್ನು ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಹೌದು, ಕುಂದಲಹಳ್ಳಿಯ ರಾಮೇಶ್ವರ ಕೆಫೆಯಲ್ಲಿ ಮಾ. 1 ರಂದು ಬಾಂಬ್ ಇಟ್ಟಿದ್ದ ಶಂಕಿತನನ್ನು ವಶಕ್ಕೆ ಪಡೆದ ಕೂಡಲೇ ನಿಗೂಢ ಸ್ಥಳದಲ್ಲಿ ಆತನ ವಿಚಾರಣೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಶುಕ್ರವಾರ ಮಧ್ಯಾನ್ನ 12.55 ರ ಸುಮಾರಿಗೆ ರಾಮೇಶ್ವರಂ ಕೆಫೆಯಲ್ಲಿ ಇರಿಸಲಾಗಿದ್ದ ಬ್ಯಾಗ್ ನಲ್ಲಿದ್ದ ಎರಡು ಲಘು ಪ್ರಮಾಣದ ಬಾಂಬ್ ಗಳು ಸ್ಫೋಟಗೊಂಡಿದ್ದು, ಆತಂಕಕ್ಕೆ ಕಾರಣವಾಗಿದೆ. ಇನ್ನೂ ಈ ಬಾಂಬ್‌ ಸ್ಫೋಟದಲ್ಲಿ ಮೂವರು ಮಹಿಳೆಯರು ಸೇರಿ 9 ಮಂದಿಗೆ ಗಾಯಗಳಾಗಿದ್ದು, ಅವರಲ್ಲಿ ಸ್ವರ್ಣಾಂಭ ಎಂಬುವರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ.

Rameswaram Cafe blast: Ccb Investigation Team Details Rameswaram Cafe Blast Suspect

ಇನ್ನೂ ಘಟನೆಯ ಬೆನ್ನಲ್ಲೇ ಸ್ಥಳಕ್ಕೆ ತೆರಳಿದ್ದ ಪೊಲೀಸರು, ಎಫ್ಎಸ್ ಎಲ್ ತಜ್ಞರು, ರಾಷ್ಟ್ರೀಯ ಉಗ್ರ ನಿಗ್ರಹ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದರು. ಆಗ ವಶಕ್ಕೆ ಪಡೆಯಲಾದ ಹೋಟೆಲ್ ಹಾಗೂ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳಲ್ಲಿ ಬಾಂಬ್ ಇಟ್ಟವನ ಚಹರೆ ಪತ್ತೆಯಾಗಿತ್ತು. ಶಂಕಿತನನ್ನಬಂಧಿಸಲು ಬೆಂಗಳೂರು ಅಫರಾಧ ನಿಗ್ರಹ ದಳಕ್ಕೆ (ಸಿಸಿಬಿ) ಜವಾಬ್ದಾರಿ ವಹಿಸಲಾಗಿತ್ತಲ್ಲದೆ, ಶಂಕಿತನ ಪತ್ತೆಗೆ ಸಿಸಿಬಿ ಅಧಿಕಾರಿಗಳ 8 ತಂಡಗಳನ್ನು ರಚಿಸಲಾಗಿತ್ತು. ನಿರಂತರ ಹುಡುಕಾಟದ ನಂತರ ಶಂಕಿತನು ಪತ್ತೆಯಾಗಿದ್ದು, ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆಂದು ಹೇಳಲಾಗಿದೆ.

ತೀವ್ರ ಹುಡುಕಾಟ ನಡೆಸಿದ್ದ ಪೊಲೀಸರು ಕಾನೂನುಬಾಹಿರ ಚಟುವಟಿಕೆ ತಡೆ ಕಾಯಿದೆ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿತ್ತು.ಅಲ್ಲದೇ ಪೊಲೀಸ್ ಕಮಾಂಡ್‌ ಸೆಂಟರ್‌ನಲ್ಲಿ ಸ್ಫೋಟದ ಆರೋಪಿಯ ಚಲನವಲನದ ಬಗ್ಗೆ ಶೋಧ ನಡೆಸಲಾಗಿತ್ತು, ಈ ವೇಳೆ ರಾಮೇಶ್ವರಂ ಕೆಫೆ ಮಾರ್ಗದಲ್ಲಿನ ಸಿ.ಸಿ ಕ್ಯಾಮೆರಾಗಳಲ್ಲಿ ಸೆರೆಯಾಗಿರುವ ದೃಶ್ಯವನ್ನು ಕಮಾಂಡ್‌ ಸೆಂಟರ್‌ ಸಿಬ್ಬಂದಿ ಪರಿಶೀಲಿಸಿದ್ದರು. ಆರೋಪಿ ಎಲ್ಲೆಲ್ಲಿ ಓಡಾಡಿದ್ದ ಎಂಬ ಬಗ್ಗೆ ಮಾಹಿತಿ ಕಲೆ ಹಾಕಲಾಗತ್ತು.

ಇನ್ನೂ ಈ ಬಗ್ಗೆ ರಾಜ್ಯ ಪೊಲೀಸ್‌ ಮಹಾ ನಿರ್ದೇಶಕ ಅಲೋಕ್‌ ಮೋಹನ್‌ ಮಾತನಾಡಿ, ಸ್ಫೋಟದ ಸಂಬಂಧ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಮಾಹಿತಿ ಪಡೆದಿದ್ದಾರೆ. ಎಫ್‌ಎಸ್‌ಎಲ್‌ ತಂಡ ಸಂಪೂರ್ಣ ಪರಿಶೀಲನೆ ನಡೆಸಿ ಮಾಹಿತಿ ನೀಡಿದ ಬಳಿಕ ಹೆಚ್ಚಿನ ವಿವರ ಸಿಗಲಿದೆ. ತನಿಖೆ ಬಳಿಕ ಆರೋಪಿ ಏನು ತಂದಿದ್ದ ಎಂಬುದು ಗೊತ್ತಾಗಲಿದೆ. ಸ್ಫೋಟದ ಬಗ್ಗೆ ಎನ್‌ಐಎ ಹಾಗೂ ಕೇಂದ್ರ ಗುಪ್ತಚರ ದಳಕ್ಕೆ ಮಾಹಿತಿ ನೀಡಿದ್ದೇವೆ. ಅವರೂ ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+