Rameshwaram Cafe Blast: ಅಧಿಕೃತ ಹೇಳಿಕೆ ಮಾತ್ರ ಪರಿಗಣಿಸಿ; ಗೃಹಸಚಿವ ಡಾ. ಜಿ. ಪರಮೇಶ್ವರ್ ಮನವಿ
ಮಂಗಳೂರಿನಲ್ಲಿ ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಪೋಟದ ರೀತಿಯಲ್ಲಿಯೇ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿಯೂ ಸ್ಪೋಟದ ವಸ್ತುಗಳನ್ನು ಜೋಡಿಸಿರುವ ತಾಂತ್ರಿಕ ಸಾಮ್ಯತೆ ಕಂಡು ಬರುತ್ತಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಬ್ಯಾಟರಿ ಬಳಕೆ, ಟೈಮರ್ ಇನ್ನಿತರ ಗಮನಿಸಿದರೆ ತಾಂತ್ರಿಕವಾಗಿ ಅದೇ ರೀತಿ ಜೋಡಿಸಲಾಗಿದೆ. ಒಂದೇ ತರ ಕಾಣಿಸುತ್ತಿದೆ. ಇಂತಹದ್ದೇ ಸಂಘಟನೆಯವರು ಮಾಡಿದ್ದಾರೆ ಎಂಬುದನ್ನು ಈಗಲೇ ಹೇಳಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಊಹಾಪೋಹಾ ಹೇಳಿಕೆ ನೀಡುತ್ತಿದ್ದಾರೆ. ನಾನು ಎಲ್ಲರಿಗೂ ವಿನಂತಿ ಮಾಡುತ್ತೇನೆ. ಮುಖ್ಯಮಂತ್ರಿಯವರು, ಉಪಮುಖ್ಯಮಂತ್ರಿಯವರು, ನಾನು ಅಥವಾ ಗೃಹ ಇಲಾಖೆಯ ಅಧಿಕಾರಿಗಳು ಹೇಳಿದರೆ ಮಾತ್ರ ಅಧಿಕೃತ ಮಾಹಿತಿ ಅಂತ ಪರಿಗಣಿಸಬೇಕು. ಬಹಳ ಜನ ಪ್ರಕರಣದ ಕುರಿತು ಸ್ಪಷ್ಟ ಮಾಹಿತಿ ಇಲ್ಲದೆ ಹೇಳಿಕೆ ನೀಡುತ್ತಿರುವುದರಿಂದ ಗೊಂದಲವಾಗುತ್ತಿದೆ. ಅವರಿಗೆ ಹೆಚ್ಚು ಮಾಹಿತಿ ಇರುವುದಿಲ್ಲ. ನೀವೆಲ್ಲ ಹೋಗಿ ಕೇಳಿದಾಗ ಹೇಳಿರುತ್ತಾರೆ. ಅದು ಅಧಿಕೃತ ಅಂತ ಅನ್ನೀಸುವುದಿಲ್ಲ. ಅವರ ದೃಷ್ಟಿಕೋನದಲ್ಲಿ ಅವರು ಹೇಳಿರುತ್ತಾರೆ. ನಾವು ಹೇಳಿಕೆ ನೀಡುವಾಗ ಅನೇಕ ಮಾಹಿತಿಯನ್ನು ಇಟ್ಟುಕೊಂಡು ಹೇಳಿರುತ್ತೇವೆ ಎಂದರು.
ಸ್ಪೋಟದ ತೀವ್ರತೆ ಬಹಳ ಕಡಿಮೆ ಇರುವುದು ಪರೀಶೀಲನೆಯಲ್ಲಿ ಕಂಡು ಬಂದಿದೆ. ಹೀಗಾಗಿ ದೊಡ್ಡ ಅನಾಹುತ ಆಗಿಲ್ಲ. ಬಳಕೆಯಾದ ಸ್ಪೋಟಕ ವಸ್ತುಗಳು ಕಡಿಮೆ ಇರಬಹುದು. ಹೆಚ್ಚು ಬಳಕೆ ಮಾಡಿದ್ದರೆ ಸ್ಪೋಟದ ತೀವ್ರತೆ ಜಾಸ್ತಿ ಆಗುತ್ತಿತ್ತು. ಬಾಂಬ್ ಸಿಡಿದಾಗ ಮೊಳೆಗಳು, ನೆಟ್‌ಗಳು ಎಲ್ಲವೂ ಮೇಲೆ ಹೋಗಿವೆ. ಅದು ಮೇಲೆ ಹೋಗದೆ ಸೈಡಿಗೆ ಸಿಡಿದಿದ್ದರೆ ಬಹಳ ಜನರಿಗೆ ಪ್ರಾಣಾಪಾಯ ಆಗುತಿತ್ತು ಎಂದರು.
ಶೀಘ್ರದಲ್ಲೇ ಆರೋಪಿಗಳ ಬಂಧನ
ಎನ್‌ಐಎ ಮತ್ತು ಎನ್‌ಎಸ್‌ಜಿ ಅಧಿಕಾರಿಗಳು ಬಂದು ತನಿಖೆ ಮಾಡುತ್ತಿದ್ದಾರೆ. ಸ್ಪೋಟದ ರೀತಿಯನ್ನು ಗಮನಿಸಿರುವ ಎನ್‌ಐಎ ಅಧಿಕಾರಿಗಳಿಗೆ, ಯಾವ ಸಂಘಟನೆಯವರು ಮಾಡಿರಬಹುದು ಎಂಬ ಅಂದಾಜು ಇರುತ್ತದೆ. ಶೀಘ್ರದಲ್ಲಿ ಆರೋಪಿಗಳನ್ನು ಹಿಡಿಯುತ್ತೇವೆ ಎಂದರು.
26 ಬಸ್‌ಗಳಲ್ಲಿನ ಕ್ಯಾಮೆರಾ ಪರಿಶೀಲನೆ
ಬೆಂಗಳೂರು ನಗರವನ್ನು ಸೇಫ್ ಸಿಟಿ ಮಾಡುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ನಮ್ಮ ಸರ್ಕಾರ ಸೇಫ್ ಸಿಟಿ ಮಾಡಿ ಬಹಳ ಹಣ ಖರ್ಚು ಮಾಡಿ, ಕ್ಯಾಮರಾ ಹಾಕಿದ್ದೇವೆ. ಕಮಾಂಡ್ ಸೆಂಟರ್ ಮಾಡಿ ಎಲ್ಲವನ್ನು ಮಾನಿಟರ್ ಮಾಡ್ತಿದ್ದೇವೆ. ಬೆಂಗಳೂರು ಈಗ ಸುರಕ್ಷತೆಯಲ್ಲಿ ಎಷ್ಟೋ ಉತ್ತಮವಾಗಿದೆ. ಸ್ಥಳದ ಸುತ್ತ ಮುತ್ತಲಿನ 40ಕ್ಕೂ ಹೆಚ್ಚು ಸಿಸಿ ಕ್ಯಾಮರಾ ದೃಶ್ಯಗಳನ್ನು ಪರಿಶೀಲನೆ ಮಾಡಲಾಗುತ್ತಿದೆ. ಸ್ಪೋಟದ ಸಂದರ್ಭದಲ್ಲಿ 26 ಬಸ್‌ಗಳು ಸಂಚರಿಸಿವೆ. 26 ಬಸ್‌ಗಳಲ್ಲಿನ ಕ್ಯಾಮೆರಾಗಳನ್ನು ಪರಿಶೀಲಿಸಲಾಗುತ್ತಿದೆ. ಪ್ರಕರಣ ತನಿಖೆ ಹಂತದಲ್ಲಿರುವುದರಿಂದ ತಾಂತ್ರಿಕ ವಿಚಾರಗಳ ಬಗ್ಗೆ ಹೇಳುವುದಿಲ್ಲ ಎಂದು ತಿಳಿಸಿದರು.
ಎಫ್‌ಎಸ್‌ಎಲ್ ವರದಿ ಮುಚ್ಚಿಡಲ್ಲ
ವಿಧಾನಸೌಧ ಆವರಣದಲ್ಲಿ ನಡೆದ ಘಟನೆಯ ಕುರಿತು ಮಾತನಾಡಿದ ಅವರು, ಎಫ್‌ಎಸ್‌ಎಲ್‌ನವರು ತಾಂತ್ರಿಕ ವರದಿ ನೀಡಬೇಕು. ಒಂದರೆಡು ದಿನದಲ್ಲಿ ವರದಿ ಕೊಡೋದಿಕ್ಕೆ ಆಗಲ್ಲ. ನಾನು ಯಾವತ್ತು 48 ಗಂಟೆಯಲ್ಲಿ ಎಫ್‌ಎಸ್‌ಎಲ್ ವರದಿ ಬರುತ್ತದೆ ಎಂದು ಹೇಳಿಲ್ಲ. ಸಾಕಷ್ಟು ವಿಡಿಯೋಗಳಿರುತ್ತವೆ. ಅದೆಲ್ಲವನ್ನು ಪರಿಶೀಲಿಸಬೇಕು. ಈ ಪ್ರಕರಣಕ್ಕೆ ಹೆಚ್ಚು ಒತ್ತು ನೀಡುವಂತೆ ಘಟನೆ ನಡೆದ ದಿನವೆ ಸೂಚನೆ ನೀಡಿದ್ದೇನೆ. ವರದಿ ಬಂದ ತಕ್ಷಣ ಮುಂದಿನ ಕ್ರಮ ಜರುಗಿಸಲಾಗುವುದು. ಯಾರನ್ನು ರಕ್ಷಣೆ ಮಾಡುವ ಪ್ರಸಂಗವಿಲ್ಲ ಎಂದು ಸ್ಪಷ್ಟಪಡಿಸಿದರು.
-
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications