Rameswaram Cafe: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ; ಪೊಲೀಸರು ವಶಕ್ಕೆ ಪಡೆದ ನಾಲ್ವರು ಶಂಕಿತರು ಯಾರು?

ಬೆಂಗಳೂರು, ಮಾರ್ಚ್02: ದಕ್ಷಿಣ ಭಾರತದ ರುಚಿ ರುಚಿಯಾದ ಖಾದ್ಯಗಳನ್ನ ಸವಿಯಲು ರಾಮೇಶ್ವರಂ ಕೆಫೆ ಮುಂದೆ ಪ್ರತಿ ನಿತ್ಯ ಜನ ಕ್ಯೂ ನಿಲ್ಲುತ್ತಾರೆ. ಸದಾ ಗಿಜಿಗುಡುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟವಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರು ಜನರ ಆತಂಕ ಹೆಚ್ಚಿಸುವಂತೆ ಮಾಡಿದೆ.

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಸಿಸಿಟಿವಿಯಲ್ಲಿ ಶಂಕಿತ ಆರೋಪಿಯ ಚಹರೆ, ಚಲನವಲನ ದೃಶ್ಯ ಸೆರೆಯಾಗಿದೆ. ತಲೆ ಮೇಲೆ ಹ್ಯಾಟ್​​​​ ಹಾಕಿಕೊಂಡಿರುವ ಶಂಕಿತ ವ್ಯಕ್ತಿಯಿಂದ ಬಾಂಬ್​​​ ಇಡಲಾಗಿದೆ ಎಂಬ ಅನುಮಾನ ವ್ಯಕ್ತವಾಗಿದ್ದು, ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ನಾಲ್ವರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಅಲ್ಲದೇ ನಾಲ್ವರನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

Rameswaram Cafe Bomb Blast Case Four Suspects Under Custody

ನಿನ್ನೆ ಮಧ್ಯಾಹ್ನ ಊಟದ ಸಮಯಕ್ಕೆ ಸರಿಯಾಗಿ ಬಾಂಬ್ ಬ್ಲಾಸ್ಟ್ ಆಗಿದೆ. ವಿವಿಧ ತನಿಖಾ ತಂಡಗಳು ರಾತ್ರಿಯೆಲ್ಲಾ ತನಿಖೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ. ಸದ್ಯ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ತಲೆ ಮೇಲೆ ಹ್ಯಾಟ್​​​​ ಹಾಕಿಕೊಂಡಿರುವ ಶಂಕಿತ ವ್ಯಕ್ತಿಯಿಂದ ಬಾಂಬ್ ಇಡಲಾಗಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಆರೋಪಿ ಹಾಕಿರುವ ಬಿಳಿ ಬಣ್ಣದ ಹ್ಯಾಟ್​​ ಮೇಲೆ ನಂಬರ್ 10 ಎಂದು ನಮೂದಿಸಲಾಗಿದೆ. ಬಾಂಬ್‌ ಇಟ್ಟವರ ಹಿನ್ನೆಲೆಯ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದು, ಯಾಕೆ ಬಾಂಬ್‌ ಇಟ್ಟಿದ್ದಾರೆ ಎನ್ನುವ ಕುರಿತು ಶೋಧ ಕಾರ್ಯಾಚರಣೆಯನ್ನ ಮುಂದುವರೆಸಿದ್ದಾರೆ.

ಸಿಸಿಟಿವಿಯಲ್ಲಿ ಸೆರೆ

ಶುಕ್ರವಾರ ಮಧ್ಯಾಹ್ನ ಊಟದ ಸಮಯಕ್ಕೆ ಸರಿಯಾಗಿ ಬಾಂಬ್‌ ಬ್ಲಾಸ್‌ ಆಗುವಂತೆ ಪ್ಲಾನ್‌ ಹಾಕಿದ್ದಾರೆ ಎನ್ನಲಾಗಿದೆ. ಇನ್ನೂ ಬಾಂಬ್‌ ಇಟ್ಟ ಆರೋಪಿ ಕಪ್ಪು ಬಣ್ಣದ ಮಾಸ್ಕ್​ ಹಾಕಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆರೋಪಿ ಕಪ್ಪು ಬಣ್ಣದ ಬ್ಯಾಗ್​ ಜೊತೆ ರಾಮೇಶ್ವರಂ ಕೆಫೆ​ಗೆ ಬಂದಿದ್ದ. ಕೆಫೆಯಲ್ಲಿ ತಿಂಡಿಯ ಪ್ಲೇಟ್ ಹಿಡಿದು ಓಡಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಂತರ ರವೆ ಇಡ್ಲಿಯನ್ನ ತಿಂದು ಹೋಗಿದ್ದಾನೆ ಎನ್ನಲಾಗಿದೆ. ಇನ್ನೂ ಹೋಟೆಲ್‌ ನಿಂದ ಹೋಗುತ್ತಾ ವಾಚ್​ನಲ್ಲಿ ಟೈಂ ನೋಡಿ ಹೋಗಿದ್ದು ಕೆಫೆಯಿಂದ ಹೊರಗೆ ಬಂದು ಎಡಭಾಗಕ್ಕೆ ಹೋಗಿದ್ದಾನೆ. ಈ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸ್‌ ಪಡೆ ತಮ್ಮ ಕಾರ್ಯಚರಣೆಯನ್ನ ಮುಂದುವರೆಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+