ತಲಕಾವೇರಿಗೆ ತೆರಳಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್!
ಬೆಂಗಳೂರು, ಫೆ. 06: ರಾಷ್ಟ್ರಪತಿ ರಾಮನಾಥ್ ಕೋವಿಂದ ಅವರು ಇಂದು ಸಂಸಾರ ಸಮೇತರಾಗಿ ಕೊಡಗು ಜಿಲ್ಲೆಯ ಅಧಿಕೃತ ಬೇಟಿಗಾಗಿ ಭಾರತೀಯ ವಾಯುಪಡೆಯ ವಿಶೇಷ ಹೆಲಿಕ್ಯಾಪ್ಟರ್‌ನಲ್ಲಿ ಬೆಂಗಳೂರಿನ ಎಚ್.ಎ.ಎಲ್. ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸಿದರು.
ರಾಷ್ಟ್ರದ ಪ್ರಥಮ ಮಹಿಳೆ ಸವಿತಾ ಕೋವಿಂದ ಅವರೂ ರಾಷ್ಟ್ರಪತಿಗಳ ಜೊತೆಯಲ್ಲಿ ಇಂದು ಕಾವೇರಿ ಉಗಮಸ್ಥಾನ ತಲಾಕಾವೇರಿಗೆ ಬೇಟಿ ನೀಡುವರು. ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸುವ ಸಾಧ್ಯತೆಗಳಿಗೆ. ಜೊತೆಗೆ ಕಾವೇರಿ ನದಿ ಉಗಮ ಸ್ಥಳವನ್ನೂ ರಾಷ್ಟ್ರಪತಿ ರಾಮನಾಥ್ ಕೋವಿಂದ ಅವರು ಪತ್ನಿ ಸಮೇತರಾಗಿ ವೀಕ್ಷಣೆ ಮಾಡಲಿದ್ದಾರೆ.
ಭಾಗಮಂಡಲದ ಕಾವೇರಿ ಕಾಲೇಜು ಹೆಲಿಪ್ಯಾಡ್‌ಗೆ ಆಗಮಿಸಲಿರುವ ರಾಮನಾಥ ಕೋವಿಂದ್ ನಂತರ ಕಾವೇರಿ ನದಿ ಉಗಮಸ್ಥಾನ ತಲಕಾವೇರಿ ದೇವಸ್ಥಾನಕ್ಕೆ ತೆರಳಿ, ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಮಡಿಕೇರಿಯ ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ. ಮಡಿಕೇರಿಗೆ ಆಗಮಿಸಿದ ನಂತರ ರಾಷ್ಟ್ರಪತಿ ಸರಕಾರದ ವತಿಯಿಂದ ಅಭಿವೃದ್ಧಿಪಡಿಸಲಾಗಿರುವ ಜನರಲ್ ತಿಮ್ಮಯ್ಯ ಸ್ಮಾರಕ ಭವನ, ವಸ್ತು ಸಂಗ್ರಹಾಲಯವನ್ನು ಉದ್ಘಾಟನೆ ಮಾಡಲಿದ್ದಾರೆ.

ರಾಷ್ಟ್ರಪತಿ ರಾಮನಾಥ ಕೋವಿಂದ್ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆ ಜೊತೆಗೆ ಭಿಗಿ ಭದ್ರತೆ ಮಾಡಿಕೊಳ್ಳಲಾಗಿದ್ದು, ತಲಕಾವೇರಿಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧ ಹೇರಲಾಗಿದೆ. ಈ ಹಿನ್ನೆಲೆಯಲ್ಲಿ ಭಾಗಮಂಡಲದಿಂದ ತಲಕಾವೇರಿ ತನಕ 8 ಕಿ.ಮೀ. ಅಂತರದಲ್ಲಿ ಭಾರೀ ಸಂಖ್ಯೆಯಲ್ಲಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಮಡಿಕೇರಿಯಲ್ಲಿ ಜನರಲ್ ತಿಮ್ಮಯ್ಯ ವಸ್ತು ಸಂಗ್ರಹಾಲಯ ಉದ್ಘಾಟನಾ ಸಮಾರಂಭದಲ್ಲಿ ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಭಾಗವಹಿಸಲಿದ್ದಾರೆ.
ಕೊಡಗು ಜಿಲ್ಲೆಯ ಉಸ್ತುವಾರಿ ಹಾಗೂ ವಸತಿ ಸಚಿವ ವಿ. ಸೋಮಣ್ಣ ಅವರು ಸಹ ರಾಷ್ಟ್ರಪತಿಗಳ ಜೊತೆಗೆ ಬೆಂಗಳೂರಿನಿಂದ ಪ್ರಯಾಣಿಸಿದರು. ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಹೆಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿ ಅವರಿಗೆ ಬೀಳ್ಕೊಡುಗೆ ನೀಡಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications