ರಾಜ್ಯ ರಾಜಕಾರಣಕ್ಕೆ ಸ್ಯಾಂಡಲ್ ವುಡ್ ಕ್ವೀನ್ ಎಂಟ್ರಿ: ಎರಡು ಕ್ಷೇತ್ರದಿಂದ ರಮ್ಯಾ ಕಣಕ್ಕೆ?
ಈ ಬಾರೀ ಅಧಿಕಾರಕ್ಕೆ ಬರಬೇಕು ಎಂದು ಪ್ಲಾನ್ ಹಾಕಿ ಕೊಂಡಿರುವ ಕಾಂಗ್ರೆಸ್, ನಟಿ ರಮ್ಯಾ ಅವರನ್ನ ರಾಜ್ಯ ರಾಜಕಾರಣಕ್ಕೆ ಕರೆತರಲು ಪ್ಲಾನ್ ನಡೆಸಿದೆ.
ಬೆಂಗಳೂರು,ಮಾರ್ಚ್ 21: ರಾಜ್ಯ ವಿಧಾನಸಭಾ ಚುನಾವಣಾ ರಣಕಣ ಜೋರಾಗಿದ್ದು, ಹಳೇ ಮೈಸೂರು ಭಾಗದ ಮೇಲೆ ಕಣ್ಣಿಟ್ಟಿರುವ ರಾಜಕೀಯ ಪಕ್ಷಗಳು ಹಲವು ತಂತ್ರಗಾರಿಕೆಯನ್ನ ಹಾಕಿಕೊಂಡಿವೆ. ಒಕ್ಕಲಿಗ ಕೋಟೆಯನ್ನ ಮರಳಿ ಪಡೆಯಲು ಯಾರನ್ನ ಕಣಕ್ಕಿಳಿಸಿದರೇ ಕ್ಷೇತ್ರವನ್ನ ಪಡೆಯಬಹುದು ಎಂಬ ಲೆಕ್ಕಾಚಾರವನ್ನ ಕಾಂಗ್ರೆಸ್ ನಡೆಸುತ್ತಿವೆ.
ಈ ಬಾರಿ ಅಧಿಕಾರದ ಗದ್ದುಗೆ ಹಿಡಿಯಲು ರೆಡಿಯಾಗಿರುವ ರಾಜಕೀಯ ಪಕ್ಷಗಳು ಪ್ರಮುಖ ಒಕ್ಕಲಿಗರ ಪ್ರಾಬಲ್ಯ ಇರುವ ಕ್ಷೇತ್ರವನ್ನ ಪಡೆಯುವ ತವಕದಲ್ಲಿದೆ. ಹೌದು ಸಿನಿಮಾ ರಂಗಕ್ಕೆ ಎಂಟ್ರಿಯಾಗಿರುವ ರಮ್ಮಾಇದೀಗ ರಾಜ್ಯ ರಾಜಕಾರಣಕ್ಕೂ ಎಂಟ್ರಿಯಾಗುವ ಕುರಿತು ಸಾಕಷ್ಟು ಚರ್ಚೆಗಳು ನಡೆದಿವೆ. ಕೆಲ ಒಕ್ಕಲಿಗರ ಪ್ರಾಬಲ್ಯ ಹೆಚ್ಚಾಗಿರುವ ಕ್ಷೇತ್ರಗಳ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ನಾಯಕರು ಸ್ಯಾಂಡಲ್ ವುಡ್ ಕ್ವೀನ್ ರಮ್ಮಾ ಅವರನ್ನ ಕಣಕ್ಕಿಳಿಸಲು ನಿರ್ಧರಿಸಿದೆ ಎನ್ನಲಾಗಿದೆ.

ಒಕ್ಕಲಿಗರ ನಾಯಕರ ಕ್ಷೇತ್ರವಾದ ಬೆಂಗಳೂರಿನ ಪದ್ಮನಾಭನಗರ ಹಾಗೂ ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. ಈ ಎರಡು ಕ್ಷೇತ್ರಗಳನ್ನ ಪಡೆಯುವ ತವಕದಲ್ಲಿರುವ ಕಾಂಗ್ರೆಸ್ ನಾಯಕರು ಒಕ್ಕಲಿಗರ ಸಮುದಾಯದ ಮತಗಳನ್ನ ಸೆಳೆಯಲು ರಮ್ಯಾ ಕರೆ ತರಲು ಮಾಸ್ಟರ್ ಪ್ಲಾನ್ ನಡೆಸಿದ್ದಾರೆ ಎನ್ನಲಾಗಿದೆ.
ಇನ್ನೂ ಪದ್ಮನಾಭನಗರ ಕ್ಷೇತ್ರದಿಂದ ಕಾಂಗ್ರೆಸ್ ಆಕಾಂಕ್ಷಿಗಳ ಮಧ್ಯದಲ್ಲಿ ಸಾಕಷ್ಟು ಪೈಪೋಟಿ ಏರ್ಪಟ್ಟಿದೆ. ಇನ್ನು ಪದ್ಮನಾಭನಗರ ಕ್ಷೇತ್ರದಲ್ಲಿ ನಾಯ್ಡು ಸಮೂದಾಯದ ವ್ಯಕ್ತಿ ಅಭ್ಯರ್ಥಿಯಾದರೆ ಒಕ್ಕಲಿಗ ಮತ ಸೆಳೆಯಲು ಕಷ್ಟವಾಗಲಿದೆ. ಆದ್ದರಿಂದ ಒಕ್ಕಲಿಗ ಮತ್ತು ಅಹಿಂದ ಮತ ಲೆಕ್ಕಾಚಾರ ಒಂದು ಕಡೆಯಾದ್ರೆ ಇನ್ನೊಂದು ಕಡೆ ಫೇಮಸ್ ನಟಿ ರಮ್ಯಾ ಸೂಕ್ತ ಅಭ್ಯರ್ಥಿ ಎಂಬ ಮಾತುಗಳು ಕೇಳಿಬರುತ್ತಿದೆ. ಆದ್ದರಿಂದ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರನ್ನು ಕಣಕ್ಕಿಳಿಸಲು ಮುಂದಾಗಿದೆ. ಜೊತೆಗೆ ಸಚಿವ ಆರ್.ಅಶೋಕ ವಿರೋಧಿ ಮತಗಳ ಕ್ರೋಢಿಕರಣದ ಲೆಕ್ಕಾಚಾರವನ್ನು ಸಹ ಕಾಂಗ್ರೆಸ್ ಮಾಡಿಕೊಂಡಿದೆ.
ಇನ್ನೂ ರಾಮನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರ ಹೇಳಿ ಕೇಳಿ ದಳಪತಿಗಳ ಭದ್ರಕೋಟೆ. ಈ ಜೆಡಿಎಸ್ ನಾಯಕರ ಪ್ರಾಬಲ್ಯ ಇರುವ ಈ ಕ್ಷೇತ್ರವನ್ನ ಪಡೆಯಲು ಡಿ ಕೆ ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಚಿಂತನೆ ನಡೆಸಿದ್ದಾರೆ. ಈಗಾಗಲೇ ಹಳೆ ಮೈಸೂರು ಭಾಗದ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ರಾಮನಗರ ಜಿಲ್ಲೆಯಲ್ಲೂ ಸಹ ಈ ಬಾರೀ ಪ್ರಬಲ ಸ್ಪರ್ಧಿಯನ್ನ ಕಣಕ್ಕಿಳಿಸಲು ತಯಾರಿ ನಡೆಸುತ್ತಿದೆ ಎನ್ನಲಾಗಿದೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚು ಪ್ರಬಲ್ಯ ಹೊಂದಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ವಿರುದ್ದ ರಮ್ಯಾ ಅವರನ್ನ ಕಣಳ್ಳಿಸುವ ಮೂಲಕ ಚನ್ನಪಟ್ಟಣವನ್ನ ಪಡೆಯುವ ತಂತ್ರಗಾರಿಕೆಗೆ ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ.
ಇನ್ನು ಒಕ್ಕಲಿಗ ಸಮುದಾಯವೇ ಹೆಚ್ಚಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಮುಖ್ಯಮಂತ್ರಿ ಅಭ್ಯರ್ಥಿ ಎಚ್.ಡಿ. ಕುಮಾರಸ್ವಾಮಿ, ಬಿಜೆಪಿಯಿಂದ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಸ್ಪರ್ಧೆ ಮಾಡುತ್ತಿದ್ದಾರೆ. ಅವರಿಗೆ ಠಕ್ಕರ್ ಕೊಡಲು ಹಾಗೂ ಒಕ್ಕಲಿಗ ಮತಗಳನ್ನು ಸೆಳೆಯಲು ರಮ್ಯಾ ಅವರನ್ನು ಸ್ಪರ್ಧೆಗಿಳಿಸಲು ಚಿಂತನೆ ಮಾಡಲಾಗಿದೆ. ಕಾಂಗ್ರೆಸ್ ಪಾಳಯದಲ್ಲಿ ಈ ಬಗ್ಗೆ ಗಂಭೀರವಾಗಿ ಚರ್ಚೆಯನ್ನು ಮಾಡಲಾಗುತ್ತಿದೆ. ಶೀಘ್ರದಲ್ಲೇ ಈ ಕುರಿತು ಅಂತಿಮ ನಿರ್ಧಾರಗಳು ಪ್ರಕಟವಾಗಲಿದೆ ಎಂದು ಕಾಂಗ್ರೆಸ್ ಮೂಲಗಳಿಂದ ತಿಳಿದುಬಂದಿದೆ.

ರಮ್ಯಾ ಕಾಂಗ್ರೆಸ್ ಪ್ರಬಲ ಅಭ್ಯರ್ಥಿ. ಈ ಹಿಂದೆಯೂ ಸಹ ರಮ್ಯಾ ಅವರು ಕೆಲ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಈಗಾಗಲೇ ಕಾಂಗ್ರೆಸ್ ಹೈಕಮಾಂಡ್ ನಾಯಕರ ಮಟ್ಟದಲ್ಲಿ ಈ ಕುರಿತು ಚರ್ಚೆ ನಡದಿದ್ದು, ಕಾಂಗ್ರೆಸ್ ಅಂತಿಮ ನಿರ್ಧಾರದ ಬಳಿಕ ನಟಿ ರಮ್ಯಾ ಸ್ಪರ್ಧೆ ಕುರಿತು ಸ್ಪಷ್ಟತೆ ಸಿಗಲಿದೆ.
-
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications