ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬ್ರೇಕಿಂಗ್ ನ್ಯೂಸ್ : ಸಿದ್ದರಾಮಯ್ಯ ಸಂಪುಟ ಸೇರಲಿದ್ದಾರೆ ರಮ್ಯಾ?

|
Google Oneindia Kannada News

ಬೆಂಗಳೂರು, ಅಕ್ಟೋಬರ್ 27 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿ ಪ್ರವಾಸದಲ್ಲಿದ್ದು ಸಂಪುಟ ವಿಸ್ತರಣೆ ಕಸರತ್ತು ನಡೆಯುತ್ತಿದೆ. ಮಂಡ್ಯ ಕ್ಷೇತ್ರದ ಮಾಜಿ ಸಂಸದೆ ರಮ್ಯಾ ಅವರು ಸಂಪುಟ ಸೇರಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸೋಮವಾರ ಬೆಳಗ್ಗೆ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ದೆಹಲಿಗೆ ತೆರಳಿದ್ದು, ಹೈಕಮಾಂಡ್ ನಾಯಕರ ಜೊತೆ ಸಂಪುಟ ವಿಸ್ತರಣೆ/ಪುನಾರಚನೆ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಮಂಗಳವಾರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಉಭಯ ನಾಯಕರು ಭೇಟಿ ಮಾಡಬೇಕಿದೆ. [ದೆಹಲಿಯಲ್ಲಿ ಶಾಸಕರಿಂದ ಲಾಬಿ]

ramya

ರಾಹುಲ್ ಗಾಂಧಿ ಅವರು ಬಿಹಾರ ವಿಧಾನಸಭೆ ಚುನಾವಣೆ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದು, ಸಂಜೆ ವೇಳೆಗೆ ದೆಹಲಿಗೆ ಮರಳಲಿದ್ದಾರೆ. ನಂತರ ಸಿದ್ದರಾಮಯ್ಯ ಮತ್ತು ಪರಮೇಶ್ವರ ಅವರು ಭೇಟಿ ಮಾಡಲಿದ್ದು, ಬುಧವಾರವೂ ಸಂಪುಟ ವಿಸ್ತರಣೆ ಸರ್ಕಸ್ ಮುಂದುವರೆಯುವ ಸಾಧ್ಯತೆ ಇದೆ.[ಉಪ್ಪಾರ ಸಮುದಾಯಕ್ಕೊಂದು ಸಚಿವ ಸ್ಥಾನ ನೀಡಿ]

ರಮ್ಯಾ ಸಂಪುಟಕ್ಕೆ? : ಮಂಡ್ಯ ಕ್ಷೇತ್ರದ ಮಾಜಿ ಸಂಸದೆ ರಮ್ಯಾ ಅವರ ಸಿದ್ದರಾಮಯ್ಯ ಸಂಪುಟ ಸೇರಲಿದ್ದಾರೆ ಎಂಬುದು ಸದ್ಯಕ್ಕೆ ಲಭ್ಯವಾಗಿರುವ ಮಾಹಿತಿ. ಆದರೆ, ಯಾವುದೇ ಕಾಂಗ್ರೆಸ್ ಪಕ್ಷದ ನಾಯಕರು ಈ ಬಗ್ಗೆ ಹೇಳಿಕೆ ನೀಡಿಲ್ಲ. ['ಸಂಪುಟದಿಂದ ನನ್ನನ್ನು ಕೈ ಬಿಟ್ಟರೆ ಒಳ್ಳೆಯದು']

ರಮ್ಯಾ ಅವರನ್ನು ವಿಧಾನಪರಿಷತ್ತಿಗೆ ಆಯ್ಕೆ ಮಾಡಿ ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತದೆ ಎಂಬ ಸುದ್ದಿಗಳು ಹಬ್ಬಿವೆ. ಸಂಪುಟ ಪುನಾರಚನೆ ಮಾಡುವ ಸಿದ್ದರಾಮಯ್ಯ ಅವರು ಅಸಮರ್ಥ ಸಚಿವರನ್ನು ಕೈ ಬಿಟ್ಟು ರಮ್ಯಾ ಅವರಿಗೆ ಅವಕಾಶ ನೀಡಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಈ ಪ್ರಸ್ತಾಪಕ್ಕೆ ಹೈಕಮಾಂಡ್ ಒಪ್ಪಿಗೆ ಸಿಕ್ಕಿದಿಯೇ?. [ರಾಜ್ಯ ರಾಜಕಾರಣಕ್ಕೆ ಬರಲ್ಲ ಅಂದ ರಮ್ಯಾ ಕಣ್ಣೀರಿಗೆ ಕಾರಣವೇನು?]

ಡಿಸಿಎಂ ಪಟ್ಟವಿಲ್ಲ? : ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರಿಗೆ ಉಪ ಮುಖ್ಯಮಂತ್ರಿ ಪಟ್ಟ ನೀಡಲು ಹೈಕಮಾಂಡ್ ಒಪ್ಪಿಗೆ ನೀಡಿಲ್ಲ ಎಂದು ತಿಳಿದುಬಂದಿದೆ. ಸಂಪುಟ ಸೇರುವುದಾದದರೆ ಉಪ ಮುಖ್ಯಮಂತ್ರಿಯಾಗಿ ಮಾತ್ರ ಎಂದು ಹೇಳಿರುವ ಪರಮೇಶ್ವರ ಅವರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಕಡಿಮೆ ಇದೆ.

ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಸದ್ಯ 4 ಸಚಿವ ಸ್ಥಾನಗಳು ಖಾಲಿ ಇವೆ. ಸಂಪುಟ ಪುನಾರಚನೆ ಮಾಡುವ ಮುಖ್ಯಮಂತ್ರಿಗಳು 10 ಅಸಮರ್ಥ ಸಚಿವರನ್ನು ಕೈ ಬಿಟ್ಟು ಹೊಬರಿಗೆ ಅವಕಾಶ ನೀಡಲಿದ್ದಾರೆ ಎಂಬುದು ಲೆಕ್ಕಾಚಾರ. ಈ ಪ್ರಸ್ತಾಪಗಳಿಗೆಲ್ಲಾ ಹೈಕಮಾಂಡ್ ಒಪ್ಪಿಗೆ ದೊರೆಯಲಿದೆಯೇ? ಎಂಬುದು ಸದ್ಯದ ಪ್ರಶ್ನೆ.

English summary
Former Mandya MP Ramya may join Chief minister Siddaramaiah cabinet. Siddaramaiah and KPCC president G.Parameshwara in Delhi. Both leaders will meet Congress vice president Rahul Gandhi on Tuesday evening to discuss about cabinet expansion.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X