ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ರಮ್ಯಾರನ್ನು ಸಂಸತ್ತಿನಲ್ಲಿ ನೋಡಲು ಬಯಸುತ್ತೇವೆ'

|
Google Oneindia Kannada News

ಬೆಂಗಳೂರು, ಜೂನ್ 24 : ಮಾಜಿ ಸಂಸದೆ ರಮ್ಯಾ ಅವರು ವಿಧಾನ ಪರಿಷತ್ತಿಗೆ ನಾಮ ನಿರ್ದೇಶನಗೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಸೇರಲಿದ್ದಾರೆ ಎಂಬ ಸುದ್ದಿಗಳು ಸುಳ್ಳಾಗಿವೆ. 'ರಮ್ಯಾ ಅವರನ್ನು ಪರಿಷತ್ತಿಗೆ ಆಯ್ಕೆ ಮಾಡುವ ಪ್ರಸ್ತಾಪವೇ ಇಲ್ಲ' ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.

ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, 'ರಮ್ಯಾರಂತಹ ಯುವ ನಾಯಕಿಯನ್ನು ನಾವು ಸಂಸತ್ತಿನಲ್ಲಿ ನೋಡಲು ಬಯಸುತ್ತೇವೆ. ಅವರನ್ನು ಪರಿಷತ್ತಿಗೆ ಆಯ್ಕೆ ಮಾಡುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ' ಎಂದರು. [ಸಿದ್ದರಾಮಯ್ಯ ಸಂಪುಟ ಸೇರಲಿದ್ದಾರೆ ರಮ್ಯಾ?]

dk shivakumar

ರಮ್ಯಾ ವಿಧಾನಪರಿಷತ್ತಿಗೆ ಆಯ್ಕೆಯಾಗಿ ಸಂಪುಟ ಸೇರಲಿದ್ದಾರೆ ಎಂಬ ಸುದ್ದಿಗಳನ್ನು ತಳ್ಳಿ ಹಾಕಿದ ಡಿ.ಕೆ.ಶಿವಕುಮಾರ್ ಅವರು, 'ರಮ್ಯಾ ಅವರು ಸಂಸತ್ತಿನಲ್ಲಿರಬೇಕು. ಒಕ್ಕಲಿಗರ ಕೋಟಾದಲ್ಲಿ ಸಂಪುಟದಲ್ಲಿ ಸ್ಥಾನ ನೀಡಲು ಇನ್ನೂ ಹಲವಾರು ನಾಯಕರು ಇದ್ದಾರೆ'. ಎಂದು ಹೇಳಿದರು. [ಕ್ಯಾಬಿನೆಟ್ ಗೆ ರಮ್ಯಾ ಸೇರಿದರೆ, ಬಂಡಾಯದ ಬೆಂಕಿಗೆ ತುಪ್ಪ]

ಸಂಪುಟ ಪುನಾರಚನೆ ವೇಳೆ ಒಕ್ಕಲಿಗ ಸಮುದಾಯದ ಕಿಮ್ಮನೆ ರತ್ನಾಕರ ಮತ್ತು ಅಂಬರೀಶ್ ಅವರನ್ನು ಸಂಪುಟದಿಂದ ಸಿದ್ದರಾಮಯ್ಯ ಅವರು ಕೈ ಬಿಟ್ಟಿದ್ದಾರೆ. ಆದ್ದರಿಂದ, ಖಾಲಿ ಇರುವ ಒಂದು ಸಚಿವ ಸ್ಥಾನವನ್ನು ಈ ಸಮುದಾಯಕ್ಕೆ ನೀಡಲಾಗುತ್ತದೆ. ರಮ್ಯಾ ಅವರು ಸಂಪುಟ ಸೇರಬಹುದು ಎಂಬ ಸುದ್ದಿ ಹಬ್ಬಿತ್ತು. [ಮೊದಲ ಬಾರಿ ಸಚಿವರಾದ 7 ಶಾಸಕರ ಪರಿಚಯ]

ಅಂಬರೀಶ್ ವಿರೋಧ? : ರಮ್ಯಾರನ್ನು ವಿಧಾನಪರಿಷತ್ತಿಗೆ ನಾಮ ನಿರ್ದೇಶನ ಮಾಡುವುದಕ್ಕೆ ಮಾಜಿ ಸಚಿವ ಅಂಬರೀಶ್ ವಿರೋಧ ವ್ಯಕ್ತಪಡಿಸಿದ್ದಾರೆ ಎಂಬುದು ಪಕ್ಷದ ಮೂಲಗಳ ಮಾಹಿತಿ. ಗುರುವಾರ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಅಂಬರೀಶ್ ಅವರನ್ನು ಭೇಟಿ ಮಾಡಿದ್ದರು. ಈ ಸಮಯದಲ್ಲಿ ಅಂಬರೀಶ್ ಈ ಕುರಿತು ಮಾತುಕತೆ ನಡೆಸಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. [ರಮ್ಯಾ ದೂಷಿಸಬೇಡಿ : ಅಂಬರೀಶ್]

English summary
Energy Minister D.K.Shivakumar said, Mandya former MP Ramya name not considered for legislative council.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X