ರಂಜಾನ್; ಕರ್ನಾಟಕದ ಉರ್ದು ಶಾಲೆಗಳ ಅವಧಿ ಬದಲಾವಣೆ
ಈ ವರ್ಷದ ರಂಜಾನ್ ಮಾಸ ಮಾರ್ಚ್ 23ರಿಂದ ಆರಂಭವಾಗುತ್ತದೆ. ಈ ಅವಧಿಯಲ್ಲಿ ಉರ್ದು ಶಾಲೆಗಳ ಅವಧಿ ಬದಲಾವಣೆ ಮಾಡಲಾಗುತ್ತದೆ.
ಬೆಂಗಳೂರು, ಮಾರ್ಚ್ 15; ರಂಜಾನ್ ತಿಂಗಳ ಅವಧಿಯಲ್ಲಿ ಕರ್ನಾಟಕದಲ್ಲಿ ಉರ್ದು ಶಾಲೆಗಳ ಅವಧಿ ಬದಲಾವಣೆಯಾಗಲಿದೆ. ಈ ಕುರಿತು ಸರ್ಕಾರದ ಪ್ರಧಾನ ಕಾರ್ಯದರ್ಶಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಪತ್ರವನ್ನು ಬರೆದಿದ್ದಾರೆ. ರಂಜಾನ್ ತಿಂಗಳ ಅವಧಿಯಲ್ಲಿ ಶಾಲಾ ಅವಧಿ ಬದಲಾವಣೆ ಮಾಡುವ ಕುರಿತು ಕರ್ನಾಟಕ ರಾಜ್ಯ ಭಾಷಾ ಅಲ್ಪಸಂಖ್ಯಾತ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘ (ರಿ.) ಸರ್ಕಾರಕ್ಕೆ ಮನವಿ ಮಾಡಿತ್ತು.
ಮಾರ್ಚ್ 14ರ ಮಂಗಳವಾರ ಸರ್ಕಾರದ ಅಧೀನ ಕಾರ್ಯದರ್ಶಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪ್ರಾಥಮಿಕ) ಮಹಾಂತಯ್ಯಎಸ್ ಹೊಸಮಠ ಆದೇಶ ಹೊರಡಿಸಿದ್ದಾರೆ. ರಂಜಾನ್ ತಿಂಗಳಿನಲ್ಲಿ ಉರ್ದು ಶಾಲೆಗಳ ಶಾಲಾ ಅವಧಿಗಳನ್ನು ಬದಲಾವಣೆ ಮಾಡುವ ಬಗ್ಗೆ ಎಂಬ ವಿಷಯವನ್ನು ಆದೇಶ ಒಳಗೊಂಡಿದೆ. ಕರ್ನಾಟಕ ರಾಜ್ಯ ಭಾಷಾ ಅಲ್ಪಸಂಖ್ಯಾತ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘ (ರಿ.) ಸಲ್ಲಿಕೆ ಮಾಡಿದ್ದ ಮನವಿ ಪತ್ರವನ್ನು ಉಲ್ಲೇಖಿಸಿ ಈ ಆದೇಶ ನೀಡಲಾಗಿದೆ.

ಕರ್ನಾಟಕ ರಾಜ್ಯ ಭಾಷಾ ಅಲ್ಪಸಂಖ್ಯಾತ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘ (ರಿ.), ಬೆಂಗಳೂರಿ ಇವರ ಮನವಿಗೆ ಸಂಬಂಧಿಸಿದಂತೆ, ದಿನಾಂಕ 23/03/2023ರಿಂದ ರಂಜಾನ್ ತಿಂಗಳು ಕೊನೆಗೊಳ್ಳುವ ತನಕ ಉರ್ದು ಶಾಲೆಗಳ ಶಾಲಾ ಅವಧಿಯನ್ನು ಬೆಳಗಿನ ಅವಧಿಯಲ್ಲಿ ನಡೆಸಲು ಅನುಕೂಲ ಮಾಡಿಕೊಡುವಂತೆ ಕೋರಿರುತ್ತಾರೆ. ಈ ಬಗ್ಗೆ ನಿಯಮಾನುಸಾರ ಪರಿಶೀಲಿಸಿ, ಸೂಕ್ತ ಕ್ರಮವಹಿಸಿ ಕ್ರಮದ ಬಗ್ಗೆ ಸರ್ಕಾರಕ್ಕೆ ವರದಿ ನೀಡುವಂತೆ ತಮ್ಮನ್ನು ಕೋರಲು ನಿರ್ದೇಶಿತವಾಗಿದ್ದೇನೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಮುಸ್ಲಿಮರಿಗೆ ರಂಜಾನ್ ಮಾಸ ಪವಿತ್ರವಾದದ್ದು. ರೋಜಾ ಅಥವ ಉಪವಾಸವನ್ನು ಈ ಸಂದರ್ಭದಲ್ಲಿ ಆಚರಣೆ ಮಾಡಲಾಗುತ್ತದೆ. ಸೂರ್ಯೋದಯಕ್ಕೆ ಮುಂಚೆ ತಿಂಡಿ (ಸೆಹ್ರಿ & ಸೋಹರ್) ಸೇವಿಸುತ್ತಾರೆ. ನಂತರ ಸೂರ್ಯಾಸ್ತದ ತನಕ ಉಪವಾಸ ಮಾಡುತ್ತಾರೆ. ಸೂರ್ಯಾಸ್ತದ ನಂತರ ಉಪವಾಸ ಕೊನೆಗೊಳಿಸುತ್ತಾರೆ. ಇದನ್ನು ಇಫ್ತಾರ್ ಎಂದು ಸಹ ಕರೆಯಲಾಗುತ್ತದೆ. ಈ ವರ್ಷದ ರಂಜಾನ್ ಮಾಸ ಮಾರ್ಚ್ 23ರಿಂದ ಆರಂಭವಾಗುತ್ತದೆ. ಈ ಅವಧಿಯಲ್ಲಿ ಉರ್ದು ಶಾಲೆಗಳ ಅವಧಿ ಬದಲಾವಣೆ ಮಾಡುವಂತೆ ಮನವಿ ಸಲ್ಲಿಕೆ ಮಾಡಲಾಗಿತ್ತು.
ರಂಜಾನ್ ಮಾಸದಲ್ಲಿ ಉಪವಾಸವಿದ್ದು ದೇವರ ಪ್ರಾರ್ಥನೆಯಲ್ಲಿ ತೊಡಗಲಾಗತ್ತದೆ. ರಂಜಾನ್ ಕೊನೆಯ ದಿನ ಈದ್-ಉಲ್-ಫಿತರ್ ಹಬ್ಬವನ್ನು ಆಚರಣೆ ಮಾಡಲಾಗುತ್ತದೆ. ಇಸ್ಲಾಂ ಧರ್ಮವನ್ನು ಆಚರಣೆ ಮಾಡುವವರು ಸೂರ್ಯೋದಯದ ಬಳಿಕ ಸೂರ್ಯಾಸ್ತದ ತನಕ ಉಪವಾಸ ಇರುತ್ತಾರೆ. ಆನಾರೋಗ್ಯ ಇರುವವರು, ವೃದ್ಧರು, ಗರ್ಭಿಣಿಯರು ಉಪವಾಸ ಮಾಡುವುದಿಲ್ಲ. ಉಳಿದವರು ರಂಜಾನ್ ಮಾಸದಲ್ಲಿ ಉಪವಾಸ ಇರುತ್ತಾರೆ. ಇಂತಹ ಸಮಯಲ್ಲಿ ಉರ್ದು ಶಾಲೆಗಳಲ್ಲಿ ಓದುವ ಮಕ್ಕಳಿಗೆ ಅನುಕೂಲವಾಗುವಂತೆ ಶಾಲಾ ಅವಧಿಯನ್ನು ಬದಲಾವಣೆ ಮಾಡಲಾಗುತ್ತಿದೆ.
ಉರ್ದು ಶಾಲೆಗಳಲ್ಲಿ ಶಿಕ್ಷಕರ ಕೊರತೆ; ಕಳೆದ ವರ್ಷ ರಾಜ್ಯದ ಉರ್ದು ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದೆ. ಇದರಿಂದಾಗಿ ಮಕ್ಕಳ ಶಿಕ್ಷಣದ ಮೇಲೆ ಪ್ರಭಾವ ಉಂಟಾಗುತ್ತಿದೆ ಎಂದ ವರದಿ ಬಂದಿತ್ತು. ಕಡಿಮೆ ಸಂಖ್ಯೆಯ ಶಿಕ್ಷಕರು ಇದ್ದಾರೆ, ಅವರು ಗುಣಮಟ್ಟದ ಬೋಧನೆಯ ಮೇಲೆ ಗಮನ ಹರಿಸುವುದಕ್ಕಿಂತ ವಿವಿಧ ಕಾರ್ಯಗಳಲ್ಲಿ ಹೆಚ್ಚಿನ ಸಮಯ ಕಳೆಯುತ್ತಿದ್ದಾರೆ. ಆದ್ದರಿಂದ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಲಾಗಿತ್ತು.
ಶಿಕ್ಷಣ ಇಲಾಖೆಯ ವೆಬ್‌ಸೈಟ್‌ಗಳ ಮಾಹಿತಿ ಪ್ರಕಾರ ಪ್ರಾಥಮಿಕ ಶಾಲೆಗಳಲ್ಲಿ ಶೇ 13ರಷ್ಟು ಮತ್ತು ಪ್ರೌಢ ಶಾಲೆಗಳಲ್ಲಿ ಶೇ 11ರಷ್ಟು ಶಿಕ್ಷಕರ ಕೊರತೆ ಇತ್ತು. ಕಳೆದ ನಾಲ್ಕೈದು ವರ್ಷಗಳ ಕಾಲ ಶಿಕ್ಷಕರ ನೇಮಕಾತಿ ನಡೆದ ಕಾರಣ ಶಿಕ್ಷಕರ ಸಂಖ್ಯೆಯಲ್ಲಿ ಕೊರತೆ ಉಂಟಾಗಿದೆ. ಇದರಿಂದಾಗಿ ಇರುವ ಶಿಕ್ಷಕರ ಮೇಲೆ ಹೆಚ್ಚಿನ ಕೆಲಸದ ಹೊರೆ ಬಂದಿದೆ ಎಂದು ಅಧಿಕಾರಿಗಳು ಹೇಳಿದ್ದರು. ಹಲವು ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಸರ್ಕಾರದ ಒಪ್ಪಿಗೆಯನ್ನು ಪಡೆದು ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ.
-
ಎಲ್ಪಿಜಿ ಪೂರೈಕೆಯಲ್ಲಿ ತೊಂದರೆ ಇಲ್ಲ, ಕೇಂದ್ರ ಸಚಿವರಿಂದ ಭರವಸೆ ಸಿಕ್ಕಿದೆ: ಸಿಎಂ ಸಿದ್ದರಾಮಯ್ಯ -
HPCL Recruitment 2026: HPCL ನಿಂದ 731 ಹುದ್ದೆಗಳಿಗೆ ಬೃಹತ್ ನೇಮಕಾತಿ, ವಾರ್ಷಿಕ 60 ಲಕ್ಷ ರೂ. ವರೆಗೆ ಸಂಬಳ -
ಮಾರ್ಚ್ 15ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
KAS ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದ KPSC: 384 ಗೆಜೆಟೆಡ್ ಪ್ರೊಬೇಷನರ್ಸ್ ಸಂದರ್ಶನ ಮುಂದೂಡಿಕೆ -
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
ಮಾರ್ಚ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ












Click it and Unblock the Notifications