• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಬೆಂಗಳೂರಿಗೆ ಬಂದ ಸುರ್ಜೇವಾಲ; ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೆಚ್ಚಿದ ಉತ್ಸಾಹ

|

ಬೆಂಗಳೂರು, ಸೆಪ್ಟೆಂಬರ್ 23: ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಕರ್ನಾಟಕಕ್ಕೆ ಆಗಮಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿ ನೇಮಕವಾದ ಬಳಿಕ ಮೊದಲ ಬಾರಿಗೆ ಅವರು ರಾಜ್ಯಕ್ಕೆ ಬಂದಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ರಾತ್ರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಬರಮಾಡಿಕೊಂಡರು. ಕೆಪಿಸಿಸಿಯ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಂ ಅಹಮದ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಸೆಪ್ಟೆಂಬರ್ 11ರಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿಯಾಗಿ ನೇಮಕಮಾಡಲಾಗಿತ್ತು. ಕೆ. ಸಿ. ವೇಣುಗೋಪಾಲ್ ಅವರು ಇದಕ್ಕೂ ಮೊದಲು ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿದ್ದರು.

ರಣದೀಪ್ ಸಿಂಗ್ ಸುರ್ಜೇವಾಲ ಆಗಮನ ಕರ್ನಾಟಕ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಿದೆ. ಎರಡು ದಿನಗಳ ಕಾಲ ರಾಜ್ಯದಲ್ಲಿ ಇರುವ ಸುರ್ಜೇವಾಲಾ ಪಕ್ಷದ ನಾಯಕರ ಜೊತೆ ಸಭೆಗಳನ್ನು ನಡೆಸಲಿದ್ದಾರೆ.

ರಣದೀಪ್ ಸಿಂಗ್ ಸುರ್ಜೇವಾಲ

ರಣದೀಪ್ ಸಿಂಗ್ ಸುರ್ಜೇವಾಲ

ರಣದೀಪ್ ಸಿಂಗ್ ಸುರ್ಜೇವಾಲ ಹರ್ಯಾಣ ರಾಜ್ಯದವರು. ಹರ್ಯಾಣದಲ್ಲಿ ಕಾಂಗ್ರೆಸ್ ಶಾಸಕರಾಗಿ, ಸಚಿವರಾಗಿ ಕಾರ್ಯ ನಿರ್ವಹಣೆ ಮಾಡಿದವರು. ಪ್ರಸ್ತುತ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ. ಮೊದಲ ಬಾರಿಗೆ ಅವರು ರಾಜ್ಯಕ್ಕೆ ಆಗಮಿಸಿದ್ದಾರೆ.

ಕಾಂಗ್ರೆಸ್ ನಾಯಕರ ಜೊತೆ ಸಭೆ

ಕಾಂಗ್ರೆಸ್ ನಾಯಕರ ಜೊತೆ ಸಭೆ

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿಯಾಗಿ ನೇಮಕಗೊಂಡ ಬಳಿಕ ಮೊದಲ ಬಾರಿಗೆ ಬೆಂಗಳೂರಿಗೆ ರಣದೀಪ್ ಸಿಂಗ್ ಸುರ್ಜೇವಾಲ ಆಗಮಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ನಾಯಕರ ಜೊತೆ ಕುಮಾರ ಕೃಪಾ ಅತಿಥಿ ಗೃಹದಲ್ಲಿ ಅವರು ಸಭೆಯನ್ನು ನಡೆಸಲಿದ್ದಾರೆ.

  Congress ನಾ ಮಹತ್ವದ ಹುದ್ದೆ ಈ ನಾಯಕರ ಪಾಲು!!! | Oneindia Kannada
  ಪಕ್ಷ ಸಂಘಟನೆಗೆ ಸಲಹೆ

  ಪಕ್ಷ ಸಂಘಟನೆಗೆ ಸಲಹೆ

  ಕಾಂಗ್ರೆಸ್ ನಾಯಕರ ಜೊತೆ ಸಭೆ ನಡೆಸಲಿರುವ ರಣದೀಪ್ ಸಿಂಗ್ ಸುರ್ಜೇವಾಲ‌ ಪಕ್ಷ ಸಂಘಟನೆ ಬಗ್ಗೆ ನಾಯಕರಿಂದ ಅಭಿಪ್ರಾಯಗಳನ್ನು ಪಡೆಯಲಿದ್ದಾರೆ. ಮಾಡಲಿದ್ದಾರೆ. ರಾಜ್ಯದ ರಾಜಕೀಯ ಪರಿಸ್ಥಿತಿ, ಸರ್ಕಾರದ ವಿರುದ್ಧ ಹೋರಾಟ ಮಾಡಲು ರಾಜ್ಯ ನಾಯಕರಿಗೆ ಸಲಹೆಗಳನ್ನು ನೀಡಲಿದ್ದಾರೆ.

  ಪದಾಧಿಕಾರಿಗಳ ಪಟ್ಟಿ

  ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮಯದಲ್ಲಿ ಸೇರ್ಪಡೆಗೊಂಡ ನೇಮಕಗೊಂಡ ಪದಾಧಿಕಾರಿಗಳು ಬದಲಾಗಲಿದ್ದಾರೆ. ಅಕ್ಟೋಬರ್‌ನಲ್ಲಿ ಪದಾಧಿಕಾರಿಗಳ ಹೊಸ ಪಟ್ಟಿ ಪ್ರಕಟಗೊಳ್ಳುವ ನಿರೀಕ್ಷೆ ಇದೆ. ಪಕ್ಷ ಸಂಘಟನೆಗೆ ಸಕ್ರಿಯವಾಗಿ ದುಡಿಯುವ ಕಾರ್ಯಕರ್ತರಿಗೆ ಪಟ್ಟಿಯಲ್ಲಿ ಆದ್ಯತೆ ಸಿಗಲಿದೆ.

  English summary
  Randeep Singh Surjewala in Bengaluru. It is his first visit to Karnataka after appointed as Karnataka Congress in-charge.
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X