ಬಿಬಿಎಂಪಿ ಅಧಿಕಾರಿಗಳ ಜೊತೆ ರಣದೀಪ್ ಸುರ್ಜೇವಾಲ ಸಭೆ: ಗವರ್ನರ್​ಗೆ ದೂರು ನೀಡಲು ಮುಂದಾದ ಬಿಜೆಪಿ

ಬೆಂಗಳೂರು, ಜೂನ್‌ 14: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ವಿರುದ್ದ ಬುಧವಾರ ಮಧ್ಯಾಹ್ನ 12.30ಕ್ಕೆ ಗವರ್ನರ್​ಗೆ ದೂರು ನೀಡಲು ಮಾಜಿ ಸಚಿವ ಆರ್.ಅಶೋಕ್​ ನೇತೃತ್ವದಲ್ಲಿ ಬಿಜೆಪಿ ಶಾಸಕರ ನಿಯೋಗದಿಂದ ದೂರು ನೀಡಲು ಮುಂದಾಗಿದೆ

ಬಿಬಿಎಂಪಿ ಚುನಾವಣೆ ತಯಾರಿ ಸಂಬಂಧ ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಮಂಗಳವಾರ ಸಭೆ ನಡೆದಿದ್ದು, ಈ ಸಭೆಯಲ್ಲಿ ಬಿಬಿಎಂಪಿ ಅಧಿಕಾರಿಗಳ ಜೊತೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಉಪಸ್ಥಿತರಾಗಿರುವುದಕ್ಕೆ ರಾಜ್ಯ ಬಿಜೆಪಿ ಕಿಡಿಕಾರಿದೆ. ಬೆಂಗಳೂರಿನ ಶಾಂಗ್ರಿಲಾ ಹೋಟೆಲ್‌ನಲ್ಲಿ #ATMSarkara ದ ಗೌಪ್ಯ ಸಭೆಯ ರಹಸ್ಯವೇನು...? ಇದು 85% ಡೀಲ್‌ ಫಿಕ್ಸಿಂಗ್ ಸಭೆಯೇ..? ಎಂದು ಪೋಟೋವನ್ನ ಹಂಚಿಕೊಂಡು ರಾಜ್ಯ ಬಿಜೆಪಿ ಪ್ರಶ್ನಿಸಿದೆ.

Randeep Surjewala chairs meeting of officials

ಅಲ್ಲದೇ ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರು ಈ ಕುರಿತು ಸಿದ್ದರಾಮಯ್ಯ ಅವರನ್ನ ಪ್ರಶ್ನಿಸಿದ್ದಾರೆ.ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ಸರ್ಕಾರದ ಬದಲಿಗೆ ಹೈಕಮಾಂಡಿನ ಹಂಗಿನ ಸರಕಾರ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದಾರೆ.

ರಾಜ್ಯದಲ್ಲಿರುವುದು ಸಿದ್ದರಾಮಯ್ಯನವರ ನೇತೃತ್ವದ ಸರಕಾರವೋ ಅಥವಾ ದಿಲ್ಲಿಯ ಜನಪಥ ರಸ್ತೆಯ 10ನೇ ನಂಬರಿನ ಹಂಗಿನ ಸರಕಾರವೋ? ಕನ್ನಡಿಗರು ಮತ ಹಾಕಿದ್ದು ಕೈ ಸರಕಾರಕ್ಕಾ?ಅಥವಾ ಕೈಗೊಂಬೆ ಸರಕಾರಕ್ಕಾ?? ಪಾಪ.. ಜನರ ವೋಟು ಹಂಗಿನ ಸರಕಾರದ ಪಾಲಾಗಿದೆ.ಸರಕಾರಕ್ಕೆ ತಿಂಗಳು ತುಂಬುವ ಮೊದಲೇ ಅದು ಸಾಬೀತಾಗಿದೆ ಎಂದು ಟೀಕಿಸಿದ್ದಾರೆ.

ಅಲ್ಲದೆ, 'ಹತ್ತನೇ ನಂಬರಿನ ಹಂಗಿನ ಸರಕಾರ' ಎಂದು ಹ್ಯಾಷ್ ಟ್ಯಾಗ್ ಹಾಕಿ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸರಕಾರದ ಅಧಿಕೃತ ಸಭೆಗಳನ್ನು ಹೈಕಮಾಂಡಿನ ನಿಲಯದ ಕಲಾವಿದರೇ ನಡೆಸುವ ಕರ್ಮ ಕರ್ನಾಟಕದ್ದು! ನಾನು ಟ್ಯಾಗ್ ಮಾಡಿರುವ ಫೋಟೋ ಆ ದೈನೇಸಿ ಸ್ಥಿತಿಗೆ ಸಾಕ್ಷಿ. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಂದೀಪ್ ಸುರ್ಜೆವಾಲಾ ಅವರಿಗೆ ಸರಕಾರದ ಸಭೆಗಳನ್ನು ನಡೆಸುವ ಜವಾಬ್ದಾರಿ, ಅವಕಾಶ ಕೊಟ್ಟವರು ಯಾರು ಎಂದು ಅವರು ಪ್ರಶ್ನಿಸಿದ್ದಾರೆ.

ಸಭೆಯಲ್ಲಿ ಹಿರಿಯ ಸಚಿವರಿದ್ದಾರೆ! ಹಿರಿಯ ಐಎಎಸ್ ಅಧಿಕಾರಿಗಳೂ ಹಾಜರಿದ್ದಾರೆ!! ಅಲ್ಲಿಗೆ ಇದು ಅಧಿಕೃತ ಸಭೆಯೇ ಆಯಿತು. ಆದರೆ, ಅಲ್ಲಿ ಸುರ್ಜೆವಾಲಾ ಸೆಂಟರ್ ಸೀಟಿನಲ್ಲಿದ್ದಾರೆ! ಸಚಿವರು ಸೈಡು ಕುರ್ಚಿಗಳ ಪಾಲಾಗಿದ್ದಾರೆ!! ಇದೇನು ವಿಚಿತ್ರ? ಮಾನ್ಯ ಮುಖ್ಯಮಂತ್ರಿಗಳೇ ಉತ್ತರಿಸಬೇಕು ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+