KPCC President Post: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸುರ್ಜೇವಾಲ ಸ್ಪಷ್ಟನೆ: ಸತೀಶ್ ಜಾರಕಿಹೊಳಿಗೆ ನೋಟಿಸ್?
ಬೆಳಗಾವಿ, ಜನವರಿ 17: ಕರ್ನಾಟಕ ಕಾಂಗ್ರೆಸ್ನಲ್ಲಿನ ಕೆಪಿಸಿಸಿ ಬದಲಾವಣೆ ಕುರಿತು ಸಚಿವ ಸತೀಶ್ ಜಾರಕಿಹೊಳಿ ಬಹಿರಂಗ ಹೇಳಿಕೆ ಆಂತರಿಕ ಸಂಘರ್ಷಕ್ಕೆ ಕಾರಣವಾಗಿದೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಕೈ ಪಾಳಯದ ನಾಯಕರು ಮಾಧ್ಯಮಗಳ ಮೂಲಕ ಬಹಿರಂಗ ಹೇಳಿಕೆ ಹಲವು ಗೊಂದಲಕ್ಕೆ ಕಾರಣವಾಗಿದ್ದು, ಈ ಬಗ್ಗೆ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟನೆ ನೀಡಿದ್ದಾರೆ.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಬೆಳಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲ ಅವರು,ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡುತ್ತಿದ್ದರೆ ಇಲ್ಲೇಕೆ ಬರುತ್ತಿದ್ದರು ಎಂದು ಮರು ಪ್ರಶ್ನಿಸಿದರು. ಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾವುದೇ ಕಾರಣಕ್ಕೂ ಬದಲಾಗುವುದಿಲ್ಲ ಎಂದು ತಿಳಿಸಿದ್ದಾರೆ. ಅಲ್ಲದೇ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಂಬಂಧ ನೀಡಿರುವ ಹೇಳಿಕೆಗಳಿಗೆ ಸಂಬಂಧಿಸಿ ಸಚಿವ ಸತೀಶ್ ಜಾರಕಿಹೊಳಿಗೆ ಕಾಂಗ್ರೆಸ್ ಹೈಕಮಾಂಡ್ ನೋಟಿಸ್ ನೀಡಿದೆ ಎಂಬ ವದಂತಿಗಳನ್ನು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅಲ್ಲಗಳೆದಿದ್ದಾರೆ.

ನೋಟಿಸ್ ನೀಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಯಾರು ಈ ರೀತಿ ವದಂತಿಗಳನ್ನೆಲ್ಲ ಹಬ್ಬಿಸುತ್ತಿದ್ದಾರೆ ಎಂಬುದು ಗೊತ್ತಿಲ್ಲ. ಯಾವ ಸಚಿವರಿಗೂ ಯಾವ ನಾಯಕರಿಗೂ ನೋಟಿಸ್ ನೀಡಲು ಯಾವುದೇ ಕಾರಣವಿಲ್ಲ ಎಂದರು. ಅಲ್ಲದೆ, ಕಾಂಗ್ರೆಸ್ ಆಂತರಿಕ ಸಂಘರ್ಷ ಸಂಬಂಧಿತ ವದಂತಿಗಳನ್ನು ಬಿಜೆಪಿ ನಾಯಕರು ಹರಡುತ್ತಿದ್ದಾರೆ ಎಂದು ಅವರು ಆರೋಪಿಸಿದರು. ಬಿಜೆಪಿ ಪ್ರಾಯೋಜಿತ ಆಧಾರರಹಿತ ಮಾತುಗಳ ಮೇಲೆ ವಿಶ್ವಾಸವಿಡಬೇಡಿ ಎಂದೂ ಮಾಧ್ಯಮಗಳ ಮೂಲಕ ಸುರ್ಜೇವಾಲ ಅವರು ಮನವಿ ಮಾಡಿದರು.
ಇದೆ ವೇಳೆ AICC ಸಮಾವೇಶದ ಪೂರ್ವ ಸಿದ್ಧತೆ ಪರಿಶೀಲನೆಯನ್ನು ನಡೆಸಲು ಸುರ್ಜೆವಾಲಾ ಇದೀಗ ಬೆಳಗಾವಿಗೆ ಆಗಮಿಸಿದ್ದಾರೆ. ಬೆಳಗಾವಿಯಲ್ಲಿ ಎರಡು ದಿನ ಸಮಾವೇಶ ತಯಾರಿ ಪರಿಶೀಲನೆ ಮಾಡಲಿದ್ದಾರೆ. ಜನವರಿ 21ರಂದು ನಡೆಯುವ ಗಾಂಧಿ ಭಾರತ ಸಮಾವೇಶ ಪೂರ್ವಭಾವಿ ಸಭೆ ನಡೆಸಲಿದ್ದು, ಸಭೆಯಲ್ಲಿ ಕಾಂಗ್ರೆಸಿನ ಹಲವು ನಾಯಕರು ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಚರ್ಚಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರದಲ್ಲಿ ಕೈ ಪಾಳಯದ ಸಮರ ಜೋರಾಗಿದ್ದು, ಬೆಳಗಾವಿ ಅಧಿವೇಶನದಲ್ಲಿ ಕೆಪಿಸಿಸಿ ಬದಲಾವಣೆ ಕುರಿತು ಚರ್ಚೆ ನಡೆಯಲಿದೆ ಎಂದು ಹೇಳಲಾಗಿದೆ. ಈಗಾಗಲೇ ಕೆಲ ನಾಯಕರು ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರೆಸ್ ನಲ್ಲಿ ಒಳ ಬೇಗೂದಿಗೆ ಹೈಕಮಾಂಡ್ ಇದೀಗ ಮದ್ದು ಅರಿಯುತ್ತಿದ್ದು, ಪವರ್ ಶೇರಿಂಗ್ ಕದನದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಎಂಟ್ರಿ ಆಗಿದೆ. ಈಗಾಗಲೇ ರಣದೀಪ್ ಸಿಂಗ್ ಸುರ್ಜೆವಾಲಾ ಬೆಳಗಾವಿಗೆ ಆಗಮಿಸಿದ್ದಾರೆ. ಈ ವೇಳೆ ಸತೀಶ್ ಜಾರಕಿಹೊಳಿ ಸುರ್ಜೆವಾಲಾ ಅವರನ್ನು ಭೇಟಿ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ಇನ್ನೂ ಸಚಿವರು ಹಾಗೂ ಶಾಸಕರು ಪಕ್ಷದ ಆಂತರಿಕ ವಿಚಾರಗಳನ್ನ ಹಾಗೂ ನಾಯಕತ್ವ ಬದಲಾವಣೆಯ ತೀರ್ಮಾನವನ್ನು ತೆಗೆದುಕೊಳ್ಳುವುದು ಮಾಧ್ಯಮಗಳಲ್ಲ. ನಮ್ಮ ಪಕ್ಷದ ಹೈಕಮಾಂಡ್ ಆಗಿದೆ. ಹೀಗಾಗಿ ಪಕ್ಷದ ನಾಯಕರು ಯಾವುದೇ ವಿಷಯಗಳು ಇದ್ದರೂ ಮೊದಲಿಗೆ ಹೈಕಮಾಂಡ್ ನಾಯಕರ ಗಮನಕ್ಕೆ ತರಬೇಕೇ ವಿನಃ ಮಾಧ್ಯಮಗಳ ಮುಂದಲ್ಲ. ಇಂಥ ಹೇಳಿಕೆ ನೀಡಿರುವವರ ವರದಿಯನ್ನು ಹೈಕಮಾಂಡ್ ನಾಯಕರು ಕೇಳಿದ್ದಾರೆ ಎಂದು ಕಾಂಗ್ರೆಸ್ ಹೈಕಮಾಂಡ್ ಖಡಕ್ ಎಚ್ಚರಿಕೆಯನ್ನ ನೀಡಿದೆ.
-
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ











Click it and Unblock the Notifications