ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆ: ದೇಶದಲ್ಲಿ 6ನೇ ಸ್ಥಾನಕ್ಕೆ ಜಿಗಿದ ಕರ್ನಾಟಕ

|
Google Oneindia Kannada News

ಬೆಂಗಳೂರು, ಡಿಸೆಂಬರ್ 23: ವಿಶ್ವಸಂಸ್ಥೆಯು ನೀಡಿರುವ ಸುಸ್ಥಿರ ಅಭಿವೃದ್ಧಿಯು 17 ಗುರಿಗಳ ಸಾಧನೆಯಲ್ಲಿ ಕರ್ನಾಟಕವು ದೇಶದಲ್ಲಿ 6 ನೇ ಸ್ಥಾನದಲ್ಲಿದೆ. ಇದನ್ನು ಇನ್ನಷ್ಟು ಉತ್ತಮಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಯೋಜನಾ ಇಲಾಖೆಯು ಸಿದ್ಧ ಪಡಿಸಿರುವ ಇಂದು ಸುಸ್ಥಿರ ಅಭಿವೃದ್ಧಿ ಗುರಿಗಳ ಮುನ್ನೋಟ 2030 ರ ಕ್ರಿಯಾ ಯೋಜನೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬಿಡುಗಡೆ ಮಾಡಿ ಮಾತನಾಡಿದರು.

ರಾಜ್ಯದಲ್ಲಿ ರಾತ್ರಿ ಕರ್ಫ್ಯೂ: ಏನು ಇರುತ್ತದೆ? ಏನು ಇರುವುದಿಲ್ಲ?ರಾಜ್ಯದಲ್ಲಿ ರಾತ್ರಿ ಕರ್ಫ್ಯೂ: ಏನು ಇರುತ್ತದೆ? ಏನು ಇರುವುದಿಲ್ಲ?

ಸುಸ್ಥಿರ ಅಭಿವೃದ್ಧಿ ಗುರಿಗಳ ಮುನ್ನೋಟ 2030ರ ಕಾರ್ಯತಂತ್ರ ಮತ್ತು ಕ್ರಿಯಾ ಯೋಜನೆಯು ಮುಂದಿನ 10 ವರ್ಷಗಳ ರಾಜ್ಯದಲ್ಲಿ ಸುಸ್ಥಿರ ಅಭಿವೃದ್ಧಿ ಪಥದಲ್ಲಿ ಮುನ್ನಡೆಯಲು ಪೂರಕವಾದ ಮಾರ್ಗಸೂಚಿಗಳನ್ನು ಒದಗಿಸುತ್ತದೆ. ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿ ದೃಷ್ಟಿಕೋನವನ್ನು ಅನುಷ್ಠಾನಕ್ಕೆ ತರಲು ಇದು ಸಹಕಾರಿಯಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಭಿಪ್ರಾಯಪಟ್ಟರು.

ಗುಣಮಟ್ಟದ ಜೀವನ

ಗುಣಮಟ್ಟದ ಜೀವನ

ರಾಜ್ಯದ ಎಲ್ಲ ಜನರಿಗೆ ಉತ್ತಮ ಜೀವನೋಪಾಯ, ಸ್ವಚ್ಛ ಪರಿಸರ, ಉತ್ತಮ ರೋಗ್ಯ, ಗುಣಮಟ್ಟದ ಶಿಕ್ಷಣ, ಪೌಷ್ಟಿಕ ಆಹಾರ ಇತ್ಯಾದಿ ಗುರಿಗಳನ್ನು ತಲುಪಲು ಈ ಕ್ರಿಯಾ ಯೋಜನೆ ಒತ್ತು ನೀಡುತ್ತದೆ. ಹೆಚ್ಚು ಸುಧಾರಣೆಯ ಅಗತ್ಯವಿರುವ ಪ್ರದೇಶ ಮತ್ತು ಕಾರ್ಯಕ್ರಮಗಳಿಗೆ ಮುಂದಿನ ಆಯವ್ಯಯದಲ್ಲಿ ಅಗತ್ಯ ಅನುದಾನ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಿಳಿಸಿದರು.

2030ರೊಳಗೆ ಗುರಿ ಸಾಧನೆ

2030ರೊಳಗೆ ಗುರಿ ಸಾಧನೆ

ಕರ್ನಾಟಕ ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ಬಿ.ಜೆ. ಪುಟ್ಟಸ್ವಾಮಿ ಅವರು ಮಾತನಾಡಿ, ತಾವು ಕರ್ನಾಟಕಕ್ಕಿಂತ ಉತ್ತಮ ಶ್ರೇಯಾಂಕ ಹೊಂದಿರುವ ಕೇರಳ, ಗುಜರಾತ್ ಮತ್ತು ಇತರ ರಾಜ್ಯಗಳಿಗೆ ಭೇಟಿ ನೀಡಿದ್ದು, ಆ ರಾಜ್ಯಗಳಲ್ಲಿ ಸುಸ್ಥಿರ ಅಭಿವೃದ್ಧಿ ಗುರಿ 2030 ಸಾಧನೆಗೆ ಕೈಗೊಂಡಿರುವ ಕ್ರಮಗಳ ಕುರಿತು ಅಧ್ಯಯನ ನಡೆಸಲಾಗಿದೆ. ಇದರ ವಿವರಗಳನ್ನು ಯೋಜನಾ ಮಂಡಳಿಯ ಸಭೆಯಲ್ಲಿ ಪ್ರಸ್ತುತ ಪಡಿಸುವುದಾಗಿ ತಿಳಿಸಿದರು.

ಆರ್ಥಿಕ ಇಲಾಖೆಯೊಂದಿಗೆ ಚರ್ಚೆ

ಆರ್ಥಿಕ ಇಲಾಖೆಯೊಂದಿಗೆ ಚರ್ಚೆ

ಕಾರ್ಯಕ್ರಮದಲ್ಲಿ ಮಾತನಾಡಿದ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರು, ಕೇಂದ್ರ ಸರ್ಕಾರದ ನೀತಿ ಆಯೋಗದ ಸೂಚನೆಯಂತೆ ಸುಸ್ಥಿರ ಅಭಿವೃದ್ಧಿಯ 17 ಗುರಿ ಸಾಧನೆಗೆ ನಿವೃತ್ತ/ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಪ್ರತ್ಯೇಕ ತಂಡಗಳನ್ನು ರಚಿಸಲಾಗಿತ್ತು. ಈ ಅಧಿಕಾರಿಗಳ ಸಮಿತಿಗಳು ಕಾರ್ಯಯೋಜನೆಗಳನ್ನು ರೂಪಿಸಿ ಸಲ್ಲಿಸಿವೆ. ಅವುಗಳನ್ನು ಆಯವ್ಯಯದಲ್ಲಿ ಅಳವಡಿಸುವ ಕುರಿತಾಗಿ ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ ಕ್ರಮ ವಹಿಸಲಾಗುತ್ತಿದೆ ಎಂದು ವಿವರಿಸಿದರು.

ಡಾ. ಶಾಲಿನಿ ರಜನೀಶ್

ಡಾ. ಶಾಲಿನಿ ರಜನೀಶ್

ಯೋಜನಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಮಾತನಾಡಿ, ನೀತಿ ಆಯೋಗ ಬಿಡುಗಡೆ ಮಾಡಿದ 2019ರ ಎಸ್ ಡಿ ಜಿ ಇಂಡಿಯಾ ಇಂಡೆಕ್ಸ್‌ನಲ್ಲಿ ಕರ್ನಾಟಕ 66 ಅಂಕಗಳೊಂದಿಗೆ 6ನೇ ಸ್ಥಾನದಲ್ಲಿದೆ. ಕಡಿಮೆ ಅಂಕ ಪಡೆದಿರುವ ಗುರಿಗಳನ್ನು ಸಾಧಿಸಲು ಆದ್ಯತೆ ನೀಡುವ ಮೂಲಕ ಕರ್ನಾಟಕದ ಶ್ರೇಯಾಂಕವನ್ನು ಉತ್ತಮಪಡಿಸಬಹುದಾಗಿದೆ ಎಂದು ವಿವರಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಿಡುಗಡೆ ಮಾಡಿದ ಕ್ರಿಯಾ ಯೋಜನೆಯ ವಿವರಗಳು planning.karnataka.gov.in ವೆಬ್‌ಸೈಟಿನಲ್ಲಿ ಲಭ್ಯವಿದೆ.

Recommended Video

9 ತಿಂಗಳ ಬಳಿಕ ದರ್ಶನ ನೀಡಿದ ಪುರಿ ಜಗನ್ನಾಥ ! | Oneindia Kannada

English summary
Karnataka ranks 6th in the country in achieving the 17 goals set by the United Nations for Sustainable Development. Chief Minister B.S. Yeddyurappa directed the authorities. Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X