BJP MLA Munirathna Case: "ಮುನಿರತ್ನ ವಿಧಾನಸೌಧದಲ್ಲೇ ಅತ್ಯಾಚಾರ ಮಾಡಿದ್ರು"
Munirathna Case: ಬಿಬಿಎಂಪಿ ಗುತ್ತಿಗೆದಾರನಿಗೆ ಬೆದರಿಕೆ ಹಾಗೂ ಅವಾಚ್ಯ ಶಬ್ಧಗಳಿಂದ ನಿಂದನೆ ಪ್ರಕರಣದಲ್ಲಿ ಆರ್‌ಆರ್ ನಗರ ಬಿಜೆಪಿ ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು ಮಂಜೂರಾಗಿತ್ತು. ಇದರೆ ಬೆನ್ನಲ್ಲೇ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರು ಮತ್ತೆ ಬಂಧಿಸಿದ್ದರು. ಇನ್ನೂ ಇದೀಗ ಪೊಲೀಸರ ವಿಚಾರಣೆ ವೇಳೆ ಸಂತ್ರಸ್ತ ಮಹಿಳೆ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಮುನಿರತ್ನ ಅತ್ಯಾಚಾರ ಪ್ರಕರಣ ಸಂಬಂಧ ಇಂದು (ಸೆಪ್ಟೆಂಬರ್ 26) ಪೊಲೀಸರು ವಿಚಾರಣೆ ನಡೆಸಿದರು. "ಈ ವೇಳೆ ವಿಧಾನಸೌಧದಲ್ಲೇ ಅತ್ಯಾಚಾರ ಎಸಗಿದರು," ಎಂದು ಆರ್‌ಆರ್ ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಸಂತ್ರಸ್ತ ಮಹಿಳೆ ಸ್ಫೋಟಕ ಹೇಳಿಕೆ ನೀಡಿದ್ದಾರೆ.

"ಬರೀ ವಿಧಾನಸೌಧ ಮತ್ತು ವಿಕಾಸಸೌದದ ಅಷ್ಟೇ ಅಲ್ಲದೆ, ಸರ್ಕಾರಿ ಕಾರಿನಲ್ಲೂ ಕೂಡ ಅತ್ಯಾಚಾರ ಎಸಗಿದ್ದಾರೆ," ಎಂದು ಸಂತ್ರಸ್ತ ಮಹಿಳೆ ಪೊಲೀಸರ ಮುಂದೆ ಸ್ಫೋಟಕ ಹೇಳಿಕೆ ದಾಖಲಿಸಿದ್ದಾರೆ.
ಅತ್ಯಾಚಾರ ಪ್ರಕರಣದಲ್ಲಿ ಆರ್‌ಆರ್ ನಗರ ಬಿಜೆಪಿ ಶಾಸಕ ಮುನಿರತ್ನ ಜೈಲು ಸೇರಿದ್ದಾರೆ. ಈ ಪ್ರಕರಣದ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇನ್ನು ಈ ಬಗ್ಗೆ ವಿಚಾರಣೆ ನಡೆಸಿದ ಪೊಲೀಸರ ಮುಂದೆ ಸಂತ್ರಸ್ತ ಮಹಿಳೆ ಸ್ಫೋಟಕ ಹೇಳಿಕೆ ನೀಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಬಿಬಿಎಂಪಿ ಗುತ್ತಿಗೆದಾರನಿಗೆ ಬೆದರಿಕೆ ಅವಾಚ್ಯ ಶಬ್ಧಗಳಿಂದ ನಿಂಧನೆ ಹಾಗೂ ಬೆದರಿಕೆ ಪ್ರಕರಣದಲ್ಲಿ ಆರ್‌ಆರ್ ನಗರ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿತ್ತು. ಇದರ ಬನ್ನಲೇ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಿಂದಲೇ ಕಗ್ಗಲೀಪುರ ಠಾಣೆಯ ಪೊಲೀಸರು ಬಂಧಿಸಿ ಕರೆದೊಯ್ದಿದ್ದರು.
ಮುನಿರತ್ನ ಹೇಳಿದ್ದೇನು.?: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರೆಯ ಹನಿಟ್ರಾಪ್ ಆರೋಪದ ಬಗ್ಗೆ ಶಾಸಕ ಮುನಿರತ್ನ ಪೊಲೀಸರ ಮುಂದೆ ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. "ದೂರುದಾರೆ ನನಗೆ ತುಂಬಾ ಪರಿಚಯ, ಆಕೆಯ ವೃತ್ತಿಯ ಹನಿಟ್ರ್ಯಾಪ್ ಮಾಡುವುದಾಗಿದೆ. ನಿಮಗೆ ಯಾರ ವಿಡಿಯೋ ಬೇಕು ಹೇಳಿ, ನಿಮಗೆ ದುಷ್ಮನ್ ಯಾರಿದ್ದಾರೆ ಹೇಳಿ. ಅಂತಹವರ ವಿಡಿಯೋ ಮಾಡಿಕೊಡುತ್ತೇನೆ ಎಂದು ಆಫರ್ ಕೊಟ್ಟಿದ್ದಳು. ಇದಕ್ಕೆ ನಾನು ಒಪ್ಪಿರಲಿಲ್ಲ," ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.
"ಆಕೆಯೆ ಅಂದರೆ ದೂರುದಾರೆಯೇ ಹನಿಟ್ರ್ಯಾಪ್ ಮಾಡುವ ಕೆಲವವನ್ನು ಮಾಡುತ್ತಿದ್ದರು. ಅಷ್ಟೇ ಅಲ್ಲದೆ ಆ ವಿಡಿಯೋಗಳನ್ನು ನನಗೆ ತಂದು ತೋರಿಸುತ್ತಿದ್ದವು. ಆದರೆ ನಾನು ಆಕೆಯ ಕಡೆಯಿಂದ ಯಾವುದೇ ಹನಿಟ್ರ್ಯಾಪ್ ವಿಡಿಯೋಗಳನ್ನು ಮಾಡಿಸಿಲ್ಲ," ಎಂದು ಹೇಳಿಕೆ ನೀಡಿದ್ದಾರೆ.












Click it and Unblock the Notifications