ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅತ್ಯಾಚಾರ ಪ್ರಕರಣ; ಸಂತ್ರಸ್ತೆ ವಿವಾಹವಾದವನ ವಿರುದ್ಧದ ಕೇಸ್ ಕ್ಲೋಸ್‌

By ಎಸ್‌ಎಸ್‌ಎಸ್
|
Google Oneindia Kannada News

ಬೆಂಗಳೂರು, ಜನವರಿ 17; ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತೆಯನ್ನೇ ವಿವಾಹವಾಗಿದ್ದಾತನ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಆ ಮೂಲಕ ಅತ್ಯಾಚಾರ ಕೇಸ್ ಎದುರಿಸಿದ್ದ ಆರೋಪಿಗೆ ಮುಕ್ತಿ ಕೊಟ್ಟಿದೆ.

ಆರೋಪಿ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ. ಅರ್ಜಿದಾರರ ವಾದವನ್ನು ಪರಿಗಣಿಸಿದ ಹೈಕೋರ್ಟ್ ಆರೋಪಿ ವಿರುದ್ಧದ ಅತ್ಯಾಚಾರ, ಹಣ ವಸೂಲಿ ಮತ್ತು ಜೀವ ಬೆದರಿಕೆ ಪ್ರಕರಣವನ್ನು ರದ್ದುಪಡಿಸಿತು.

Jalebi Baba: 100ಕ್ಕೂ ಹೆಚ್ಚು ಮಹಿಳೆಯರ ಅತ್ಯಾಚಾರ ಎಸಗಿ, ವಿಡಿಯೋ ಮಾಡಿದ್ದ ಜಿಲೇಬಿ ಬಾಬಾನಿಗೆ 14 ವರ್ಷ ಜೈಲು Jalebi Baba: 100ಕ್ಕೂ ಹೆಚ್ಚು ಮಹಿಳೆಯರ ಅತ್ಯಾಚಾರ ಎಸಗಿ, ವಿಡಿಯೋ ಮಾಡಿದ್ದ ಜಿಲೇಬಿ ಬಾಬಾನಿಗೆ 14 ವರ್ಷ ಜೈಲು

ಹಾಗೆಯೇ, ಸಂತ್ರಸ್ತೆಯನ್ನು ಚೆನ್ನಾಗಿ ನೋಡಿಕೊಳ್ಳಬೇಕು. ಯಾವುದೇ ರೀತಿ ತೊಂದರೆ ನೀಡಬಾರದು ಎಂದು ಆರೋಪಿಗೆ ಸೂಚಿಸಿತು. ಪ್ರಕರಣದಲ್ಲಿ ಸಂತ್ರಸ್ತೆಯನ್ನು ವಿವಾಹವಾದ ನಂತರವೂ ತನ್ನನ್ನು ಬಂಧಿಸಿ ಜೈಲಿಗೆ ಕಳುಹಿಸಿದ ಪೊಲೀಸರ ಕ್ರಮ ಆಕ್ಷೇಪಿಸಿ ಆರೋಪಿ ಹೈಕೋರ್ಟ್ ಮೆಟ್ಟಿಲೇರಿದ್ದನು.

ಅತ್ಯಾಚಾರ ಮಾಡಿ ಅಂತಾ ಆ ಸೈನಿಕರನ್ನು ಕಳಿಸಿದ್ದೇ ಹೆಂಡತಿಯರು! ಅತ್ಯಾಚಾರ ಮಾಡಿ ಅಂತಾ ಆ ಸೈನಿಕರನ್ನು ಕಳಿಸಿದ್ದೇ ಹೆಂಡತಿಯರು!

Rape case: Accused married victim, case closed by HC

ಆರೋಪಿ ಮತ್ತು ಸಂತ್ರಸ್ತೆ ಸಲ್ಲಿಸಿದ ಜಂಟಿ ಪ್ರಮಾಣ ಪತ್ರ ಪರಿಗಣಿಸಿದ ಹೈಕೋರ್ಟ್, ಅರ್ಜಿ ಪುರಸ್ಕರಿಸಿ ಆರೋಪಿ ವಿರುದ್ಧದ ಪ್ರಕರಣ ರದ್ದುಪಡಿಸಿದೆ.

ಬೆಂಗಳೂರಿನಲ್ಲಿ ಕೇರಳದ ಯುವತಿ ಮೇಲೆ ಅತ್ಯಾಚಾರ, ಆರೋಪಿಗಳ ಬಂಧನಬೆಂಗಳೂರಿನಲ್ಲಿ ಕೇರಳದ ಯುವತಿ ಮೇಲೆ ಅತ್ಯಾಚಾರ, ಆರೋಪಿಗಳ ಬಂಧನ

ಪ್ರಕರಣ ರದ್ದತಿಗೆ ಕೋರಿದ್ದ; ವಿಚಾರಣೆಗೆ ಸಂತ್ರಸ್ತೆ ಹಾಜರಾಗಿ ದೂರು ಹಿಂಪಡೆಯುವುದಾಗಿ ತಿಳಿಸಿದರೆ, ಸಂತ್ರಸ್ತೆಯನ್ನು ವಿವಾಹವಾಗಿದ್ದೇನೆ. ಜೀವನಪೂರ್ತಿ ಚೆನ್ನಾಗಿ ನೋಡಿಕೊಳ್ಳುತ್ತೇನೆ ಎಂದು ವಾಗ್ದಾನ ನೀಡಿ ಆರೋಪಿ ಪ್ರಮಾಣ ಪತ್ರ ಸಲ್ಲಿಸಿದ್ದ.

ನಗರದ ನಿತ್ಯ 2022ರ ಅಕ್ಟೋಬರ್‌ನಲ್ಲಿ ಪೊಲೀಸರಿಗೆ ದೂರಿ ನೀಡಿ, ರವಿ ಎಂಬಾತ (ಸಂತ್ರಸ್ತೆ ಮತ್ತು ಆರೋಪಿ ಹೆಸರು ಬದಲಿಸಲಾಗಿದೆ) ತನ್ನ ಹುಟ್ಟುಹಬ್ಬದ ಆಚರಣೆ ನಿಮಿತ್ತ ಮನೆಗೆ ಆಹ್ವಾನಿಸಿದ್ದರು. ಕುಡಿದು ಬಂದಿದ್ದ ರವಿ, ನನ್ನ ಮೇಲೆ ಅತ್ಯಾಚಾರ ನಡೆಸಿದರು ಎಂದು ಆರೋಪಿಸಿದ್ದರು.

ಪೊಲೀಸರು ಆರೋಪಿ ವಿರುದ್ಧ ಅತ್ಯಾಚಾರ, ಜೀವ ಬೆದರಿಕೆ ಮತ್ತು ಹಣ ವಸೂಲಿ ಸೇರಿದಂತೆ ಇನ್ನಿತರ ಆರೋಪಗಳಡಿ ಎಫ್‌ಐಆರ್ ದಾಖಲಿಸಿದ್ದರು. ಅದನ್ನು ರದ್ದುಪಡಿಸಲು ಕೋರಿ ಆರೋಪಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಪರಸ್ಪರ ಒಪ್ಪಿ ಮದುವೆ: ಅರ್ಜಿದಾರನ ಪರ ವಕೀಲರು ವಾದ ಮಂಡಿಸಿ, ಸಂತ್ರಸ್ತೆ ಮತ್ತು ಅರ್ಜಿದಾರ ಪರಸ್ಪರ ಪ್ರೀತಿಸುತ್ತಿದ್ದರು. ಭಿನ್ನಾಭಿಪ್ರಾಯದಿಂದ ಸಂತ್ರಸ್ತೆ ದೂರು ದಾಖಲಿಸಿದ್ದಾರೆ. ಆಕೆಗೆ 32 ವರ್ಷವಾಗಿದ್ದು, ದೂರು ದಾಖಲಿಸಿದ ನಂತರ ಪೊಲೀಸರ ಮುಂದೆ ಹಾಜರಾಗಿ ದೂರು ಹಿಂಪಡೆಯಲಾಗುವುದು ಎಂದು ತಿಳಿಸಿದ್ದರು. ಅದಕ್ಕೆ ಪೊಲೀಸರು ಒಪ್ಪಿರಲಿಲ್ಲ ಎಂದು ತಿಳಿಸಿರು.

ತದನಂತರ ಸಂತ್ರಸ್ತೆ ಮತ್ತು ಆರೋಪಿ ಮದುವೆಯಾಗಿದ್ದು, ಪೊಲೀಸ್ ಠಾಣೆಗೆ ತೆರಳಿ ದೂರು ಹಿಂಪಡೆಯುವಾಗಿ ತಿಳಿಸಿದ್ದರು. ಹೀಗಿದ್ದರೂ ಪೊಲೀಸರು ಮಾತ್ರ ದೂರುದಾರಳ ಹೇಳಿಕೆ ದಾಖಲಿಸದೆ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.

ಸದ್ಯ ಇಬ್ಬರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಮದುವೆಯಾಗಿ ನೆಮ್ಮದಿಯಿಂದ ಸಂಸಾರ ನಡೆಸುತ್ತಿದ್ದಾರೆ. ಪ್ರಕರಣ ಹಿಂಪಡೆಯಲು ಇಬ್ಬರೂ ಜಂಟಿ ಪ್ರಮಾಣ ಪತ್ರ ಸಲ್ಲಿಸಿದ್ದು, ಅದನ್ನು ಪುರಸ್ಕರಿಸಿದ ಪ್ರಕರಣ ರದ್ದುಪಡಿಸಬೇಕು ಎಂದು ಕೋರಿದ್ದರು.

English summary
Rape case: Accused married victim and case against him closed by Hihgh court of Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X