ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೇಪ್ ಕೇಸ್: ಸಂತ್ರಸ್ತೆಯ ವಯಸ್ಸು ನಿರ್ಧಾರಕ್ಕೆ ಶಾಲೆ ದಾಖಲೆಯೇ ಸೂಕ್ತ: HC

By ಎಸ್ ಎಸ್ ಎಸ್
|
Google Oneindia Kannada News

ಬೆಂಗಳೂರು, ನ.9: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣಗಳಲ್ಲಿ ಇತ್ತೀಚಿನ ದಿನಗಳಲ್ಲಿ ಸಂತ್ರಸ್ತೆಯ ವಯಸ್ಸು ನಿರ್ಧರಿಸುವುದೇ ದೊಡ್ಡ ಬಿಕ್ಕಟ್ಟಿಗೆ ಕಾರಣವಾಗಿದೆ. ಜೊತೆಗೆ ಇದು ನ್ಯಾಯಾಲಯಗಳಿಗೂ ತಲೆನೋವಾಗಿ ಪರಿಣಮಿಸಿದೆ.

ಇದಕ್ಕೆ ಉತ್ತರ ಎಂಬಂತೆ ಇತ್ತೀಚೆಗೆ ಹೈಕೋರ್ಟ್, ಸಂತ್ರಸ್ತೆಯಾಗಿರುವ ಅಪ್ರಾಪ್ತೆಯ ವಯಸ್ಸು ನಿರ್ಧರಿಸುವ ವಿಚಾರದಲ್ಲಿ ವೈದ್ಯರು ನೀಡಿದ ವೈದ್ಯಕೀಯ ಅಭಿಪ್ರಾಯಕ್ಕಿಂತ ಶಾಲಾ ಪ್ರಾಧಿಕಾರಗಳು ವಿತರಿಸಿದ ಪ್ರಮಾಣ ಪತ್ರ ಹೆಚ್ಚು ಪ್ರಾಮುಖ್ಯತೆ ಹೊಂದಿರುತ್ತದೆ ಎಂದು ಅಭಿಪ್ರಾಯಪಟ್ಟಿದೆ. ಆ ಮೂಲಕ ವಿವಾದಕ್ಕೆ ತೆರೆ ಎಳೆದಿದೆ. ಜೊತೆಗೆ ಶಾಲಾ ದಾಖಲೆಯೇ ಸರಿಯಾದ ದಾಖಲೆ ಎಂದು ಸಾರಿದೆ.

Breaking: ಕಾಂಗ್ರೆಸ್ ಟ್ವಿಟ್ಪರ್ ನಿರ್ಬಂಧದ ಆದೇಶಕ್ಕೆ ಹೈಕೋರ್ಟ್ ತಡೆ Breaking: ಕಾಂಗ್ರೆಸ್ ಟ್ವಿಟ್ಪರ್ ನಿರ್ಬಂಧದ ಆದೇಶಕ್ಕೆ ಹೈಕೋರ್ಟ್ ತಡೆ

15 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಕಲಬುರಗಿ ಕೇರೂರ್ ತಾಲೂಕಿನ ಆರೋಪಿ ಶರಣುವನ್ನು ಖುಲಾಸೆಗೊಳಿಸಿದ ವಿಚಾರಣಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಸರ್ಕಾರ ಸಲ್ಲಿಸಿರುವ ಕ್ರಿಮಿನಲ್ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಾ.ಎಚ್.ಬಿ. ಪ್ರಭಾಕರ ಶಾಸ್ತ್ರಿ ನೇತೃತ್ವದ ನ್ಯಾಯಪೀಠ ಈ ಆದೇಶ ನೀಡಿದೆ.

Rape Case: For considering victim age, school documents are at high priority: Ruled HC

ಆರೋಪಿಯ ಪರ ವಕೀಲರು, ಆರೋಪಿಯು ಸಂತ್ರಸ್ತೆಯ ಸಮ್ಮತಿಯೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿದ್ದಾನೆ. ಘಟನೆ ನಡೆದಾಗ ಸಂತ್ರಸೆ ವಯಸ್ಕಳಾಗಿದ್ದಳು. ಇನ್ನೂ ತನ್ನ ವಯಸ್ಸು 19 ವರ್ಷ ಎಂದು ಸಂತ್ರಸ್ತೆ ಹೇಳಿಕೆ ನೀಡಿರುವುದಾಗಿ ಸಂತ್ರಸ್ತೆಯನ್ನು ವೈದ್ಯಕೀಯ ತಪಾಸಣೆ ನಡೆಸಿರುವ ವೈದ್ಯರು ದೃಢಪಡಿಸಿದ್ದಾರೆ ಎಂದು ತಿಳಿಸಿದ್ದರು.

ಸರ್ಕಾರಿ ಅಭಿಯೋಜಕರು, ಘಟನೆ ನಡೆದಾಗ ಸಂತ್ರಸ್ತೆಯು ಅಪ್ರಾಪ್ತಳಾಗಿದ್ದಳು. ಸಂತ್ರಸ್ತೆ ಸಮ್ಮತಿ ನೀಡಿದ್ದರೆ, ಅದು ಕಾನೂನಿನಡಿ ಮಾನ್ಯವಾಗುವುದಿಲ್ಲ ಎಂದು ತಿಳಿಸಿದ್ದರು.

ವಯಸ್ಸಿನ ತಗಾದೆ: ವಾದ ಪ್ರತಿವಾದ ಆಲಿಸಿದ ಬಳಿಕ ನ್ಯಾಯಪೀಠ "ಘಟನೆ ನಡೆದಾಗ ಸಂತ್ರಸ್ತೆ ವಯಸ್ಕಳಾಗಿದ್ದಳು ಎಂಬ ಆರೋಪಿಯ ವಾದಕ್ಕೆ ಪ್ರತಿಕ್ರಿಯಿಸಿರುವ ನ್ಯಾಯಪೀಠ, ಮೆಟ್ರಿಕ್ಯೂಲೇಷನ್ ಅಥವಾ ಅದಕ್ಕೆ ಸಮಾನವಾದ ಪ್ರಮಾಣ ಪತ್ರ ಅಥವಾ ಶಾಲೆ, ನಗರ ಪಾಲಿಕೆ, ಪೌರಾಡಳಿತ ಪ್ರಾಧಿಕಾರ ಅಥವಾ ಪಂಚಾಯಿತಿ ನೀಡುವ ಜನನ ಪ್ರಮಾಣ ಪತ್ರ ಲಭ್ಯವಿಲ್ಲದ ಸಂದರ್ಭದಲ್ಲಿ ಕಾನೂನಿನ ಸಂಘರ್ಷಕ್ಕೆ ಒಳಗಾಗಿರುವ ಅಪ್ರಾಪ್ತರ ಅಥವಾ ಮಕ್ಕಳ ವಯಸ್ಸು ನಿರ್ಧರಿಸಲು ವೈದ್ಯಕೀಯ ಅನಿಸಿಕೆ ಕೋರಲಾಗುತ್ತದೆ" ಎಂದು ತಿಳಿಸಿದೆ.

ಆಸ್ಪತ್ರೆಯಲ್ಲಿ ವೈದ್ಯಕೀಯ ದಾಖಲೆಗಳಲ್ಲಿ ಆಕೆ ನಮೂದಿಸಿರುವ ಹೆಸರು ಹಾಗೂ ವಯಸ್ಸನ್ನು ಸತ್ಯ ಎಂಬುದಾಗಿ ಒಪ್ಪಬೇಕಿದೆ. ವಯಸ್ಸು ನಿರ್ಧರಿಸಲು ಅದೊಂದೇ ಆಧಾರವಾಗಿದೆ ಎಂದು ಆರೋಪಿ ಹೇಳುತ್ತಾನೆ. ಆದರೆ, ಸಂತ್ರಸ್ತೆ 8ನೇ ತರಗತಿಯವರೆಗೆ ಓದಿದ್ದಾರೆ. ತನ್ನ ಸಾಕ್ಷ್ಯದಲ್ಲಿ ಜನ್ಮ ದಿನಾಂಕದ ಬಗ್ಗೆ ಮಾಹಿತಿ ನೀಡದಿದ್ದರೂ ವಿಚಾರಣಾ ನ್ಯಾಯಾಲಯದಲ್ಲಿ ತಾನು ಅಪ್ರಾಪ್ತೆಯೆಂಬುದಾಗಿ ಸ್ವತಃ ತಿಳಿಸಿದ್ದಾರೆ. ಘಟನೆ ನಡೆದಾಗ ತಾನು ವಯಸ್ಸಳಾಗಿದ್ದಳು ಎಂಬ ಸಂಗತಿಯನ್ನು ಸ್ಪಷ್ಟವಾಗಿ ನಿರಾಕರಿಸಿದ್ದಾಳೆ ಎಂದು ಹೇಳಿದೆ.

ಅಲ್ಲದೆ, ಸಂತ್ರಸ್ತೆ ಓದಿದ ಶಾಲೆಯ ಮುಖ್ಯೋಪಾಧ್ಯಾಯರು ನೀಡಿರುವ ಪ್ರಮಾಣ ಪತ್ರದಲ್ಲಿ ಸಂತ್ರಸ್ತೆಯೇ ತನ್ನ ಜನನ ದಿನಾಂಕದ ಬಗ್ಗೆ ಸರಿಯಾದ ಮಾಹಿತಿ ನೀಡಿಲ್ಲ ಎಂಬುದಾಗಿ ಸಂಶಯ ಪಡಲಾಗದು. ವೈದ್ಯಕೀಯ ದಾಖಲೆಗಳಿಂತ ಶಾಲಾ ಪ್ರಾಧಿಕಾರವು ನೀಡಿರುವ ಪ್ರಮಾಣಪತ್ರವು ಹೆಚ್ಚಿನ ಆದ್ಯತೆ ಹೊಂದಿರುತ್ತದೆ ಎಂದು ತಿಳಿಸಿದ ನ್ಯಾಯಪೀಠ, ವಿಚಾರಣಾ ನ್ಯಾಯಾಲಯದ ಆದೇಶ ರದ್ದುಪಡಿಸಿ, ಆರೋಪಿಗೆ ಏಳು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 20 ಸಾವಿರ ರು. ದಂಡ ವಿಧಿಸಿದೆ.

ಪ್ರಕರಣದ ಹಿನ್ನೆಲೆ: ವಿವಾಹಿತ ವ್ಯಕ್ತಿಯೊಬ್ಬ ತನ್ನದೇ ಗ್ರಾಮದ ಅಪ್ರಾಪ್ತೆಯೊಂದಿಗೆ ಹಲವು ಬಾರಿ ಅತ್ಯಾಚಾರ ನಡೆಸಿದ್ದ ಹಾಗೂ ಘಟನೆ ಬಹಿರಂಗ ಪಡಿಸದಂತೆ ಬೆದರಿಕೆ ಹಾಕಿದ್ದ. ಸಂತ್ರಸ್ತೆ ಗರ್ಭಿಣಿಯಾದಾಗ ಘಟನೆ ಬಹಿರಂಗವಾಗಿತ್ತು. ಇದರಿಂದ ಸಂತ್ರಸ್ತೆ ಪೋಷಕರು ಅತ್ಯಾಚಾರ, ಬೆದರಿಕೆ ಮತ್ತು ಮನೆ ಅತಿಕ್ರಮ ಪ್ರವೇಶ ಆರೋಪ ಸಂಬಂಧ ದೂರು ದಾಖಲಿಸಿದ್ದರು. ಸ್ಥಳೀಯ ಪೋಕ್ಸೋ ನ್ಯಾಯಾಲಯವು ಆರೋಪಿಯನ್ನು ಖುಲಾಸೆಗೊಳಿಸಿತ್ತು. ಈ ಆದೇಶ ರದ್ದು ಕೋರಿ ಸರ್ಕಾರ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.

English summary
Rape Case: For considering victim age, school documents are at high priority: Ruled Karnataka High Court.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X