10 ವರ್ಷದ ಬುದ್ಧಿ ಮಾಂದ್ಯ ವಿಧ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿದ ಪ್ರಿನ್ಸಿಪಲ್; ಗಲ್ಲಿಗೆ ಹಾಕಿ ಎಂದು ಯತ್ನಾಳ್ ಆಗ್ರಹ
ಬೆಂಗಳೂರು, ಆಗಸ್ಟ್ 05: ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದೆ, ಪಕ್ಷಾತೀತವಾಗಿ ನಾವೆಲ್ಲರೂ ಈ ಪ್ರಕರಣಗಳ ಆರೋಪಿಗಳನ್ನು ಶಿಕ್ಷೆಗೆ ಗುರಿಪಡಿಸುವವರೆಗೂ ಹೋರಾಡಬೇಕಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಬೆಂಗಳೂರಿನ ಖಾಸಗಿ ಶಾಲೆಯೊಂದರ ಪ್ರಾಂಶುಪಾಲ 2ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣ ವರ್ತೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಕೃತ್ಯ ಎಸಗಿದ 65 ವರ್ಷದ ಪ್ರಾಂಶುಪಾಲನನ್ನು ವರ್ತೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಅದೋಗತಿಗೆ ತಲುಪಿದೆ. ವರ್ತೂರು ಬೆ ತಲ್ ಬ್ಯಾಪ್ ಟಿಸ್ಟ್ ಎಂಬ ಬುದ್ದಿ ಮಾಂದ್ಯ ಮಕ್ಕಳ ಶಾಲೆ ಯಲ್ಲಿ ದಿನಾಂಕ 3/8/23 ರಂದು 10ವರ್ಷದ ಪ್ರಣವಿ ಎಂಬ ಬಾಲಕಿಯ ಮೇಲೆ ಅದೇ ಶಾಲೆಯ ಪ್ರಾಂಶುಪಾಲರು ಪಾದ್ರಿ ಲ್ಯಾಂಬರ್ಟ್ ಪುಷ್ಪರಾಜ್ ಎಂಬುವವನು ಅತ್ಯಾಚಾರ ಮಾಡಿದ್ದಾನೆ.
ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದೆ, ಪಕ್ಷಾತೀತವಾಗಿ ನಾವೆಲ್ಲರೂ ಈ ಪ್ರಕರಣಗಳ ಆರೋಪಿಗಳನ್ನು ಶಿಕ್ಷೆಗೆ ಗುರಿಪಡಿಸುವವರೆಗೂ ಹೋರಾಡಬೇಕಿದೆ.
— Basanagouda R Patil (Yatnal) (@BasanagoudaBJP) August 4, 2023
ಅತ್ಯಾಚಾರ ಪ್ರಕರಣಗಳ ತ್ವರಿತ ವಿಚಾರಣೆಗೆ ತ್ವರಿತ ನ್ಯಾಯಾಲಯಗಳ ಸ್ಥಾಪನೆಯಾಗಬೇಕು. ಅತ್ಯಾಚಾರಿಗಳಿಗೆ ನೇಣು ಶಿಕ್ಷೆಯಾಗಬೇಕು. 3
ಆರೋಪಿಯ ಹೆಂಡತಿ ಇದೇ ಶಾಲೆಯಲ್ಲಿ ಕೆಲಮಾಡಿಕೊಂಡಿದ್ದು ಆರೋಪಿ ಹುಡುಗಿಯನ್ನ ಮನೆಗೆ ಕರೆದು ಕೊಂಡು ಹೋಗಿ ಅತ್ಯಾಚಾರ ಮಾಡಿ ಯಾರಿಗಾದರೂ ಹೇಳಿದರೆ ಅತ್ಯಾಚಾರ ಮಾಡುವುದಾಗಿ ಬೆದರಿಸಿದ್ದಾರೆ. ಮಗು ಮನೆಗೆ ಬಂದಾಗ ಹೊಟ್ಟೆ ನೋವು ಎಂದು ಹೇಳಿದ್ದು ರಕ್ತ ಸ್ರಾವ ಆಗಿದ್ದನ್ನು ಕಂಡ ತಾಯಿ ವಿಚಾರಿಸಿದಾಗ ಮಗು ವಿಷಯ ತಿಳಿಸಿದೆ ಎಂದಿದ್ದಾರೆ.
ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದೆ, ಪಕ್ಷಾತೀತವಾಗಿ ನಾವೆಲ್ಲರೂ ಈ ಪ್ರಕರಣಗಳ ಆರೋಪಿಗಳನ್ನು ಶಿಕ್ಷೆಗೆ ಗುರಿಪಡಿಸುವವರೆಗೂ ಹೋರಾಡಬೇಕಿದೆ. ಅತ್ಯಾಚಾರ ಪ್ರಕರಣಗಳ ತ್ವರಿತ ವಿಚಾರಣೆಗೆ ತ್ವರಿತ ನ್ಯಾಯಾಲಯಗಳ ಸ್ಥಾಪನೆಯಾಗಬೇಕು. ಅತ್ಯಾಚಾರಿಗಳಿಗೆ ನೇಣು ಶಿಕ್ಷೆಯಾಗಬೇಕು ಎಂದು ಯತ್ನಾಳ್ ಆರೋಪಿಸಿದ್ದಾರೆ.
ಇನ್ನೂ ಶಾಲೆ ಮುಗಿಸಿಕೊಂಡು ಮನೆಗೆ ಬಂದಿದ್ದ ಬಾಲಕಿ ಮಂಕಾಗಿದ್ದನ್ನು ಕಂಡು ಬಾಲಕಿಯನ್ನ ತಾಯಿ ಪ್ರಶ್ನಿಸಿದ್ದಾರೆ. ಈ ವೇಳೆ ನಡೆದ ಘಟನೆಯ ಕುರಿತು ಬಾಲಕಿ ತಾಯಿಯೊಂದಿಗೆ ಹಂಚಿಕೊಂಡಿದ್ದಳು. ಇದರಿಂದ ಆಘಾತಗೊಂಡ ಪೋಷಕರು ವರ್ತೂರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಕುರಿತು ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಪ್ರಾಂಶುಪಾಲನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆ ಹಾಗೂ ಆರೋಪಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿಆರೋಪಿ ಕೃತ್ಯ ಎಸಗಿರುವುದು ಗೊತ್ತಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.












Click it and Unblock the Notifications