Get Updates
Get notified of breaking news, exclusive insights, and must-see stories!

Ratan Tata death: ಕೈಗಾರಿಕೋದ್ಯಮಿ ರತನ್ ಟಾಟಾ ನಿಧನ: ಕರ್ನಾಟಕ ಸಿಎಂ, ಮಾಜಿ ಸಿಎಂ & ಗಣ್ಯರ ಸಂತಾಪ

ಬೆಂಗಳೂರು, ಅಕ್ಟೋಬರ್ 10: ದೇಶದ ಖ್ಯಾತ ಕೈಗಾರಿಕೋದ್ಯಮಿ ಟಾಟಾ ಗ್ರೂಪ್‌ನ ರತನ್ ಟಾಟಾ ಅವರು ಬುಧವಾ ರಾತ್ರಿ ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ನಿಧನರಾದರು. ಅವರ ಈ ಅಗಲಿಕೆಯಿಂದ ಕೈಗಾರಿಕಾ ವಲಯಕ್ಕೆ, ಇಡೀ ದೇಶಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ರಾಜಕೀಯ ಗಣ್ಯರು, ಪ್ರಧಾನಿ, ಉದ್ಯಮಿಗಳು, ನಟ ನಟಿಯರು ಕಂಬಿನಿ ಮಿಡಿದಿದ್ದಾರೆ. ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ..

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ''ದೇಶದ ಹೆಮ್ಮೆಯ ಉದ್ಯಮಿ, ಟಾಟಾ ಸಮೂಹದ ಮುಖ್ಯಸ್ಥರಾದ ರತನ್ ಟಾಟಾ ಅವರ ನಿಧನದ ಸುದ್ದಿ ದುಃಖವುಂಟು ಮಾಡಿದೆ. ಟಾಟಾ ಸಂಸ್ಥೆಯ ಮೂಲಕ ಲಕ್ಷಾಂತರ ಜನರಿಗೆ ಉದ್ಯೋಗ ನೀಡಿದ್ದು ಮಾತ್ರವಲ್ಲ, ಭಾರತದ ಉದ್ಯಮ ವಲಯವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೊಸ ಎತ್ತರಕ್ಕೆ ಕೊಂಡೊಯ್ದ ದೂರದೃಷ್ಟಿಯ ವ್ಯಕ್ತಿಯಾಗಿದ್ದರು. ರತನ್ ಟಾಟಾ ಅವರು ತಮ್ಮ ಬದುಕು ಮತ್ತು ಸಾಧನೆಗಳ ಮೂಲಕ ಅಜರಾಮರವಾಗಿದ್ದಾರೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

Ratan Tata Passed Away CM Siddaramaiah MB Patil BY Vijayendra and Other Express Condolence

ರಾಷ್ಟ್ರ ರಚನೆ ಮೇಲೆ ಟಾಟಾ ಹೆಜ್ಜೆ ಗುರುತು: ಬಿವೈವಿ

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು, ರತನ್ ಟಾಟಾ ಅವರು ನಿಧನ ಸುದ್ದಿ ತಿಳಿದು ಸಂತಾಪ ವ್ಯಕ್ತಪಡಿಸಿದ್ದಾರೆ. ' ಕೆಲವರು ಕಾಲದ ಮರಳಿನ ಮೇಲೆ ಹೆಜ್ಜೆಗುರುತುಗಳನ್ನು ಬಿಡುತ್ತಾರೆ; ರತನ್ ಟಾಟಾ ಅವರು ನಮ್ಮ ರಾಷ್ಟ್ರದ ರಚನೆಯ ಮೇಲೆ ಅವರನ್ನು ಬಿಟ್ಟಿದ್ದಾರೆ ಎಂದು ಅವರ ಸೇವೆ, ಸಾಧನೆಯನ್ನು ಬಣ್ಣಿಸಿದ್ದಾರೆ.

ಕೈಗಾರಿಕಾ ವಲಯದಲ್ಲಿ ದೂರದೃಷ್ಟಿಯ ನಾಯಕ, ಸಹಾನುಭೂತಿಯ ಆತ್ಮ ಮತ್ತು ಅಸಾಧಾರಣ ಮನುಷ್ಯರಾಗಿದ್ದರು. ರತನ್ ಟಾಟಾ ಅವರು ದೊಡ್ಡ ಕನಸುಗಳನ್ನು ಕಾಣಲು ಮತ್ತು ಹಿಂತಿರುಗಿಸಲು ಸಮರ್ಪಿತರಾಗಿದ್ದರು. ವ್ಯಾಪಾರ, ಪರೋಪಕಾರ ಮತ್ತು ನಮ್ರತೆಯಲ್ಲಿ ಅವರ ಪರಂಪರೆ ನಮ್ಮೆಲ್ಲರಿಗೂ ಸ್ಫೂರ್ತಿ ನೀಡುತ್ತಲೇ ಇರುತ್ತದೆ. ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಅವರು ಸಂತಾಪ ತಿಳಿಸಿದ್ದಾರೆ.

ರತನ್ ಟಾಟಾ ನಿಧನದಿಂದ ನಿರ್ವಾತ: ಎಂ.ಬಿ ಪಾಟೀಲ

ದೇಶದಲ್ಲಿ ಕೈಗಾರಿಕಾ ಸಂಸ್ಕೃತಿಯನ್ನು ಉನ್ನತ ಮೌಲ್ಯಗಳೊಂದಿಗೆ ಕಟ್ಟಿದ ಟಾಟಾ ಸಮೂಹದ ಆಧಾರಸ್ತಂಭಗಳಲ್ಲಿ ಒಬ್ಬರಾಗಿದ್ದ ರತನ್ ಟಾಟಾ ಅವರ ನಿಧನದಿಂದ ನಿರ್ವಾತ ಸೃಷ್ಟಿಯಾಗಿದೆ. ಅವರ ಭೌತಿಕ ಅನುಪಸ್ಥಿತಿಯು ಭಾರತಕ್ಕೂ ಕರ್ನಾಟಕಕ್ಕೂ ಬಹುದೊಡ್ಡ ನಷ್ಟ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಶೋಕ ವ್ಯಕ್ತಪಡಿಸಿದ್ದಾರೆ.

ಅಧಿಕೃತವಾಗಿ ಅಮೆರಿಕ ಪ್ರವಾಸದಲ್ಲಿರುವ ಅವರು ಅಲ್ಲಿಂದಲೇ ತಮ್ಮ ಶೋಕ ಸಂದೇಶ ಕಳಿಸಿದ್ದಾರೆ. ಉದ್ಯಮಲೋಕದ ದಿಗ್ಗಜನ‌ ಸಾವಿಗೆ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಜಮ್ಷೆಡ್ಜಿ ಟಾಟಾ ಮತ್ತು ಜೆ ಆರ್ ಡಿ ಟಾಟಾ ತಮ್ಮ ವೈವಿಧ್ಯಮಯ ಉದ್ಯಮಗಳ ಮೂಲಕ ಆಧುನಿಕ ಭಾರತವನ್ನು ಕಟ್ಟಿದರು. ಇವರ ಬಳಿಕ ಎರಡು ದಶಕಗಳ ಕಾಲ‌ ಟಾಟಾ ಸಮೂಹದ ಚುಕ್ಕಾಣಿ ಹಿಡಿದಿದ್ದ ರತನ್ ಟಾಟಾ ಅವರು, ತಮ್ಮ ಸಮೂಹವನ್ನು ಜಾಗತಿಕ ಸ್ತರದಲ್ಲಿ ವಿಸ್ತರಿಸಿದರು ಎಂದು ಅವರು ಕಾರ್ಯ ಸ್ಮರಿಸಿದ್ದಾರೆ.

ಟಾಟಾ ಸಮೂಹವು ಕರ್ನಾಟಕದಲ್ಲಿ ಕೂಡ ಭಾರೀ ಪ್ರಮಾಣದಲ್ಲಿ ಬಂಡವಾಳ ಹೂಡಿದೆ. ಅಪಾರ ಪ್ರಮಾಣದ ಉದ್ಯೋಗಗಳನ್ನು ಸೃಷ್ಟಿಸಿದೆ. ರತನ್ ಟಾಟಾ ಕೂಡ ಉದ್ಯಮಶೀಲತೆಯನ್ನು ಉನ್ನತ ಮಟ್ಟದ ಮೌಲ್ಯಗಳ ಜತೆ ಪ್ರತಿನಿಧಿಸುತ್ತಿದ್ದರು. ಅವರು ಸದಾ ದೇಶ ಮತ್ತು ಸಮಾಜದ ಹಿತವನ್ನು ಕೂಡ ಪರಿಗಣಿಸುತ್ತಿದ್ದರು. ಇದರೊಂದಿಗೆ ಅವರು ಟಾಟಾ ಪರಂಪರೆಯ ವಾರಸುದಾರರಾಗಿದ್ದರು ಎಂದು ಅವರು ಗುಣಗಾನ ಮಾಡಿದ್ದಾರೆ.

ಉದ್ಯಮದ ನಿಜವಾದ ಟೈಟಾನ್: ಬೊಮ್ಮಾಯಿ ಸಂತಾಪ

ಭಾರತೀಯ ಉದ್ಯಮದ ನಿಜವಾದ ಟೈಟಾನ್ ಶ್ರೀ ರತನ್ ಟಾಟಾ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರ ದೂರದೃಷ್ಟಿಯ ನಾಯಕತ್ವ ಮತ್ತು ನಮ್ಮ ಆರ್ಥಿಕತೆ ಮತ್ತು ವ್ಯಾಪಾರಕ್ಕೆ ಅಪಾರ ಕೊಡುಗೆಗಳನ್ನು ಎಂದಿಗೂ ಮರೆಯಲಾಗುವುದಿಲ್ಲ ಎಂದು ಮಾಜಿ ಸಿಎಂ ಮತ್ತು ಬಿಜೆಪಿ ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಅವರು ಸಂತಾಪ ಸೂಚಿಸಿದ್ದಾರೆ.

ಅವರ ಕುಟುಂಬ, ಸ್ನೇಹಿತರು ಮತ್ತು ಅವರ ಜೀವನವನ್ನು ಸ್ಪರ್ಶಿಸಿದ ಎಲ್ಲರಿಗೂ ನನ್ನ ಹೃತ್ಪೂರ್ವಕ ಸಂತಾಪಗಳು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದಿದ್ದಾರೆ.

ರತನ್ ಟಾಟಾ ಇಡೀ ದೇಶಕ್ಕೆ ಸ್ಫೂರ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ದೇಶದ ಖ್ಯಾತ ಉದ್ಯಮಿ ರತನ್ ಟಾಟಾ ಅವರು ತಮ್ಮ ದೂರದೃಷ್ಟಿಯ ಮೂಲಕ ಉದ್ಯಮ ಜಗತ್ತನ್ನು ಆಳಿದವರು. ಇಡೀ ದೇಶಕ್ಕೆ ಸ್ಫೂರ್ತಿಯಾಗಿದ್ದರು. ದೇಶದ ಇತಿಹಾಸದಲ್ಲಿ ಶಾಶ್ವತವಾಗಿ ತಮ್ಮ ಹೆಸರು ಉಳಿಯುವಂತೆ ಮಾಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಭಾರತದ ಅಸ್ಮಿತೆ ಬೆಳೆಸಲು ಟಾಟಾ ಅವರ ಪಾತ್ರ ಅತ್ಯಂತ ದೊಡ್ಡದು. ಯುವ ಉದ್ಯಮಿಗಳಿಗೆ ಅವರು ದೊಡ್ಡ ಆದರ್ಶ. ಅವರ ನಿಧನದಿಂದ ದೇಶಕ್ಕೆ ಅಪಾರ ನಷ್ಟವಾಗಿದೆ. ಕೇವಲ ಉದ್ಯಮಿಯಾಗಿ ಮಾತ್ರವಲ್ಲ, ಅವರ ಟ್ರಸ್ಟ್ ಗಳ ಮೂಲಕ ಲಕ್ಷಾಂತರ ಜನರ ಬಾಳಿಗೆ ಬೆಳಕಾಗಿದ್ದಾರೆ. ಅವರು ತಮ್ಮ ಸರಳತೆ ಹಾಗೂ ಪರೋಪಕಾರಕ್ಕಾಗಿ ಹಲವರಿಗೆ ಸ್ಪೂರ್ತಿಯಾಗಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಮರಿಸಿದ್ದಾರೆ.

ಟಾಟಾ ದೂರದೃಷ್ಟಿ, ಸಾಮಾಜಿಕ ಕಳಕಳಿ ಜೀವಂತ: ಎಚ್‌ಡಿಕೆ

ಉದ್ಯಮಿ ರತನ್ ಟಾಟಾ ಅವರ ನಿಧನದ ಸುದ್ದಿ ಕೇಳಿ ನನಗೆ ಅತೀವ ದುಃಖವಾಗಿದೆ. ಲೋಕೋಪಕಾರಿ ಮತ್ತು ಕೈಗಾರಿಕೋದ್ಯಮಿಯಾಗಿ ಅವರ ಪರಂಪರೆಯು ಅಸಂಖ್ಯಾತ ಜೀವನ ಮತ್ತು ಸಮುದಾಯಗಳ ಮೇಲೆ ಆಳವಾಗಿ ಪ್ರಭಾವ ಉಂಟು ಮಾಡಿದೆ. ಟಾಟಾ ಅವರ ದೂರದೃಷ್ಟಿ, ಸಹಾನುಭೂತಿ ಮತ್ತು ಸಾಮಾಜಿಕ ಕಾರಣಗಳಿಗಾಗಿ ಅಚಲವಾದ ಸಮರ್ಪಣೆ ಯಾವಾಗಲೂ ನೆನಪಿನಲ್ಲಿ ಉಳಿಯುತ್ತದೆ. ಈ ಸವಾಲಿನ ಸಮಯದಲ್ಲಿ ನಮ್ಮ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಅವರ ಕುಟುಂಬದೊಂದಿಗೆ ಇವೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ..

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+