Ration Card: ರಾಜ್ಯದಲ್ಲಿ ಹೊಸ ಪಡಿತರ ಚೀಟಿ ವಿತರಣೆ ಕುರಿತು ಆಹಾರ ಸಚಿವ ಮಹತ್ವದ ಅಪ್ಡೇಟ್‌

Ration Card: ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಆಗಾಗ ಮಹತ್ವದ ಅಪ್ಡೇಟ್‌ಗಳನ್ನು ನೀಡುತ್ತಲಿರುತ್ತದೆ. ಇದೀಗ ಹೊಸ ರೇಷನ್ ಕಾರ್ಡ್‌ ವಿತರಣೆ ಕುರಿತು ಆಹಾರ ಸಚಿವ ರಿಜ್ವಾನ್ ಅರ್ಷದ್ ಅವರು ಪ್ರಮುಖ ಮಾಹಿತಿಯೊಂದನ್ನ ನೀಡಿದ್ದಾರೆ. ಸಂಪೂರ್ಣ ವಿವರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ರಾಜ್ಯದ ಲಕ್ಷಾಂತರ ಕುಟುಂಬಗಳು ಕಾತರದಿಂದ ಕಾಯುತ್ತಿದ್ದ ಹೊಸ ಪಡಿತರ ಚೀಟಿ ವಿತರಣೆ ಪ್ರಕ್ರಿಯೆಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ರಿಜ್ವಾನ್ ಅರ್ಷದ್ ತಿಳಿಸಿದ್ದಾರೆ. ರಾಜ್ಯದಲ್ಲಿ ಅರ್ಹ ಫಲಾನುಭವಿಗಳಿಗೆ ಆದ್ಯತೆಯ ಮೇರೆಗೆ ಹೊಸ ಬಿಪಿಎಲ್ ಕಾರ್ಡ್‌ಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ ಅಂತಲೂ ಅವರು ಸ್ಪಷ್ಟಪಡಿಸಿದ್ದಾರೆ.

Ration Card 10 Lakh New BPL Cards to Be Issued in 6 Months Says Food Minister Rizwan Arshad

ಹೊಸ ಪಡಿತರ ಚೀಟಿ ವಿತರಣೆ ಕುರಿತು ಅಪ್ಡೇಟ್

ಮಾಧ್ಯಮದವರೊಂದಿಗೆ ಮಾತನಾಡಿದ ಆಹಾರ ಸಚಿವ ರಿಜ್ವಾನ್ ಅರ್ಷದ್ ಅವರು, ಕರ್ನಾಟಕದಲ್ಲಿ ಮುಂದಿನ 6 ತಿಂಗಳಲ್ಲಿ 10,00,000 ಹೊಸ ಪಡಿತರ ಚೀಟಿ ವಿತರಣೆ ಮಾಡುವ ಗುರಿ ಹೊಂದಲಾಗಿದೆ. ಪಡಿತರದ ವ್ಯಾಪ್ತಿಯಿಂದ ಬಹಳ ಕುಟುಂಬಗಳು ಹೊರಗುಳಿದಿವೆ. ಅರ್ಹರಿಗೆ ರೇಷನ್ ಕಾರ್ಡ್‌ ವಿತರಿಸಲಾಗುವುದು. ಜೊತೆಗೆ ಕೇಂದ್ರ ಸರ್ಕಾರದ ಮಾನದಂಡದ ಪ್ರಕಾರ, ಅನರ್ಹ ಕುಟುಂಬಗಳ ಕಾರ್ಡ್‌ ರದ್ದುಗೊಳಿಸಲಾಗುವುದು ಎಂದು ಹೇಳಿದರು.

ಇಂದಿರಾ ಕಿಟ್ ನೀಡಲು ಕರೆದಿದ್ದ ಟೆಂಡರ್ ರದ್ದು

ಸಾರ್ವಜನಿಕರು ನ್ಯಾಯಬೆಲೆ ಅಂಗಡಿಗಳಿಗೆ ತೆರಳುವ ಒತ್ತಡ ಕಡಿಮೆ ಮಾಡಲು ಮೊಬೈಲ್ ಮೂಲಕವೇ ಮುಖಚರ್ಯೆ ಬಳಸಿ ಇ-ಕೆವೈಸಿ ಮಾಡಿಕೊಳ್ಳುವ ಸೌಲಭ್ಯ ಕೆಲವೇ ದಿನಗಳಲ್ಲಿ ಜಾರಿಗೆ ಬರಲಿದೆ. ಇನ್ನೂ ಅಂತ್ಯೋದಯ ಅನ್ನ ಯೋಜನೆ ಮತ್ತು ಬಿಪಿಎಲ್ ಕುಟುಂಬಗಳ ಪಡಿತರ ಫಲಾನುಭವಿಗಳಿಗೆ ಅನ್ನ ಭಾಗ್ಯದ 5 ಕೆ.ಜಿ. ಅಕ್ಕಿ ಜೊತೆಗೆ ಇಂದಿರಾ ಕಿಟ್ ನೀಡಲು ಕರೆದಿದ್ದ ಟೆಂಡರ್ ಅನ್ನು ರದ್ದುಗೊಳಿಸಲಾಗಿದೆ ಎಂದು ಹೇಳಿದರು.

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಅಂತ್ಯೋದಯ ಅನ್ನ ಯೋಜನೆ ಹಾಗೂ ಬಿಪಿಎಲ್ ಕುಟುಂಬಗಳ ಪ್ರತಿ ಫಲಾನುಭವಿಗಳಿಗೆ 10 ಕೆ.ಜಿ. ಅಕ್ಕಿ ವಿತರಣೆ ಮಾಡಲಾಗುತ್ತಿತ್ತು. ಇಂದಿರಾ ಕಿಟ್ ಮೂಲಕ ರಾಜ್ಯದ ಫಾಲಿನ ಅಕ್ಕಿ ಜೊತೆಗೆ ದ್ವಿದಳ ಧಾನ್ಯ, ಅಡುಗೆ ಎಣ್ಣೆ ಮತ್ತಿತರ ವಸ್ತುಗಳನ್ನು ವಿತರಿಸಲು ಉದ್ದೇಶಿಸಲಾಗಿತ್ತು.

ಆದರೆ ಟೆಂಡರ್ ಪ್ರಕ್ರಿಯೆ ವೈಜ್ಞಾನಿಕವಾಗಿರಲಿಲ್ಲ. ಕಿಟ್ ವಿತರಿಸುವ ಕಂಪನಿಗಳಿಗೆ ಯಾವುದೇ ಹೊಣೆಗಾರಿಕೆ ನಿಗದಿ ಮಾಡಿರಲಿಲ್ಲ. ಜೊತೆಗೆ ಅಡುಗೆ ಎಣ್ಣೆ ತಯಾರಿಸುವಂತಹ ಸಂಸ್ಥೆಗಳು ಸೇರಿದಂತೆ ಉತ್ಪಾದಕರು ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಅನುವು ಮಾಡಿಕೊಡಬೇಕೆಂಬ ಉದ್ದೇಶದಿಂದ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

ಬಡತನ ರೇಖೆಗಿಂತ ಕೆಳಗಿರುವ ನೈಜ ಬಡ ಕುಟುಂಬಗಳಿಗೆ ಸರ್ಕಾರದ ವಿವಿಧ ಗ್ಯಾರಂಟಿ ಯೋಜನೆಗಳು ಹಾಗೂ ಉಚಿತ ಅಕ್ಕಿ ತಲುಪಬೇಕು ಎಂಬುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಬಿಪಿಎಲ್ ಕಾರ್ಡ್ ಪಡೆದಿರುವ ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿದಾರರು ಮತ್ತು ಐಷಾರಾಮಿ ಜೀವನ ನಡೆಸುತ್ತಿರುವವರ ಕಾರ್ಡ್‌ಗಳನ್ನು ರದ್ದುಪಡಿಸುವ ಅಥವಾ ಎಪಿಎಲ್ ಕಾರ್ಡ್‌ಗಳಾಗಿ ಪರಿವರ್ತಿಸುವ ಪ್ರಕ್ರಿಯೆ ಈಗಾಗಲೇ ಚಾಲ್ತಿಯಲ್ಲಿದೆ. ಹೀಗೆ ರದ್ದಾಗುವ ಕಾರ್ಡ್‌ಗಳ ಜಾಗದಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಿ ಕಾಯುತ್ತಿರುವ ಅರ್ಹ ಬಡ ಕುಟುಂಬಗಳಿಗೆ ಆದ್ಯತೆಯ ಮೇಲೆ ಬಿಪಿಎಲ್ ಕಾರ್ಡ್‌ಗಳನ್ನು ವಿತರಿಸಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.

ರಾಜ್ಯ ಸರ್ಕಾರವು ಪಡಿತರ ಚೀಟಿದಾರರೊಗೆ ಆಗಾಗ ಶುಭ ಸುದ್ದಿಯನ್ನು ನೀಡುತ್ತಲಿರುತ್ತದೆ. ಹಾಗೆಯೇ ಇದೀಗ ರೇಷನ್ ಕಾರ್ಡ್‌ಗೆ ಸಂಬಂಧಿಸಿದ ತಿದ್ದುಪಡಿ ಕಾರ್ಯಗಳು ಆರಂಭಗೊಂಡಿದ್ದು, ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಮಯ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೂ ಇದೆ. ಆದರೆ ಹೊಸ ಕಾರ್ಡ್‌ಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮಾತ್ರ ಇನ್ನೂ ಶುರುವಾಗಿಲ್ಲ.

ಎಲ್ಲೆಲ್ಲಿ ಅರ್ಜಿ ಸಲ್ಲಿಕೆ ಮಾಡಬಹದು?

* ಕರ್ನಾಟಕ ಒನ್
* ಬೆಂಗಳೂರು ಒನ್
* ಗ್ರಾಮ ಒನ್

ಸೈಬರ್ ಸೆಂಟರ್‌ ನೀವು ಒಂದು ವೇಳೆ ಬೆಂಗಳೂರಿನವರಾಗಿದ್ದರೆ, ಬೆಂಗಳೂರಿನಲ್ಲಿ ಬೆಂಗಳೂರು ಒನ್, ಗ್ರಾಮದವರು ಆಗಿದ್ದರೆ, ಗ್ರಾಮ ಒನ್‌ ಅಥವಾ ಸೈಬರ್ ಸೆಂಟರ್‌ಗಳಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದು. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರ ಸದಸ್ಯರ ಸೇರ್ಪಡೆ ಮಾಡಲು ಅವಕಾಶ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ http://ahara.kar.nic.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ತಿದ್ದುಪಡಿ ಪ್ರಕ್ರಿಯೆಗೆ ಯಾವೆಲ್ಲಾ ದಾಖಲೆಗಳು ಬೇಕು ಎನ್ನುವ ಪ್ರಶ್ನೆಗೆ ಉತ್ತರವನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಏನೆಲ್ಲಾ ತಿದ್ದುಪಡಿ ಮಾಡಿಸಬಹುದು?

* ಹೆಸರು ತಿದ್ದುಪಡಿ
* ಹೆಸರು ಸೇರ್ಪಡೆ
* ಹೆಸರು ತೆಗೆದುಹಾಕುವಿಕೆ
* ವಿಳಾಸ ಬದಲಾವಣೆ
* ಫೋಟೋ ಬದಲಾವಣೆ
* ಕುಟುಂಬದ ಮುಖ್ಯಸ್ಥರ ಬದಲಾವಣೆ
* ನ್ಯಾಯಬೆಲೆ ಅಂಗಡಿ ಬದಲಾವಣೆ
* ಫೋಟೋ ಬದಲಾವಣೆ

ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲೆಗಳು

* ಎಲ್ಲಾ ಸದಸ್ಯರ ಆಧಾರ್ ಕಾರ್ಡ್
* ಪ್ರಸ್ತುತ ಇರುವ ರೇಷನ್ ಕಾರ್ಡ್
* ಕುಟುಂಬದ ಫೋಟೋ
* ವಿಳಾಸದ ದಾಖಲೆ (ವಿದ್ಯುತ್ ಬಿಲ್ ಅಥವಾ ಇತರ ಸೂಕ್ತ ದಾಖಲೆಗಳು)
* ಸದಸ್ಯರ ಜಾತಿ ಮತ್ತು ಆದಾಯ (6 ವರ್ಷ ಮೆಲ್ಪಟ್ಟವರಿಗೆ)
* ಜನನ ಪ್ರಮಾಣ ಪತ್ರ 6 ವರ್ಷದ ಒಳಗಿನ ಮಕ್ಕಳಿದ್ದರೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+