Ration card: ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ, ದಿನಾಂಕ, ಸಮಯಗಳ ವಿವರ ತಿಳಿಯಿರಿ
ಬೆಂಗಳೂರು, ನವೆಂಬರ್, 28: ಸಾಮಾನ್ಯವಾಗಿ ರೇಷನ್ ಕಾರ್ಡ್‌ಗಳಲ್ಲಿ ಸದಸ್ಯರ ಹೆಸರುಗಳು ಏನಾದರೂ ತಪ್ಪಾಗಿದ್ದರೆ ಅವುಗಳನ್ನು ಸರಿಪಡಿಸಲು ಆಯಾ ಜಿಲ್ಲಾವಾರು ದಿನಾಂಕವನ್ನು ನಿಗದಿಪಡಿಸಿರುತ್ತಾರೆ. ಆ ದಿನಾಂಕದೊಳಗೆ ದಾಖಲೆಗಳನ್ನು ಸರಿಪಡಿಸಿಕೊಂಡರೆ ಪಡಿತರ ಪಡೆಯಲು ಯಾವುದೇ ಸಮಸ್ಯೆಗಳನ್ನು ಇರುವುದಿಲ್ಲ. ಹಾಗೆಯೇ ಇದೀಗ ಈ ಜಿಲ್ಲೆಯಲ್ಲೂ ಸಹ ಪಡಿತರ ಚೀಟಿ ತಿದ್ದುಪಡಿಗೆ ದಿನಾಂಕ ನಿಗಧಿಪಡಿಲಾಗಿದೆ. ಹಾಗಾದರೆ ಯಾವ ಜಿಲ್ಲೆಯಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ನಿಮ್ಮ ಪಡಿತರ ಚೀಟಿಯಲ್ಲಿ ಹೆಸರುಗಳು ತಪ್ಪಿವೆಯೇ, ಯಾವುದಾದರೂ ಹೆಸರನ್ನು ಸೇರಿಸಬೇಕೆ, ಹಾಗಾದರೆ ಎರಡು ದಿನದಲ್ಲಿ ಇದನ್ನು ಸರಿಪಡಿಸಿಕೊಳ್ಳಲು ಅವಕಾಶ ಕಲ್ಪಿಸಿಕೊಡಲಾಗಿದೆ. ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಬಳಕೆಗೆ ಪಡಿತರ ಕಡ್ಡಾಯ ಆಗಿರುವುದರಿಂದ ಸರಿಪಡಿಸಿಕೊಳ್ಳುವವರಿಗೆ ರಾಜ್ಯದ ಸರ್ಕಾರ ಅವಕಾಶ ಕಲ್ಪಿಸಿಕೊಟ್ಟಿದೆ.

ಕರ್ನಾಟಕ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಈಗಾಗಲೇ ಸೂಚನೆ ಹೊರಡಿಸಲಾಗಿದ್ದು, ನವೆಂಬರ್ 29 ಮತ್ತು 30ರ ಎರಡು ದಿನಗಳ ಮಟ್ಟಿಗೆ ಮಾತ್ರ ಈ ವಕಾಶವನ್ನು ಬಳಕೆ ಮಾಡಿಕೊಳ್ಳಬಹುದು. ಅದೂ ಎರಡು ಗಂಟೆಗಳ ಕಾಲ ಮಾತ್ರ.
ಪಡಿತರ ಚೀಟಿಯಲ್ಲಿನ ಫಲಾನುಭವಿಗಳ ಜಿಎಸ್‌ಸಿ ತಿದ್ದುಪಡಿ ಹಾಗೂ ಹೆಚ್ಚುವರಿ ಫಲಾನುಭವಿಗಳ ಹೆಸರನ್ನು ಸೇರ್ಪಡೆಗೆ ಹಾಗೂ ಹೊಸ ಆದ್ಯತಾ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಕರ್ನಾಟಕ ಒನ್ ಹಾಗೂ ಗ್ರಾಮ ಒನ್‌ಗಳಲ್ಲಿ ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಕಲಬುರಗಿ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಶಾಂತಗೌಡ ಜಿ.ಗುಣಕಿ ಮಾಹಿತಿ ನೀಡಿದ್ದಾರೆ.
ಸದಸ್ಯರ ಹೆಸರು ಸೇರ್ಪಡೆ ಅಥವಾ ಬೇರ್ಪಡೆ ಅಥವಾ ತಿದ್ದುಪಡಿ, ಪಡಿತರ ಚೀಟಿಯಲ್ಲಿನ ನ್ಯಾಯಬೆಲೆ ಅಂಗಡಿ ವಿಳಾಸ ಬದಲಾವಣೆ ಹಾಗೂ ಆದ್ಯತೇತರ ಪಡಿತರ ಚೀಟಿದಾರರು ಪಡಿತರ ಪಡೆಯಲು ಇಚ್ಚೆ ವ್ಯಕ್ತಪಡಿಸಲು ಕರ್ನಾಟಕ ಒನ್ ಹಾಗೂ ಗ್ರಾಮ ಒನ್‌ಗಳಲ್ಲಿ ನವೆಂಬರ್ 29 ಹಾಗೂ 30ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ.
ಅದೇ ರೀತಿ ಹೊಸ ಆದ್ಯತಾ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಡಿಸೆಂಬರ್ 3ರಂದು ಒಂದು ದಿನ ಮಾತ್ರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕರ್ನಾಟಕ ಒನ್ ಹಾಗೂ ಗ್ರಾಮ ಒನ್‌ಗಳಲ್ಲಿ ಅವಕಾಶ ಕಲ್ಪಿಸಲಾಗಿದೆ. ಇದಕ್ಕಾಗಿ ಸರಿಯಾದ ಹೆಸರು, ಆಧಾರ್ ಕಾರ್ಡ್ ಹಾಗೂ ವಿಳಾಸದ ದಾಖಲೆಯನ್ನು ತರುವಂತೆ, ನಿಗದಿತ ಸಮಯದೊಳಗೆ ಆಗಮಿಸಬೇಕು ಎಂದು ತಿಳಿಸಲಾಗಿದೆ.
ಜಿಲ್ಲೆಯ ನಗರ ಪ್ರದೇಶಗಳಲ್ಲಿರುವ ಕರ್ನಾಟಕ ಒನ್ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿನ ಗ್ರಾಮ ಒನ್ ಕೇಂದ್ರಗಳಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಇವುಗಳನ್ನು ಹೊರತುಪಡಿಸಿ ಬೇರೆ ಇನ್ಯಾವುದೇ ಆನ್‌ಲೈನ್ ಸೆಂಟರ್‌ಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ ಎಂದು ಅವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications