Ration Card: ರೇಷನ್ ಕಾರ್ಡ್ ತಿದ್ದುಪಡಿಗೆ ಈ ದಿನವೇ ಕೊನೆಯ ದಿನ: ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು, ಜನವರಿ 15: ಬಹುದಿನಗಳಿಂದ ಪಡಿತರ ಚೀಟಿಗಾಗಿ ಕಾಯುತ್ತಿದ್ದ ಜನರಿಗೆ ಆಹಾರ ಇಲಾಖೆ ಗುಡ್ ನ್ಯೂಸ್‌ ನೀಡಿದೆ. ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ,ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದ್ದು, ಜನವರಿ 31 ರವರೆಗೆ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ.

ಪಡಿತರ ಚೀಟಿದಾರರು ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ನೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗುವುದು.

ration card amendment allowed till january 31

ರೇಷನ್ ಕಾರ್ಡ್ ನಲ್ಲಿ ಹೆಂಡತಿ ಹೆಸರು ಸೇರಿಸಲು ಈ ದಾಖಲೆಗಳು ಕಡ್ಡಾಯ

* ಆಧಾರ್ ಕಾರ್ಡ್

* ಮದುವೆ ಪ್ರಮಾಣ ಪತ್ರ

* ಪೋಷಕರ ಪಡಿತರ ಚೀಟಿ ಅಗತ್ಯ.

ಪಡಿತರ ಚೀಟಿಗೆ ಮಗುವಿನ ಹೆಸರು ಸೇರ್ಪಡೆಗೆ ಈ ದಾಖಲೆಗಳು ಕಡ್ಡಾಯ

* ಮಗುವಿನ ಜನನ ಪ್ರಮಾಣಪತ್ರ

* ಹೆತ್ತವರ ಆಧಾರ್ ಕಾರ್ಡ್

ಆನ್‌ಲೈನ್‌ನಲ್ಲಿ ಪಡಿತರ ಚೀಟಿಗೆ ನಿಮ್ಮ ಕುಟುಂಬದ ಯಾವುದೇ ಸದಸ್ಯರ ಹೆಸರನ್ನು ಸೇರಿಸಲು, ನೀವು ನಿಮ್ಮ ರಾಜ್ಯದ ಆಹಾರ ಸರಬರಾಜು ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ಇದರ ನಂತರ ನೀವು ID ಅನ್ನು ರಚಿಸಬೇಕಾಗುತ್ತದೆ. ನಿಮ್ಮ ಐಡಿಯನ್ನು ಈಗಾಗಲೇ ರಚಿಸಿದ್ದರೆ ನೀವು ಲಾಗಿನ್ ಆಗಬೇಕು. ಇದರ ನಂತರ ನಿಮ್ಮ ಪಡಿತರ ಚೀಟಿಯ ವಿವರಗಳನ್ನು ನೀವು ನೋಡುತ್ತೀರಿ, ಅದರಲ್ಲಿ ನೀವು ಹೊಸ ಸದಸ್ಯರನ್ನು ಸೇರಿಸುವ ಆಯ್ಕೆಯನ್ನು ಪಡೆಯುತ್ತೀರಿ. ನೀವು ಅದರ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ, ಇದರ ನಂತರ ನೀವು ಹೊಸ ಸದಸ್ಯರನ್ನು ಸೇರಿಸಲು ಫಾರ್ಮ್ ಅನ್ನು ಭರ್ತಿ ಮಾಡಬೇಕಾಗುತ್ತದೆ.

ಆಹಾರ ಇಲಾಖೆ ಅಧಿಕಾರಿಗಳ ಜೊತೆ ಸಿಎಂ ಸಭೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದ್ದು, ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಯಡಿ ರೂ.4692 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಅಕ್ಟೋಬರ್‌ ಅಂತ್ಯದವರೆಗೆ ರೂ. 3253 ಕೋಟಿ ವೆಚ್ಚ ಮಾಡಲಾಗಿದೆ. 4,44,48,294 ಫಲಾನುಭವಿಗಳು ಇದರ ಲಾಭ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಪಡಿತರ ಹಾಗೂ ಆಹಾರ ಧಾನ್ಯ ವಿತರಣಾ ವ್ಯವಸ್ಥೆಯನ್ನು ತಳಹಂತದಲ್ಲಿ ಬಲಪಡಿಸುವ ಮೂಲಕ ಜಾಗೃತಿ ಸಮಿತಿಗಳಲ್ಲಿ ಜನರ ಸಹಭಾಗಿತ್ವವನ್ನು ಹೆಚ್ಚಿಸಬೇಕು. ಸಮಿತಿ ನಿಯಮಿತವಾಗಿ ಸಭೆ ನಡೆಸುವುದನ್ನು ಖಾತ್ರಿಪಡಿಸಬೇಕು. ರಾಜ್ಯದಲ್ಲಿ ಒಟ್ಟು 4518 ಪೆಟ್ರೋಲ್‌ ಬಂಕ್‌ಗಳಿದ್ದು, ಡಿಸೆಂಬರ್‌ ಅಂತ್ಯದವರೆಗೆ 503 ಪೆಟ್ರೋಲ್‌ ಬಂಕ್‌ಗಳ ತಪಾಸಣೆ ಮಾಡಲಾಗಿದೆ. ಪೆಟ್ರೋಲ್‌ ಬಂಕ್‌ಗಳ ತಪಾಸಣೆಯನ್ನು ಹೆಚ್ಚಿಸಿ ಅಳತೆ ಮತ್ತು ಗುಣಮಟ್ಟದಲ್ಲಿ ಮೋಸದಂತಹ ಅಕ್ರಮಗಳಿಗೆ ಸಂಪೂರ್ಣ ಕಡಿವಾಣ ಹಾಕಬೇಕು.

ಕನಿಷ್ಠ ಬೆಂಬಲ ಬೆಲೆ ಅಡಿ ಆಹಾರ ಧಾನ್ಯ ಸಂಗ್ರಹಿಸಲು ಎಲ್ಲಾ ವ್ಯವಸ್ಥೆ ಮಾಡಬೇಕು. ರೈತರಿಗೆ ಸಮಸ್ಯೆಯಾಗದಂತೆ ತ್ವರಿತವಾಗಿ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ 1,53,69,945 ಪಡಿತರ ಚೀಟಿಗಳಿದ್ದು, 5,30,88,636 ಸದಸ್ಯ ಫಲಾನುಭವಿಗಳಿದ್ದಾರೆ. ಇಲಾಖೆಯಲ್ಲಿ ಒಟ್ಟು 709 ಹುದ್ದೆಗಳು ಖಾಲಿಯಿವೆ. ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆಯಡಿ ಕರ್ನಾಟಕದಲ್ಲಿ ಬೇರೆ ರಾಜ್ಯಗಳ 13,383 ಫಲಾನುಭವಿಗಳು ಪಡಿತರ ಸೌಲಭ್ಯ ಪಡೆಯುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+