ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೊಂದು ಅವಕಾಶ, ದಿನಾಂಕಗಳ ವಿವರ ತಿಳಿಯಿರಿ
ಬೆಂಗಳೂರು, ಸೆಪ್ಟೆಂಬರ್, 06: ಮೂರು ಹಂತಗಳಲ್ಲಿ ಜಿಲ್ಲಾವಾರು ಪಡಿತರ ಚೀಟಿಯಲ್ಲಿ ಹೆಸರು ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಹಾಗಾದರೆ ಪಡಿತರ ಚೀಟಿಯಲ್ಲಿ ಹೆಸರು ತಿದ್ದುಪಡಿ ಕಾರ್ಯ ಯಾವ್ಯಾವ ಜಿಲ್ಲೆಗಳಲ್ಲಿ ಯಾವ ದಿನಾಂಕದವರೆಗೂ ನಡೆಯಲಿದೆ ಎನ್ನುವ ವಿವರನ್ನು ಇಲ್ಲಿ ತಿಳಿಯಿರಿ.
ಈ ಹಿಂದೆ ಆಹಾರ ಇಲಾಖೆಯ ವೆಬ್‌ಸೈಟ್ ಮೇಲೆ ಲೋಡ್ ಹೆಚ್ಚಾದ ಹಿನ್ನೆಲೆ ವೆಬ್‌ಸೈಟ್ ಅನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿತ್ತು. ಇದೀಗ ಆಯಾ ಜಿಲ್ಲೆಗಳಿಗೆ ನಿಗದಿತ ದಿನಾಂಕಗಳನ್ನು ನೀಡಲಾಗಿದ್ದು, ಈ ಮೂಲಕ ನೀಡಿರುವ ದಿನಾಂಕದಂದು ಮಾತ್ರ ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ\ತಿದ್ದುಪಡಿಗೆ ಅವಕಾಶ ನೀಡಲಾಗಿದೆ.

ಪಡಿತರ ಚೀಟಿ ತಿದ್ದುಪಡಿಗೆ ಜಿಲ್ಲಾವಾರು ದಿನಾಂಕಗಳ ವಿವರ
ಬೆಳಗಾವಿ, ಹಾವೇರಿ, ಬಾಗಲಕೋಟೆ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಚಾಮರಾಜನಗರ, ಗದಗ, ಮಂಡ್ಯ, ಉತ್ತರ ಕನ್ನಡ, ವಿಜಯಪುರ, ಮೈಸೂರು, ಕೊಡಗು, ಹಾವೇರಿ ಹಾಗೂ ಹಾಸನ ಜಿಲ್ಲೆಗಳಲ್ಲಿ ಜನರು ಸೆಪ್ಟೆಂಬರ್ 12ರಿಂದ 14ರವರೆಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಅವಕಾಶವನ್ನು ನೀಡಲಾಗಿದೆ. ಇನ್ನು ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಫಲಾನುಭವಿಗಳಿಗೆ ಸೆಪ್ಟೆಂಬರ್ 9ರಿಂದ ಸೆಪ್ಟೆಂಬರ್ 11ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಬಳ್ಳಾರಿ, ಬೀದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣೆಗೆರ, ಕಲಬುರಗಿ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 6 ಅಂದರೆ ಇಂದಿನಿಂದ ಸೆಪ್ಟೆಂಬರ್ 8ರವರೆಗೆ ಅವಕಾಶ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಪಡಿತರ ಚೀಟಿ ಹೆಸರು ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಇದರ ಉಪಯೋಗವನ್ನು ಪಡಿತರ ಚೀಟಿದಾರರು ಪಡೆದುಕೊಳ್ಳಲು ಇದು ಉತ್ತಮ ಅವಕಾಶವಾಗಿದೆ.












Click it and Unblock the Notifications