Ration Card: ಎಪಿಎಲ್ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬೇಕಾ?-ಮಾಹಿತಿ, ವಿವರ ಇಲ್ಲಿದೆ
Ration Card: ಎಪಿಎಲ್ ಪಡಿತರ ಚೀಟಿ ವಿತರಣೆಯನ್ನು ಕಳೆದ ಒಂದೂವರೆ ವರ್ಷದಿಂದ ರದ್ದ ಮಾಡಲಾಗಿತ್ತು. ಇದೀಗ ಮರುಚಾಲನೆ ನೀಡಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಿರ್ಧಾರ ಮಾಡಿದೆ. ಇನ್ನು ಹೊಸ ಕಾರ್ಡ್‌ಗೆ ಅರ್ಜಿ ಯಾವಾಗಿನಿಂದ ಸಲ್ಲಿಸಬಹುದು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಜೂನ್ ತಿಂಗಳಲ್ಲಿಯೇ ಹೊಸ ಕಾರ್ಡ್‌ಗಳಿಗೆ ಅರ್ಜಿ ಆಹ್ವಾನಿಸಲು ಇಲಾಖೆ ತೀರ್ಮಾನ ಮಾಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗೆಯೇ ಈ ಸಂಬಂಧ ಹೆಚ್ಚಿನ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಹೊಸ ಕಾರ್ಡ್‌ಗಾಗಿ ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಸಬೇಕಾಗುತ್ತದೆ. ಇದರ ವೆಬ್ ಪೋರ್ಟಲ್ ಅನ್ನು ಸುಮಾರು ಒಂದೂವರೆ ವರ್ಷದಿಂದಲೂ ರದ್ದು ಮಾಡಲಾಗಿದ್ದು, ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟದ ಬಳಿಕ ಜೂನ್ ಮೊದಲ ವಾರದಲ್ಲಿ ಈ ಪೋರ್ಟಲ್‌ನಲ್ಲಿಅರ್ಜಿ ಸಲ್ಲಿಕೆಗೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಇಲಾಖೆ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಕಳೆದ ವರ್ಷ 2023ರ ಮೇನಲ್ಲಿ ವಿಧಾನಸಭಾ ಚುನಾವಣೆ ನಿಗದಿಯಾಗಿದ್ದು, ಅದಕ್ಕೂ ಮೊದಲು ಚುನಾವಣಾ ತಯಾರಿಗಳನ್ನು ಮಾಡಲಾಗುತ್ತಿತ್ತು. ಅಷ್ಟೇ ಅಲ್ಲದೆ, ಆಗ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ಅವಧಿಯೂ ಅಂತ್ಯವಾಗಿತ್ತು. ಆದ್ದರಿಂದ ಸುಮಾರು ಒಂದೂವರೆ ವರ್ಷದಿಂದಲೂ ಎಪಿಎಲ್ ಕಾರ್ಡ್‌ಗೆ ಅರ್ಜಿ ಸಲ್ಲಿಕೆಗೆ ಆನ್‌ಲೈನ್ ಪೋರ್ಟಲ್‌ನಲ್ಲಿ ಅವಕಾಶ ಕೊಟ್ಟಿರಲಿಲ್ಲ. ಆದರೆ ಇದೀಗ ಈ ಅವಕಾಶ ಮತ್ತೆ ಕೂಡಿಬಂದಿದೆ.
ಬಳಿಕ ರಚನೆಯಾದ ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ, ಶಕ್ತಿ, ಅನ್ನಭಾಗ್ಯ, ಯೋಜನೆಗಳನ್ನು ಜಾರಿಗೆ ಮಾಡಿದ್ದು, ಇವುಗಳನ್ನು ಪಡೆಯಲು ಲಕ್ಷಾಂತರ ಜನ ಅರ್ಜಿ ಸಲ್ಲಿಕೆ ಮಾಡಲು ಕ್ಯೂನಲ್ಲಿ ನಿಲ್ಲುತ್ತಿದ್ದರು. ಆದರೆ, ಯೋಜನೆಗೆ ಹೆಚ್ಚಿನ ಅರ್ಜಿಗಳು ಬಂದೇ ಬರುತ್ತವೆ ಎಂದು ತಿಳಿದುಕೊಂಡ ಸರ್ಕಾರ, ಆಗಲೂ ಆನ್‌ಲೈನ್ ಪೋರ್ಟಲ್ ಅನ್ನೇ ಬಿಡಲಿಲ್ಲ. ಆದ್ದರಿಂದ ಅಂದಿನಿಂದಲೂ ಲಕ್ಷಾಂತರ ಮಂದಿ ಅರ್ಹರು ಕಾರ್ಡ್ ಮಾಡಿಸಲು ತುದಿಗಾಲಲ್ಲಿ ನಿಂತಿದ್ದಾರೆ.
ಸರ್ವರ್ ಸಮಸ್ಯೆ: ಕಳೆದ ವರ್ಷ ಮಧ್ಯ ಭಾಗದಲ್ಲಿ ರೇಷನ್ ಕಾರ್ಡ್ ತಿದ್ದುಪಡಿಗೆ ಸಾಕಷ್ಟು ಬಾರಿ ಸರ್ಕಾರ ಅವಕಾಶ ಕಲ್ಪಿಸಿತ್ತು. ಆದರೆ, ಸರ್ವರ್ ಸಮಸ್ಯೆಯಿಂದ ಫಲಾನುಭವಿಗಳಿಗೆ ತಿದ್ದುಪಡಿ ಮಾಡಿಸಲು ಸಾಧ್ಯವಾಗಿರಲಿಲ್ಲ. ಮತ್ತೊಂದೆಡೆ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವುದಕ್ಕೂ ತುಂಬಾ ಮಂದಿ ಕಾಯುತ್ತಿದ್ದರೂ ಸರ್ಕಾರ ಅವಕಾಶ ನೀಡಿರಲಿಲ್ಲ. ಲೋಕಸಭಾ ಚುನಾವಣೆಯ ಫಲಿತಾಂಶ ಜೂನ್ 4ಕ್ಕೆ ಹೊರಬೀಳಲಿದ್ದು, ಜೂನ್ 5ಕ್ಕೆ ಚುನಾವಣಾ ಎಲ್ಲಾ ನಿರ್ಬಂಧಗಳು ತೆರವಾಗಲಿದ್ದು, ಆ ಬಳಿಕ ರಾಜ್ಯದಲ್ಲಿ ಪಡಿತರ ಚೀಟಿ ಹಂಚಿಕೆ ಕಾರ್ಯ ಮುಂದುವರೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಈಗಾಗಲೇ ರಾಜ್ಯದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಲೋಕಸಭೆ ಚುನಾವಣೆ ಮೊದಲನೇ ಹಂತದ ಮತದಾನ ಮುಗಿದಿದ್ದು, ಇದೀಗ ಇನ್ನುಳಿದ ಕ್ಷೇತ್ರಗಳಿಗೆ ಮೇ 7ಕ್ಕೆ ಎರಡನೇ ಹಂತದ ಮತದಾನ ನಡೆಯಲಿದೆ. ಇನ್ನು ಜೂನ್ 4ರಂದು ಫಲಿತಾಂಶ ಹೊರಬೀಳಲಿದೆ.












Click it and Unblock the Notifications