Ration Card: ಅನರ್ಹ ರೇಷನ್ ಕಾರ್ಡ್‌ಗಳ ಸುಳಿವು ಸಿಕ್ಕಿದ್ದು ಆ ಒಂದು ದಾಖಲೆಯಿಂದ!

ರಾಜ್ಯದಲ್ಲಿ ಬಿಪಿಎಲ್ ಕಾರ್ಡ್‌ಗಳ ರದ್ದು ವಿಚಾರ ಭಾರೀ ಚರ್ಚೆಯಾಗುತ್ತಿದೆ. ಕೊನೆಗೂ ರಾಜ್ಯ ಕಾಂಗ್ರೆಸ್‌ ಸರ್ಕಾರ ಬಿಪಿಎಲ್ ಕಾರ್ಡ್‌ಗಳ ರದ್ದು ವಿಚಾರದಿಂದ ಹಿಂದೆ ಸರಿದಿದೆ. ಇದೀಗ ರಾಜ್ಯ ಸರ್ಕಾರ ತನ್ನ ನಿರ್ಧಾರದಿಂದ ಯೂಟರ್ನ್ ತೆಗೆದುಕೊಂಡಿದೆ. ಹಾಗಾದರೆ, ರಾಜ್ಯದಲ್ಲಿ ಬಿಪಿಎಲ್ ಕಾರ್ಡ್‌ಗಳ ರದ್ದು ಮಾಡಲು ಸರ್ಕಾರ ಮುಂದಾಗಿದ್ದು ಹೇಗೆ ಯಾವ ದಾಖಲೆಗಳ ಮೂಲಕ ಅನರ್ಹ ರೇಷನ್ ಕಾರ್ಡ್‌ಗಳನ್ನು ಪತ್ತೆ ಮಾಡಲಾಯಿತು ಎನ್ನುವ ವಿವರ ಇಲ್ಲಿದೆ.

ರಾಜ್ಯದಲ್ಲಿ ಬಿಪಿಎಲ್ ಕಾರ್ಡ್‌ ರದ್ದತಿಯು ಭಾರೀ ಸಂಚಲವನ್ನೇ ಸೃಷ್ಟಿ ಮಾಡಿದೆ. ಇದೀಗ ಈ ನಿರ್ಧಾರದಿಂದ ಹಿಂದೆ ಸರಿದಿರುವುದಾಗಿ ರಾಜ್ಯ ಸರ್ಕಾರ ಹೇಳಿಕೊಂಡಿದೆ. ಬಿಪಿಎಲ್ ಕಾರ್ಡ್‌ ರದ್ದು ವಿಚಾರವು ರಾಜ್ಯದಾದ್ಯಂತ ಭಾರೀ ಗದ್ದಲ ಸೃಷ್ಟಿ ಮಾಡಿದ್ದು, ವಿರೋಧ ಪಕ್ಷಗಳು ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಭಾರೀ ಪ್ರತಿಭಟನೆಗಳನ್ನು ನಡೆಸುತ್ತಿವೆ.

Ration Card clue to the ineligible ration cards came from that one document

ಮಿತಿಗಿಂತ ಹೆಚ್ಚಿನ ಆದಾಯವಿದ್ದು ಹಾಗೂ ಬಿಪಿಎಲ್ ಕಾರ್ಡ್‌ಗೆ ಅರ್ಹರಲ್ಲದವರ ಕಾರ್ಡ್‌ಗಳನ್ನು ರದ್ದು ಮಾಡುವುದಾಗಿ ರಾಜ್ಯ ಸರ್ಕಾರವು ಹೇಳಿಕೊಂಡಿತ್ತು ಆದರೆ, ಅದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು ಸಾಧ್ಯವಾಗದೆ ಈ ರೀತಿ ಮಾಡುತ್ತಿದೆ ಎನ್ನುವ ಆರೋಪಗಳು ಕೇಳಿ ಬಂದಿತ್ತು. ಅಲ್ಲದೇ ಸರ್ಕಾರದ ಏಕಾಏಕಿ ನಿರ್ಧಾರದಿಂದ ಲಕ್ಷಾಂತರ ಜನ ಬಡವರಿಗೆ ಅನ್ಯಾಯವಾಗಲಿದೆ ಎನ್ನುವ ಅಭಿಪ್ರಾಯ ಕೇಳಿ ಬಂದಿದೆ. ರಾಜ್ಯದಲ್ಲಿ ಜನಾಕ್ರೋಶ ಹೆಚ್ಚಾಗುತ್ತಿರುವುದು ತಿಳಿಯುತ್ತಿದ್ದಂತೆಯೇ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ.

ಪಾನ್ ಕಾರ್ಡ್‌ ಕೊಟ್ಟ ಸುಳಿವು!

ಕರ್ನಾಟಕದಲ್ಲಿ ಅನರ್ಹ ಬಿಪಿಎಲ್‌ಕಾರ್ಡ್‌ ಪತ್ತೆ ಮಾಡುವಲ್ಲಿ ಪಾನ್‌ ಕಾರ್ಡ್‌ (Pan card) ಮಹತ್ವದ ಪಾತ್ರ ವಹಿಸಿದೆ ಎನ್ನುವ ಅಂಶ ಇದೀಗ ಬೆಳಕಿಗೆ ಬಂದಿದೆ. ಲಕ್ಷಾಂತರ ಅನರ್ಹ ಬಿಪಿಎಲ್ ಕಾರ್ಡ್‌ಗಳಿದ್ದು, ಇವು ಬಿಪಿಎಲ್ ಕಾರ್ಡ್‌ಗಳಿಗೆ ಇರುವ ಮಿತಿಯನ್ನು ದಾಟಿವೆ. ಹೀಗಾಗಿ, ಈ ಕಾರ್ಡ್‌ಗಳನ್ನು ರದ್ದು ಪಡಿಸಲು ನಿರ್ಧರಿಸಲಾಗಿತ್ತು. ಆದರೆ, ಈ ಅನರ್ಹ ಕಾರ್ಡ್‌ಗಳನ್ನು ಸರ್ಕಾರ ಹೇಗೆ ಪತ್ತೆ ಮಾಡಿತು ಎನ್ನುವುದರ ಹಿಂದೆ ಇಂಟ್ರಸ್ಟಿಂಗ್‌ ಅಂಶ ಅಡಗಿದೆ.

Ration Card clue to the ineligible ration cards came from that one document

ಪಾನ್‌ ಕಾರ್ಡ್‌ ಪರಿಶೀಲನೆ ಮಾಡುವಾಗ ಹಾಗೂ ಆದಾಯ ತೆರಿಗೆ ಪಾವತಿ ಮಾಡುವುದಕ್ಕೆ ವಿಳಂಬ ನೀತಿ ಅನುಸರಿಸಿ ಕೆಲವರು ದಂಡ ಪಾವತಿ ಮಾಡಿದ್ದಾರೆ. ಈ ರೀತಿ ಮಾಡಿದವರು ಆದಾಯ ತೆರಿಗೆ ಪಾವತಿ ಮಾಡಿರುವವರು ಎನ್ನುವುದು ಖಚಿತವಾಗಿದೆ. ಅಲ್ಲದೇ ಇದರಲ್ಲಿ ಸರ್ಕಾರಿ ನೌಕರರೂ ಸಹ ಸೇರಿರುವುದು ಇ - ಆಡಳಿತದ ಪರಿಶೀಲನೆಯಲ್ಲಿ ಪತ್ತೆ ಮಾಡಲಾಗಿದೆ. ಇನ್ನು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಮಾನದಂಡಗಳ ಆಧಾರದ ಮೇಲೆ ಈ ಪ್ರಕ್ರಿಯೆಯನ್ನು ನಡೆಸಿರುವುದಾಗಿ ಆಹಾರ ಸಚಿವ ಕೆ.ಎಚ್‌ ಮುನಿಯಪ್ಪ ಅವರು ಮಾಹಿತಿ ನೀಡಿದ್ದಾರೆ.

ಕೇಂದ್ರ ಸರ್ಕಾರದ ನಿಯಮಾನುಸಾರ ಕ್ರಮ ತೆಗೆದುಕೊಳ್ಳಲಾಗಿದೆ ಎನ್ನುವ ರಾಜ್ಯ ಸರ್ಕಾರದ ಹೇಳಿಕೆಗೆ ವಿರೋಧ ಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಸರ್ಕಾರದ ಹೇಳಿಕೆ ಬಿಜೆಪಿ - ಜೆಡಿಎಸ್‌ ವಿರೋಧ ವ್ಯಕ್ತಪಡಿಸಿವೆ. ಎಲ್ಲಾ ಗೊಂದಲಗಳು ಆದ ಮೇಲೆ ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡಲಾಗುತ್ತಿದೆ. ಈ ವಿಷಯ ಚರ್ಚೆಯಾದಾಗಲೇ ಹೇಳಬಹುದಿತ್ತಲ್ಲವೇ ಎಂದು ಕೇಂದ್ರ ಸಚಿವ ಎಚ್.‌ಡಿ ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+