Ration Card: ರೇಷನ್ ಕಾರ್ಡ್ ತಿದ್ದುಪಡಿಗೆ ಡಿ.31ರವರೆಗೆ ಅವಕಾಶ: ಇಲ್ಲದಿದ್ರೆ ಜನವರಿ ತಿಂಗಳಿನಿಂದ ರೇಷನ್‌ ಸಿಗಲ್ಲ

ಬೆಂಗಳೂರು, ಡಿಸೆಂಬರ್‌ 26: ಪಡಿತರ ಚೀಟಿದಾರರರು ರೇಷನ್ ಕಾರ್ಡ್ ನಲ್ಲಿ ತಮ್ಮ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಡಿಸೆಂಬರ್ 31 ಕೊನೆಯ ದಿನವಾಗಿದ್ದು, ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ,ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ.

ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ. ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ನೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗುವುದು. http://ahara.kar.nic.in ವೆಬ್ಟ್ ಗಮನಿಸಬಹುದಾಗಿದೆ.

Ration card correction allowed till December 31

ತಮ್ಮ ಗುರುತು ನೋಂದಣಿ ಅಥವಾ ಮರುನೋಂದಣಿ ಮಾಡಿಸದಿರುವ ಪಡಿತರ ಚೀಟಿದಾರರು ಇದೇ ಡಿ.31ರೊಳಗೆ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ತಮ್ಮ ಬೆರಳಚ್ಚು ನೀಡಿ e-KYC ಮಾಡಿಸಿಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ. e-KYC ಮಾಡಿಸಿಕೊಳ್ಳಲು ಯಾವುದೇ ಹಣ ನೀಡುವಂತಿಲ್ಲ.

ಆಧಾರ್ ದೃಢೀಕರಣ (e-KYC) ಮಾಡಿಸದಿರುವ ಫಲಾನುಭವಿಗಳಿಗೆ ಡಿಸೆಂಬರ್ ತಿಂಗಳಿನಲ್ಲಿ ಪಡಿತರ ನೀಡವುದನ್ನು ಸ್ಥಗಿತಗೊಳಿಸಲಾಗುತ್ತದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿ e-KYC ಮಾಡಿಸಿಕೊಳ್ಳದೇ ಇರುವ ಪಡಿತರ ಚೀಟಿಯಲ್ಲಿರುವ ಪ್ರತಿಯೊಬ್ಬ ಸದಸ್ಯರೂ ಸಹ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಹೆಬ್ಬೆರಳು ನೀಡಿ ಹೆಸರು ಮರು ನೋಂದಾವಣಿ (e-KYC) ಮಾಡಿಸಿಕೊಳ್ಳಬೇಕು ಎಂದು ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಹೆಸರು ಸೇರಿಸಲು ಯಾವ ದಾಖಲೆಗಳು ಕಡ್ಡಾಯ

ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಅನ್ನು ಹೊಂದಿರಬೇಗುತ್ತದೆ. ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಮತ್ತು ಗಂಡನ ಮನೆಯ ಪಡಿತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ. ಈ ಎರಡು ದಾಖಲೆಗಳು ಇದ್ದರೆ ನೀವು ಆನ್ಲೈನ್ ಮುಖಾಂತರ ರೇಷನ್ ಕಾರ್ಡ್ನಲ್ಲಿ ನಿಮ್ಮ ಹೆಸರನ್ನು ಸೇರಿಸಬಹುದು.

ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಸೇರ್ಪಡೆ ಮಾಡಲು ನಿಮ್ಮ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಬೇಕಾಗುತ್ತದೆ. ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾ‌ರ್ ಮತ್ತು ಗಂಡನ ಮನೆಯ ಪಡಿ ತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ.

ಪಡಿತರ ಚೀಟಿ e-KYC ಮಾಡಿಸಲು ಬೇಕಾಗುವ ದಾಖಲೆಗಳು

* ನಿಮ್ಮ ಪಡಿತರ ಚೀಟಿಯ ಅಸಲಿ ಪ್ರತಿ
* ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಫೋಟೋ ಕಾಪಿ
* ಕುಟುಂಬದ ಯಜಮಾನನ ಆಧಾರ್ ಕಾರ್ಡ್ ನಕಲು ಪ್ರತಿ
* ಬ್ಯಾಂಕ್ ಪಾಸ್‌ಬುಕ್‌ನ ಫೋಟೋ ಕಾಪಿ
* ಕುಟುಂಬದ ಯಜಮಾನನ ಎರಡು ಪಾಸ್‌ಪೋರ್ಟ್ ಅಳತೆಯ ಪೋಟೋ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+