Ration Card: ರಾಜ್ಯದ ಬಿಪಿಎಲ್‌, ಎಪಿಎಲ್‌ ಪಡಿತರ ಚೀಟಿದಾರರಿಗೆ ಮತ್ತೊಮ್ಮೆ ಗುಡ್‌ ನ್ಯೂಸ್‌; ತಿದ್ದುಪಡಿ ದಿನಾಂಕ ವಿಸ್ತರಣೆ

Ration Card: ರಾಜ್ಯದಲ್ಲಿ ಆಹಾರ ಇಲಾಖೆಯು ಪಡಿತರ ಚೀಟಿ ತಿದ್ದುಪಡಿ ಪ್ರಕ್ರಿಯೆ ದಿನಾಂಕವನ್ನು ಹಲವು ಬಾರಿ ಮುಂದೂಡಿಕೆ ಮಾಡುತ್ತಲೇ ಬಂದಿದೆ. ಈ ಹಿಂದೆ ಮಾರ್ಚ್‌ 31ರ ವರೆಗೂ ಗುಡುಗು ವಿಸ್ತರಣೆ ಮಾಡಲಾಗಿದ್ದು, ಮತ್ತೊಮ್ಮೆ ಮುಂದೂಡಿಕೆ ಮಾಡಲಾಗಿದೆ. ಹಾಗಾದ್ರೆ ಏನೆಲ್ಲಾ ತಿದ್ದುಪಡಿ ಮಾಡಿಸಿಕೊಳ್ಳಬಹುದು ಹಾಗೂ ಕೊನೆಯ ದಿನಾಂಕ ಯಾವಾಗ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಯಾವುದೇ ಸರ್ಕಾರಿ ಯೋಜನೆಗಳಿಗೆ ಸರ್ಜಿ ಸಲ್ಲಿಕೆ ಮಾಡಬೇಕೆಂದರೆ ಪಡಿತರ ಚೀಟಿ ಬೇಕೇ ಬೇಕಾಗುತ್ತದೆ. ಅದರಲ್ಲೂ ಒಂದು ತಪ್ಪಿದ್ದರೂ ಸಹ ಅರ್ಜಿ ಸ್ವೀಕೃತವಾಗುವುದಿಲ್ಲ. ಆದ್ದರಿಂದ ಇದೀಗ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದ್ದು, ತಿದ್ದುಪಡಿ ಮಾಡಿಸಲು ಇದೇ ಉತ್ತಮ ಅವಕಾಶ ಆಗಿದೆ.

Ration Card Correction Deadline Extended Till June 30 in State

ರಾಜ್ಯದಲ್ಲಿ ಇದೀಗ ಪಡಿತರ ಚೀಟಿ ತಿದ್ದುಪಡಿ ಸೇವೆ ಚಾಲ್ತಿಯಲ್ಲಿದೆ. ಆದರೆ ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಕೆ ಮಾಡಲು ಇನ್ನೂ ಅವಕಶ ಕಲ್ಪಿಸಲಾಗಿಲ್ಲ. ಬದಲಾಗಿ ಈಗಾಗಲೇ ಪಡಿತರ ಚೀಟಿ ಹೊಂದಿರುವವರು ಸದಸ್ಯರ ಸೇರ್ಪಡೆಗೆ ಸೇರಿದಂತೆ ಪೋಟೋ ಬದಲಾವಣೆ, ಇತರೆ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ.

ಕರ್ನಾಟಕ ಒನ್‌, ಗ್ರಾಮ ಒನ್‌, ಬೆಂಗಳೂರು ಒನ್, ಸೈಬರ್ ಸೆಂಟರ್‌ಗಳಲ್ಲಿ ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಕೆ ಮಾಡಬಹುದು. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ಕಲ್ಪಿಸಲಾಗಿದೆ. 2025ರ ಜೂನ್‌ 30ರ ವರೆಗೂ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ.

ತಿದ್ದುಪಡಿಗೆ ಎಲ್ಲೆಲ್ಲಿ ಅರ್ಜಿ ಸಲ್ಲಿಕೆ ಮಾಡಬಹದು?

* ಕರ್ನಾಟಕ ಒನ್‌
* ಗ್ರಾಮ ಒನ್‌
* ಬೆಂಗಳೂರು ಒನ್

ಏನೆಲ್ಲಾ ತಿದ್ದುಪಡಿ ಮಾಡಿಸಬಹುದು?

* ಸದಸ್ಯರ ಸೇರ್ಪಡೆ
* ಪೋಟೋ ಬದಲಾವಣೆ
* ಹೆಸರು ತೆಗೆದುಹಾಕುವಿಕೆ
* ನ್ಯಾಯಬೆಲೆ ಅಂಗಡಿ ನಂಬರ್ ಬದಲಾವಣೆ
* ಹೆಸರು ತಿದ್ದುಪಡಿ
* ಕುಟುಂಬದ ಮುಖ್ಯಸ್ಥರ ಬದಲಾವಣೆ
* ಸದಸ್ಯರ ಫೋಟೋ ಬದಲಾವಣೆ

ತಿದ್ದುಪಡಿಗೆ ಯಾವೆಲ್ಲಾ ದಾಖಲೆಗಳು ಬೇಕು?

* ಸದಸ್ಯರ ಆಧಾರ್‌ ಕಾರ್ಡ್ ಕಡ್ಡಾಯ
* ಸದಸ್ಯರ ಜಾತಿ ಮತ್ತು ಆದಾಯ 6 ವರ್ಷ ಮೆಲ್ಪಟ್ಟವರಿಗೆ
* ಜನನ ಪ್ರಮಾಣ ಪತ್ರ 6 ವರ್ಷದ ಒಳಗಿನ ಮಕ್ಕಳಿದ್ದರೆ.

ಪತ್ನಿ ಸೇರ್ಪಡೆಗೆ ಯಾವೆಲ್ಲಾ ದಾಖಲೆಗಳು ಬೇಕು?

* ಆಧಾರ್ ಕಾರ್ಡ್
* ವಿವಾಹ ಪ್ರಮಾಣ ಪತ್ರ
* ಪೋಷಕರ ಪಡಿತರ ಚೀಟಿ ಅಗತ್ಯ
* ಪಡಿತರ ಚೀಟಿಗೆ ಮಗುವಿನ ಹೆಸರು ಸೇರ್ಪಡೆಗೆ ಮಗುವಿನ ಜನನ ಪ್ರಮಾಣಪತ್ರ ಕಡ್ಡಾಯವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+