Ration Card: ಪಡಿತರ ಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ, ಬೇಕಾಗುವ ದಾಖಲೆಗಳ ವಿವರ

Ration Card Correction: ಪ್ರಮುಖ ದಾಖಲೆಗಳಲ್ಲಿ ಪಡಿತರ ಚೀಟಿ ಸಹ ಒಂದಾಗಿದೆ. ಇದು ಬರೀ ರೇಷನ್ ಪಡೆಯಲು ಅಷ್ಟೇ ಅಲ್ಲದೆ, ಯಾವುದೇ ಸರ್ಕಾರಿ ಸೌಲಭ್ಯಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಅತ್ಯಗತ್ಯವಾಗಿ ಬೇಕಾಗುತ್ತದೆ. ಇದರಲ್ಲಿ ಯಾವುದೇ ತಪ್ಪುಗಳಿದ್ದಲ್ಲಿ ಪರಿಗಣನೆಗೆ ತೆಗೆದುಕೊಳ್ಳಲಾಗುವುದಿಲ್ಲ. ಆದ್ದರಿಂದ ಇದೀಗ ಕಾರ್ಡ್‌ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ. ಏನೆಲ್ಲಾ ತಿದ್ದುಪಡಿ ಮಾಡಿಸಬಹುದು ಹಾಗೂ ಬೇಕಾಗುವ ದಾಖಲೆಗಳೇನು?

ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಶುಭ ಸುದ್ದಿಯನ್ನು ನೀಡುತ್ತಲಿರುತ್ತದೆ. ಇದೀಗ ರೇಷನ್ ಕಾರ್ಡ್‌ಗೆ ಸಂಬಂಧಿಸಿದ ತಿದ್ದುಪಡಿ ಕಾರ್ಯಗಳು ಆರಂಭಗೊಂಡಿದ್ದು, ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಮಯ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೂ ಇದೆ. ಆದರೆ ಹೊಸ ಕಾರ್ಡ್‌ಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮಾತ್ರ ಇನ್ನೂ ಆರಂಭವಾಗಿಲ್ಲ.

Ration Card Correction In Karnataka Required Documents And Application Submit Process details

ತಿದ್ದುಪಡಿಗೆ ಎಲ್ಲೆಲ್ಲಿ ಅರ್ಜಿ ಸಲ್ಲಿಸಬಹುದು?

* ಕರ್ನಾಟಕ ಒನ್
* ಬೆಂಗಳೂರು ಒನ್
* ಗ್ರಾಮ ಒನ್
* ಸೈಬರ್ ಸೆಂಟರ್‌

ನೀವು ಒಂದು ವೇಳೆ ಬೆಂಗಳೂರಿನವರಾಗಿದ್ದರೆ, ಬೆಂಗಳೂರಿನಲ್ಲಿ ಬೆಂಗಳೂರು ಒನ್, ಗ್ರಾಮದವರು ಆಗಿದ್ದರೆ, ಗ್ರಾಮ ಒನ್‌ ಅಥವಾ ಸೈಬರ್ ಸೆಂಟರ್‌ಗಳಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದು. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರ ಸದಸ್ಯರ ಸೇರ್ಪಡೆ ಮಾಡಲು ಅವಕಾಶ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ http://ahara.kar.nic.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ತಿದ್ದುಪಡಿ ಪ್ರಕ್ರಿಯೆಗೆ ಯಾವೆಲ್ಲಾ ದಾಖಲೆಗಳು ಬೇಕು ಎನ್ನುವ ಪ್ರಶ್ನೆಗೆ ಉತ್ತರವನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಏನೆಲ್ಲಾ ತಿದ್ದುಪಡಿ ಮಾಡಿಸಬಹುದು?

* ಹೆಸರು ತಿದ್ದುಪಡಿ
* ಹೆಸರು ಸೇರ್ಪಡೆ
* ಹೆಸರು ತೆಗೆದುಹಾಕುವಿಕೆ
* ವಿಳಾಸ ಬದಲಾವಣೆ
* ಫೋಟೋ ಬದಲಾವಣೆ
* ಕುಟುಂಬದ ಮುಖ್ಯಸ್ಥರ ಬದಲಾವಣೆ
* ನ್ಯಾಯಬೆಲೆ ಅಂಗಡಿ ಬದಲಾವಣೆ
* ಫೋಟೋ ಬದಲಾವಣೆ

ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲೆಗಳು

* ಎಲ್ಲಾ ಸದಸ್ಯರ ಆಧಾರ್ ಕಾರ್ಡ್
* ಪ್ರಸ್ತುತ ಇರುವ ರೇಷನ್ ಕಾರ್ಡ್
* ಕುಟುಂಬದ ಫೋಟೋ
* ವಿಳಾಸದ ದಾಖಲೆ (ವಿದ್ಯುತ್ ಬಿಲ್ ಅಥವಾ ಇತರ ಸೂಕ್ತ ದಾಖಲೆಗಳು)
* ಸದಸ್ಯರ ಜಾತಿ ಮತ್ತು ಆದಾಯ (6 ವರ್ಷ ಮೆಲ್ಪಟ್ಟವರಿಗೆ)
* ಜನನ ಪ್ರಮಾಣ ಪತ್ರ 6 ವರ್ಷದ ಒಳಗಿನ ಮಕ್ಕಳಿದ್ದರೆ

ಪತ್ನಿ ಹೆಸರು ಸೇರ್ಪಡೆಗೆ ಬೇಕಾಗುವ ದಾಖಲೆಗಳು

* ಆಧಾರ್ ಕಾರ್ಡ್
* ಮದುವೆ ಪ್ರಮಾಣ ಪತ್ರ
* ಪೋಷಕರ ಪಡಿತರ ಚೀಟಿ

ಮಗುವಿನ ಹೆಸರು ಸೇರ್ಪಡೆಗೆ ಬೇಕಾಗುವ ದಾಖಲೆಗಳು

* ಮಗುವಿನ ಜನನ ಪ್ರಮಾಣಪತ್ರ
* ಪೋಷಕರ ಆಧಾರ್ ಕಾರ್ಡ್

ಅರ್ಜಿ ಸಲ್ಲಿಸುವ ವಿಧಾನಗಳು

* ಅಧಿಕೃತ ವೆಬ್ ಸೈಟ್ https://ahara.kar.nic.in/homeಗೆ ಭೇಟಿ ನೀಡಿ
* ಮುಖ್ಯ ಪುಟದಲ್ಲಿ ಇ-ಸೇವೆಗಳ ಮೇಲೆ ಕ್ಲಿಕ್ ಮಾಡಿ
* ತಿದ್ದುಪಡಿ/ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ
* ಹೊಸ ಪೇಜ್‌ನಲ್ಲಿ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಯನ್ನ ಭರ್ತಿ ಮಾಡಿ
* ಅಗತ್ಯ ದಾಖಲೆಗಳ ಸ್ಕ್ಯಾನ್ ಪ್ರತಿಯನ್ನು ಅಪ್ಲೋಡ್‌ ಮಾಡಿ ಫಾರ್ಮ್ ಸಲ್ಲಿಸಿ (ಸಬ್ಮಿಟ್‌ ಮೇಲೆ ಕ್ಲಿಕ್‌ ಮಾಡಿ)
* ಅರ್ಜಿ ಸಲ್ಲಿಕೆ ವೇಳೆ ಎಲ್ಲಾ ದಾಖಲಾತಿಗಳು ಸರಿಯಾಗಿದ್ದರೆ, ನಿಮ್ಮ ಮನಗೆ ಅಪ್ಡೇಟ್‌ ಆಗಿರುವ ಹೊಸ ಪಡಿತರ ಚೀಟಿ ಬರಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+