Ration Card: ಬಿಪಿಎಲ್ ಕಾರ್ಡ್‌ ತಿದ್ದುಪಡಿ ಶುರು, ರದ್ದಾದ ಕಾರ್ಡ್‌ ಪಡೆಯುವುದು ಹೇಗೆ & ಯಾವೆಲ್ಲ ದಾಖಲೆಬೇಕು ?

Ration Card Good News: ಕರ್ನಾಟಕದಲ್ಲಿ ಬಿಪಿಎಲ್ ಕಾರ್ಡ್‌ಗಳ ರದ್ದು (ರೇಷನ್ ಕಾರ್ಡ್‌) ಪ್ರಕ್ರಿಯೆಯು ಭಾರೀ ಸಂಚಲನವನ್ನೇ ಸೃಷ್ಟಿ ಮಾಡಿತ್ತು. ರಾಜ್ಯದಲ್ಲಿ ಲಕ್ಷಾಂತರ ಜನ ಬಿಪಿಎಲ್‌ ಕಾರ್ಡ್‌ದಾರರ ಕಾರ್ಡ್‌ಗಳು ರದ್ದಾಗಿದ್ದು, ಇದರಿಂದ ಹಲವರು ಬೀದಿಗೆ ಇಳಿದು ಪ್ರತಿಭಟನೆ ನಡೆಸಿದ್ದರು. ವಿರೋಧ ಪಕ್ಷಗಳು ಈ ವಿಚಾರವಾಗಿ ಬೀದಿಗೆ ಇಳಿದು ಪ್ರತಿಭಟನೆ ನಡೆಸಿದ್ದವು. ಇದರ ಬೆನ್ನಲ್ಲೇ ಬಿಪಿಎಲ್ ಕಾರ್ಡ್‌ಗಳ ಪರಿಷ್ಕರಣೆ ಪ್ರಕ್ರಿಯೆಯನ್ನು ಕೈಬಿಟ್ಟಿತ್ತು. ಇದರ ಬೆನ್ನಲ್ಲೇ ರದ್ದಾಗಿದ್ದ ಬಿಪಿಎಲ್‌ ಕಾರ್ಡ್‌ಗಳ ತಿದ್ದುಪಡಿ ಪ್ರಾರಂಭವಾಗಿದೆ. ನವೆಂಬರ್‌ 25ರ ಮಧ್ಯಾಹ್ನ 3ರ ನಂತರ ಈ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ವರದಿಯಾಗಿದೆ. ಬಿಪಿಎಲ್ ಕಾರ್ಡ್‌ ರದ್ದಾಗಿದ್ದರೆ ಅಥವಾ ತಿದ್ದುಪಡಿ ಮಾಡಿಕೊಳ್ಳಬೇಕಾದರೆ ಯಾವೆಲ್ಲ ದಾಖಲೆಬೇಕು ಹಾಗೂ ಏನು ಮಾಡಬೇಕು ಎನ್ನುವ ವಿವರ ಇಲ್ಲಿದೆ.

ರಾಜ್ಯದಲ್ಲಿ ರೇಷನ್ ಕಾರ್ಡ್ ರದ್ದು ವಿಚಾರವು ಭಾರೀ ಅಲ್ಲೋಲ ಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು. ರೇಷನ್‌ ಕಾರ್ಡ್‌ ರದ್ದು ಮಾಡಿದ್ದರಿಂದ ಲಕ್ಷಾಂತರ ಜನರು ರಾಜ್ಯ ಕಾಂಗ್ರೆಸ್‌ ಸರ್ಕಾರದ ನಿರ್ಧಾರವನ್ನು ವಿರೋಧಿಸಿದ್ದರು. ಭಾರೀ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ಹೆಚ್ಚೆತ್ತುಕೊಂಡಿದ್ದ ರಾಜ್ಯ ಸರ್ಕಾರವು ಈ ಪ್ರಕ್ರಿಯೆಯನ್ನೇ ಕೈ ಬಿಟ್ಟು ಕೇವಲ ಸರ್ಕಾರಿ ನೌಕರರು ಹಾಗೂ ತೆರಿಗೆ ಪಾವತಿ ಮಾಡುವವರ ರೇಷನ್‌ ಕಾರ್ಡ್‌ (ಬಿಪಿಎಲ್ ಕಾರ್ಡ್)‌ ಬದಲಾಯಿಸುವ ಬಗ್ಗೆ ಮಾತ್ರ ಚಿಂತನೆ ನಡೆಸಿರುವುದಾಗಿ ಸ್ಪಷ್ಟನೆ ನೀಡಿದೆ. ಆದರೆ, ಈ ನಡುವೆ ಕೆಲವು ಬಿಪಿಎಲ್ ಕಾರ್ಡ್‌ಗಳು ರದ್ದಾಗಿದ್ದು, ಅದನ್ನು ಸರಿಪಡಿಸಿಕೊಳ್ಳಲು ಜನ ಮತ್ತೆ ಸರ್ಕಾರಿ ಇಲಾಖೆಗಳತ್ತ ಅಲೆದಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.

Ration Card correction started how to get a cancelled card amp amp what documents required

ಲಕ್ಷಾಂತರ ಬಿಪಿಎಲ್ ಕಾರ್ಡ್‌ ರದ್ದು

ಈ ನಡುವೆ ರಾಜ್ಯ ಸರ್ಕಾರವು ಲಕ್ಷಾಂತರ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡಿತ್ತು. ಅವುಗಳನ್ನು ಎಪಿಎಲ್‌ಗೆ ವರ್ಗಾಯಿಸುವುದಾಗಿಯೂ ಹೇಳಲಾಗಿತ್ತು. ಬಿಪಿಎಲ್ ಕಾರ್ಡ್‌ಗಳಲ್ಲಿ ಅಕ್ರಮ ನಡೆದಿದ್ದು, ಅವುಗಳನ್ನು ತಪ್ಪಿಸುವ ಅವಶ್ಯಕತೆ ಇದೆ. ಬಿಪಿಎಲ್‌ ಕಾರ್ಡ್‌ಗಳು ಹಾಗೂ ಅದರ ಪ್ರಯೋಜ ಅರ್ಹ ಫಲಾನುಭವಿಗಳನ್ನು ತಲುಪಬೇಕು.

ಅಲ್ಲದೇ ಕೇಂದ್ರ ಬಿಜೆಪಿ ಸರ್ಕಾರದ ನಿಯಮಾನುಸಾರವೇ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ರಾಜ್ಯ ಕಾಂಗ್ರೆಸ್‌ ಸರ್ಕಾರ ಹೇಳಿತ್ತು. ಈ ಹಿನ್ನೆಲೆಯಲ್ಲಿ ಇದು ರಾಜಕೀಯ ವಾಕ್ಸಮರಕ್ಕೂ ಕಾರಣವಾಗಿತ್ತು. ಇದೀಗ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರ ಉಪ ಚುನಾವಣೆಯಲ್ಲಿ ಗೆಲ್ಲುತ್ತಿದ್ದಂತೆ ರೇಷನ್‌ ಕಾರ್ಡ್‌ದಾರರಿಗೆ ರಾಜ್ಯ ಸರ್ಕಾರವು ಗುಡ್‌ನ್ಯೂಸ್‌ ಕೊಟ್ಟಿದೆ.

ರಾಜ್ಯದಾದ್ಯಂತ ರೇಷನ್ ಕಾರ್ಡ್‌ಗಳು ರದ್ದಾಗಿ, ಜನ ಬೀದಿಗೆ ಇಳಿದು ಪ್ರತಿಭಟನೆ ನಡೆಸುತ್ತಿದ್ದಂತೆಯೇ ರಾಜ್ಯ ಸರ್ಕಾರವು ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ. ರೇಷನ್‌ ಕಾರ್ಡ್‌ಗಳ ರದ್ದು ಅಥವಾ ಬಿಪಿಎಲ್‌ಗೆ ಸೇರಿಸುವ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರವು ಸಂಪೂರ್ಣವಾಗಿ ಬಿಟ್ಟಿಲ್ಲ ಸರ್ಕಾರಿ ನೌಕರರ ಮೇಲೆ ಹಾಗೂ ತೆರಿಗೆ ಪಾವತಿ ಮಾಡುವವರ ಮೇಲೆ ಕಣ್ಣಿಟ್ಟಿದೆ. ಸರ್ಕಾರಿ ನೌಕರರು ಹಾಗೂ ತೆರಿಗೆ ಪಾವತಿ ಮಾಡುವವರ ರೇಷನ್‌ ಕಾರ್ಡ್‌ (ಬಿಪಿಎಲ್‌)ಗಳು ರದ್ದಾಗುವ ಅಥವಾ ಎಪಿಎಲ್‌ಗೆ ವರ್ಗಾವಣೆಯಾಗುವ ಸಾಧ್ಯತೆ ತಳ್ಳಿ ಹಾಕುವಂತಿಲ್ಲ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ಈ ಬಗ್ಗೆ ಮಾತನಾಡಿದ್ದಾರೆ. ರಾಜ್ಯದ ಸರ್ಕಾರಿ ನೌಕರರು ಹಾಗೂ ತೆರಿಗೆ ಪಾವತಿ ಮಾಡ್ತಿರುವವರ ಬಿಪಿಎಲ್ ಕಾರ್ಡ್ ಮಾತ್ರ ರದ್ದಾಗುತ್ತದೆ ಎಂದಿದ್ದಾರೆ. ಇನ್ನು ಉಳಿದ ಎಲ್ಲಾ ಬಡವರ ಹಾಗೂ ಫಲಾನುಭವಿಗಳಿಗೆ ಬಿಪಿಎಲ್ ಕಾರ್ಡು ಸಿಗಲಿದೆ ಎಂದು ಅವರು ಭರವಸೆ ನೀಡಿದ್ದಾರೆ.

ಬಿಪಿಎಲ್ ಕಾರ್ಡ್‌ಗಳ ತಿದ್ದುಪಡಿ ಪ್ರಾರಂಭ: ಉಪ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ರಾಜ್ಯದಲ್ಲಿ ಬಿಪಿಎಲ್ ಕಾರ್ಡ್‌ಗಳ ತಿದ್ದುಪಡಿ ಪ್ರಕ್ರಿಯೆ ಪ್ರಾರಂಭವಾಗಿದೆ. ಈ ಬಗ್ಗೆ ಆಹಾರ ಸಚಿವ ಕೆ.ಎಚ್‌ ಮುನಿಯಪ್ಪ ಅವರು ಸಹ ಮಾತನಾಡಿದ್ದಾರೆ. ಸೋಮವಾರದಿಂದಲೇ ಬಿಪಿಎಲ್ ಕಾರ್ಡ್‌ಗಳ ತಿದ್ದುಪಡಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ಈ ಕಾರ್ಡ್‌ಗಳನ್ನು ಆಹಾರ ಹಾಗೂ ನಾಗರಿಕ ಸರಬರಾಜು ಕಚೇರಿಯಲ್ಲಿ ತಿದ್ದುಪಡೆ ಮಾಡಲಾಗುತ್ತದೆ. ಬಿಪಿಎಲ್‌ ಕಾರ್ಡ್‌ಗಳ ತಿದ್ದುಪಡಿ ಪ್ರಕ್ರಿಯೆಯು ಸೋಮವಾರ ಮಧ್ಯಾಹ್ನ 3ರ ನಂತರ ಶುರುವಾಗಲಿದೆ.

ನಿಮ್ಮ ಬಿಪಿಎಲ್ ಕಾರ್ಡ್‌ ಹಿಂಪಡೆಯಲು ಬೇಕಾಗಿರುವ ದಾಖಲೆಗಳು

ರದ್ದಾಗಿರುವ ಬಿಪಿಎಲ್ ಕಾರ್ಡ್‌ಗಳನ್ನು ಹಾಗೂ ಬಿಪಿಎಲ್ ಕಾರ್ಡ್‌ಗಳ ತಿದ್ದುಪಡಿಯನ್ನು ತಾಲ್ಲೂಕು ಕಚೇರಿಗಳಲ್ಲಿ ಸರಿಪಡಿಸಿಕೊಳ್ಳಬಹುದಾಗಿದೆ. ಬಿಪಿಎಲ್ ಕಾರ್ಡ್‌ಗಳ ತಿದ್ದುಪಡಿ ತಾಲ್ಲೂಕು ಕಚೇರಿಗಳಲ್ಲಿ ನಡೆಯಲಿದೆ.

ಬಿಪಿಎಲ್ ಕಾರ್ಡ್‌ ತಿದ್ದುಪಡಿಗೆ ಬೇಕಾಗುವ ದಾಖಲೆಗಳು: ಬಿಪಿಎಲ್ ಕಾರ್ಡ್‌ ರದ್ದಾಗಿದ್ದರೆ ಅಥವಾ ತಿದ್ದುಪಡಿ ಮಾಡಿಸಿಕೊಳ್ಳಬೇಕಾದರೆ, ಕೆಲವು ಅಗತ್ಯ ದಾಖಲೆಗಳ ಅವಶ್ಯಕತೆ ಇದೆ. ಅದರಲ್ಲಿ ಮುಖ್ಯವಾಗಿ ನಿಮ್ಮ ರೇಷನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಸೇರಿದೆ. ಅಲ್ಲದೇ ನಿಮ್ಮ ಆದಾಯದ ಬಗ್ಗೆ ಮಾಹಿತಿ ಹಂಚಿಕೊಳ್ಳಬೇಕು. ಒಂದೊಮ್ಮೆ ನೀವು ಬ್ಯಾಂಕ್‌ನಿಂದ ಸಾಲ ಪಡೆದುಕೊಂಡಿದ್ದರೆ, ಅದರ ದಾಖಲೆ (ರಿಸಿಪ್ಟ್‌)ಕೊಡಬೇಕಾಗುತ್ತದೆ. ನಿಮ್ಮ ಬಿಪಿಎಲ್ ಕಾರ್ಡ್‌ ರದ್ದಾಗಿದ್ದರೆ ಇಂದೇ ಅದನ್ನು ಸರಿಪಡಿಸಿಕೊಳ್ಳಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+