Ration Card: ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ: ಬೇಕಾಗುವ ದಾಖಲೆಗಳೇನು?
Ration Card: ಪ್ರಮುಖ ದಾಖಲೆಗಳಲ್ಲಿ ಪಡಿತರ ಚೀಟಿ ಕೂಡ ಒಂದಾಗಿದೆ. ಇದು ಬರೀ ರೇಷನ್ ಪಡೆಯಲು ಅಷ್ಟೇ ಅಲ್ಲದೆ, ಯಾವುದೇ ಸರ್ಕಾರಿ ಸೌಲಭ್ಯಗಳಿಗೆ ಅರ್ಜಿ ಸಲ್ಲಿಸಲು ಅತ್ಯಗತ್ಯವಾಗಿ ಬೇಕೇಬೇಕಾಗುತ್ತದೆ. ಇದರಲ್ಲಿ ಯಾವುದೇ ತಪ್ಪುಗಳಿದ್ದಲ್ಲಿ ಪರಿಗಣನೆಗೆ ತೆಗೆದುಕೊಳ್ಳುವುದಿಲ್ಲ. ಆದ್ದರಿಂದ ಇದೀಗ ಕಾರ್ಡ್ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ. ಹಾಗಾದ್ರೆ, ಏನೆಲ್ಲಾ ತಿದ್ದುಪಡಿ ಮಾಡಿಸಬಹುದು ಹಾಗೂ ಬೇಕಾಗುವ ದಾಖಲೆಗಳೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಸದ್ಯ ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಿ ಎಪಿಎಲ್‌ಗೆ ವರ್ಗಾಹಿಸುವ ಕಾರ್ಯವನ್ನು ಆಹಾರ ಇಲಾಖೆ ಮುಂದುವರೆಸಿದೆ. ಇದರ ಬೆನ್ನಲ್ಲೇ ಅರ್ಹರ ಬಳಿಯ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಲಾಗಿದೆ ಎನ್ನುವ ಆರೋಪಗಳು ಸಹ ಕೇಳಿಬಂದಿವೆ. ಇದಕ್ಕೂ ಕೂಡ ಸರ್ಕಾರ ಸ್ಪಷ್ಟನೆ ನೀಡುವ ಮೂಲಕ ಗೊಂದಲಕ್ಕೆ ತೆರೆ ಎಳೆಯುವ ಕೆಲಸ ಮಾಡಿದೆ.
ಯಾರೆಲ್ಲಾ ಅರ್ಹರ ಬಳಿಯ ಬಿಪಿಎಲ್ ಕಾರ್ಡ್ ರದ್ದಾಗಿದೆಯೋ ಅಂತಹವರು ತಾಲ್ಲೂಕಿನ ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ. ಈ ವೇಳೆ ಒಂದು ವೇಳೆ ಅರ್ಹರೆಂದು ಸಾಬೀತಾದ್ರೆ ಮಾತ್ರ ಮತ್ತೆ ಬಿಪಿಎಲ್ ಕಾರ್ಡ್‌ಗೆ ಶಿಫ್ಟ್ ಮಾಡಲಾಗುತ್ತದೆ ಅಂತಲೂ ತಿಳಿಸಿತ್ತು. ಈ ನಡುವೆಯೇ ಇದೀಗ ಎಲ್ಲಾ ಕಾರ್ಡುದಾರರಿಗೆ ಗುಡ್ ನ್ಯೂಸ್‌ವೊಂದು ಇದೆ. ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ.

ಎಲ್ಲೆಲ್ಲಿ ಅರ್ಜಿ ಸಲ್ಲಿಸಬಹುದು?
* ಬೆಂಗಳೂರು ಒನ್
* ಗ್ರಾಮ ಒನ್
* ಸೈಬರ್ ಸೆಂಟರ್
ನೀವು ಒಂದು ವೇಳೆ ಬೆಂಗಳೂರಿನವರಾಗಿದ್ದರೆ, ಬೆಂಗಳೂರಿನಲ್ಲಿ, ಗ್ರಾಮದವರು ಆಗಿದ್ದರೆ, ಗ್ರಾಮ ಒನ್ ಅಥವಾ ಸೈಬರ್ ಸೆಂಟರ್‌ಗಳಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದು. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ http://ahara.kar.nic.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ತಿದ್ದುಪಡಿ ಪ್ರಕ್ರಿಯೆಗೆ ಯಾವೆಲ್ಲಾ ದಾಖಲೆಗಳು ಬೇಕು ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.
ಏನೆಲ್ಲಾ ತಿದ್ದುಪಡಿಗೆ ಮಾಡಿಸಬಹುದು?
* ಹೆಸರು ತಿದ್ದುಪಡಿ
* ಹೆಸರು ಸೇರ್ಪಡೆ
* ಹೆಸರು ತೆಗೆದುಹಾಕುವಿಕೆ
* ವಿಳಾಸ ಬದಲಾವಣೆ
* ಫೋಟೋ ಬದಲಾವಣೆ
* ಕುಟುಂಬ ಮುಖ್ಯಸ್ಥರ ಬದಲಾವಣೆ
* ನ್ಯಾಯಬೆಲೆ ಅಂಗಡಿ ಬದಲಾವಣೆ
* ಫೋಟೋ ಬದಲಾವಣೆ
ಅರ್ಜಿ ಸಲ್ಲಿಕೆಗೆ ಬೇಕಾದ ದಾಖಲೆಗಳು
* ಎಲ್ಲಾ ಸದಸ್ಯರ ಆಧಾರ ಕಾರ್ಡ್
* ಸದಸ್ಯರ ಜಾತಿ ಮತ್ತು ಆದಾಯ 6 ವರ್ಷ ಮೆಲ್ಪಟ್ಟವರಿಗೆ
* ಜನನ ಪ್ರಮಾಣ ಪತ್ರ 6 ವರ್ಷದ ಒಳಗಿನ ಮಕ್ಕಳಿದ್ದರೆ
ಪತ್ನಿ ಹೆಸರು ಸೇರ್ಪಡೆಗೆ ಬೇಕಾಗುವ ದಾಖಲೆಗಳು
* ಆಧಾರ್ ಕಾರ್ಡ್
* ಮದುವೆ ಪ್ರಮಾಣ ಪತ್ರ
* ಪೋಷಕರ ಪಡಿತರ ಚೀಟಿ
ಮಗುವಿನ ಹೆಸರು ಸೇರ್ಪಡೆಗೆ ಬೇಕಾದ ದಾಖಲೆಗಳು
* ಮಗುವಿನ ಜನನ ಪ್ರಮಾಣಪತ್ರ
* ಪೋಷಕರ ಆಧಾರ್ ಕಾರ್ಡ್
ಅರ್ಜಿ ಸಲ್ಲಿಸುವ ವಿಧಾನಗಳು
* ಅಧಿಕೃತ ವೆಬ್ ಸೈಟ್ https://ahara.kar.nic.in/homeಗೆ ಭೇಟಿ ನೀಡಿ
* ಮುಖ್ಯ ಪುಟದಲ್ಲಿ ಇ-ಸೇವೆಗಳ ಮೇಲೆ ಕ್ಲಿಕ್ ಮಾಡಿ
* ತಿದ್ದುಪಡಿ/ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ
* ಹೊಸ ಪೇಜ್‌ನಲ್ಲಿ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಯನ್ನ ಭರ್ತಿ ಮಾಡಿ
* ಅಗತ್ಯ ದಾಖಲೆಗಳ ಸ್ಕ್ಯಾನ್ ಪ್ರತಿಯನ್ನು ಅಪ್ಲೋಡ್ ಮಾಡಿ ಫಾರ್ಮ್ ಸಲ್ಲಿಸಿ (ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ)
* ಅರ್ಜಿ ಸಲ್ಲಿಕೆ ವೇಳೆ ಎಲ್ಲಾ ದಾಖಲಾತಿಗಳು ಸರಿಯಾಗಿದ್ದರೆ, ನಿಮ್ಮ ಮನಗೆ ಅಪ್ಡೇಟ್ ಆಗಿರುವ ಹೊಸ ಪಡಿತರ ಚೀಟಿ ಬರಲಿದೆ.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications