Ration Card: ಬಿಪಿಎಲ್‌ ಪಡಿತರ ಚೀಟಿದಾರರಿಗೆ ಅಕ್ಕಿ ಕಡಿತದ ಮಹತ್ವದ ಅಪ್ಡೇಟ್‌

Ration Card: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದು, ಇವುಗಳಲ್ಲಿ ಅನ್ನಭಾಗ್ಯ ಯೋಜನೆ ಕೂಡ ಒಂದಾಗಿದೆ. ಇದರಡಿಯಲ್ಲಿ ಫಲಾನುಭವಿ ಕುಟುಂಬದ ಪ್ರತಿ ಸದಸ್ಯರಿಗೆ ತಿಂಗಳಿಗೆ ತಲಾ 10 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುತ್ತಿತ್ತು. ಆದರೆ, ಇದೀಗ ಇದರಲ್ಲಿ ತುಸು ಬದಲಾವಣೆ ಮಾಡಲಾಗಿದ್ದು, ಇದಕ್ಕೆ ವ್ಯಾಪಕ ಆಕ್ರೋಶಗಳು ಭಗಿಲೆದ್ದಿವೆ. ಈಗ ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಹತ್ವದ ಮಾಹಿತಿಯೊಂದನ್ನು ನೀಡಿದ್ದಾರೆ. ಹಾಗಾದ್ರೆ ಅದೇನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಸದ್ಯ ಇದೀಗ ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್‌ ಕಾರ್ಡ್‌ಗಳ ಪರಿಶೀಲನೆಗೆ ಸರ್ಕಾರ ಮುಂದಾಗಿದೆ. ಬಳಿಕ ಅನರ್ಹ ಎಂದು ತಿಳಿದ ಕೂಡಲೇ ಅಂತಹವರ ಬಳಿಯ ಬಿಪಿಎಲ್‌ ಪಡಿತರ ಚೀಟಿಯನ್ನು ರದ್ದುಪಡಿಸಿ ಎಪಿಎಲ್‌ಗೆ ವರ್ಗಾವಣೆ ಮಾಡುವ ಕೆಲಸವನ್ನು ಮುಂದುವರೆಸಿದೆ.

Ration Card DK Shivakumar Clarification on State Govt Reduces Free Rice Under Anna Bhagya

ಸಾಮಾನ್ಯವಾಗಿ ಬಿಪಿಎಲ್ ಪಡಿತರ ಚೀಟಿಯನ್ನು ಬಡತನ ರೇಖೆಗಿಂತ ಕೆಳಗಿರುವವರಿಗೆ ನೀಡಲಾಗುತ್ತದೆ. ಆದರೆ, ರಾಜ್ಯದಲ್ಲಿ ಅನರ್ಹರು ಸಹ ಯಾರಿಗೂ ಗೊತ್ತಿಲ್ಲದೆ, ನಕಲಿ ದಾಖಲೆ ಸೃಷ್ಟಿಸಿ ಈ ಕಾರ್ಡ್‌ ಪಡೆದುಕೊಂಡಿದ್ದು, ಈ ಮೂಲಕ ಬಡವರ ಅನ್ನ ಹಾಗೂ ಸೌಲಭ್ಯಗಳನ್ನು ಕಿತ್ತುಕೊಳ್ಳುತ್ತಿದ್ದರು. ಇದೀಗ ಇದಕ್ಕೆಲ್ಲ ಕಡಿವಾಣ ಹಾಕುವ ಕಾರ್ಯವನ್ನು ರಾಜ್ಯ ಸರ್ಕಾರ ಕೈಗೊಂಡಿದೆ.

ಈ ನಡುವೆಯೇ ಇದೀಗ ಸರ್ಕಾರ ಹೊಸ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಇಷ್ಟು ದಿನ ಅನ್ನಭಾಗ್ಯ ಯೋಜನೆಯಡಿಯಲ್ಲಿ ನೀಡಲಾಗುತ್ತಿದ್ದ 10 ಕೆಜಿ ಅಕ್ಕಿಯನ್ನು ಇದೀಗ 5 ಕೆಜಿ ಇಳಿಕೆ ಮಾಡಲು ನಿರ್ಧಾರ ಮಾಡಿದೆ. ಈ ನಿರ್ಧಾರದ ವಿರುದ್ಧ ವ್ಯಾಪಕ ಆಕ್ರೋಶ ಭುಗಿಲೆದ್ದಿದ್ದವು. ಇದಕ್ಕೆ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಅವರು ಯಾಕೆ ಎನ್ನುವ ಮಹತ್ವದ ಸ್ಪಷ್ಟನೆಯೊಂದನ್ನು ಟ್ವೀಟ್‌ ಮೂಲಕ ನೀಡಿದ್ದಾರೆ.

ಡಿಕೆ ಶಿವಕುಮಾರ್ ಹೇಳಿದ್ದೇನು?: "ಹಸಿವುಮುಕ್ತ ಕರ್ನಾಟಕ ನಿರ್ಮಾಣವೇ ನಮ್ಮ ಮುಖ್ಯ ಉದ್ದೇಶ ಆಗಿದೆ. ಆದ್ದರಿಂದ ಅನ್ನಭಾಗ್ಯದ ಅಕ್ಕಿಯ ಜೊತೆಗೆ ಇಂದಿರಾ ಕಿಟ್‌ ವಿತರಿಸಲು ನಮ್ಮ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಅನ್ನಭಾಗ್ಯದ 10 ಕೆಜಿಯ ಅಕ್ಕಿಯ ಬದಲು ಇನ್ಮುಂದೆ 5 ಕೆಜಿ ಅಕ್ಕಿ ಕೊಟ್ಟು, ಇನ್ನುಳಿದ 5 ಕೆಜಿಯ ಲೆಕ್ಕದಲ್ಲಿ ದಿನಸಿ ಪದಾರ್ಥಗಳನ್ನು ವಿತರಣೆ ಮಾಡಲಿದ್ದೇವೆ. ಯಾರೊಬ್ಬರೂ ಹಸಿವಿನಿಂದ ಇರಬಾರದು ಎಂಬುದೇ ನಮ್ಮ ಸರ್ಕಾರದ ಕಾಳಜಿಯಾಗಿದೆ," ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ಗಮನಿಸಲೇಬೇಕಾದ ಪ್ರಮುಖ ಅಂಶಗಳು

* ಬಿಪಿಎಲ್‌ ಹಾಗೂ ಅಂತ್ಯೋದ್ಯ ಪಡಿತರ ಚೀಟಿ ಹೊಂದಿರುವವರಿಗೆ ಇಂದಿರಾ ಕಿಟ್‌ ವಿತರಣೆ ಮಾಲಾಗುತ್ತದೆ.

* 10 ಕೆ.ಜಿ ಅಕ್ಕಿ ಬದಲು 5 ಕೆ.ಜಿ ಅಕ್ಕಿ ಹಾಗೂ ಇಂದಿರಾ ಕಿಟ್‌ನಲ್ಲಿ 1 ಕೆ.ಜಿ ತೊಗರಿ ಬೇಳೆ, 1 ಕೆ.ಜಿ ಹೆಸರುಕಾಳು, 1 ಲೀಟರ್ ಅಡುಗೆ ಎಣ್ಣೆ, 1 ಕೆ.ಜಿ ಸಕ್ಕರೆ, 1 ಕೆ.ಜಿ ಉಪ್ಪು ಇರಲಿದೆ.

* ಒಬ್ಬರು ಅಥವಾ ಇಬ್ಬರು ಇರುವ ಕುಟುಂಬಕ್ಕೆ ತಲಾ ಅರ್ಧ ಕೆ.ಜಿಯಂತೆ 2.5 ಕೆ.ಜಿ ಕಿಟ್‌ ವಿತರಣೆ ಮಾಡಲಾಗುತ್ತದೆ.

* ಮೂವರು ಅಥವಾ ನಾಲ್ವರು ಇರುವ ಕುಟುಂಬಕ್ಕೆ 5 ಕೆ.ಜಿ ತೂಕದ ಕಿಟ್‌ ವಿತರಿಸಲಾಗುತ್ತದೆ.

* ಐವರು ಅಥವಾ ಅದಕ್ಕಿಂತ ಹೆಚ್ಚು ಜನರು ಇರುವ ಕುಟುಂಬಕ್ಕೆ ತಲಾ 1.5 ಕೆ.ಜಿಯಂತೆ 7.5 ಕೆ.ಜಿಯ ಆಹಾರ ಕಿಟ್‌ ವಿತರಣೆ ಮಾಡಲಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ.

ಇಂದಿರಾ ಕಿಟ್‌ನಲ್ಲಿ ಏನೆಲ್ಲಾ ಇರಲಿದೆ?

* 1 ಕೆ.ಜಿ ತೊಗರಿ ಬೇಳೆ
* 1 ಕೆ.ಜಿ ಹೆಸರುಕಾಳು
* 1 ಲೀಟರ್ ಅಡುಗೆ ಎಣ್ಣೆ
* 1 ಕೆ.ಜಿ ಸಕ್ಕರೆ
* 1 ಕೆ.ಜಿ ಉಪ್ಪು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+